ಶಿಕ್ಷಣದ ಜತೆ ಬದುಕುವ ಕೌಶಲ್ಯ ಬೆಳೆಸಿಕೊಳ್ಳಿ; ಡಾ| ಫಕೀರಪ್ಪ
ಪರಿಶ್ರಮದ ಅಧ್ಯಯನ ವಿದ್ಯಾರ್ಥಿ ಭವಿಷ್ಯವನ್ನು ರೂಪಿಸುತ್ತದೆ.
Team Udayavani, Mar 30, 2022, 6:24 PM IST
ಕುಕನೂರು: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಬದುಕುವ ಕೌಶಲ್ಯ ಬೆಳೆಸಿಕೊಳ್ಳಬೇಕು ಎಂದು ಉಪನ್ಯಾಸಕ ಡಾ| ಫಕೀರಪ್ಪ ವಜ್ರಬಂಡಿ ಹೇಳಿದರು. ಪಟ್ಟಣದ ಗುದೆಪ್ಪನ ಮಠದಲ್ಲಿರುವ ಕೆಎಲ್‌ಇ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಪಿಯು ವಿದ್ಯಾರ್ಥಿಗಳ ಸ್ವಾಗತ-ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ನಾಗಲೋಟದಲ್ಲಿ ಮುನ್ನುಗ್ಗುತ್ತಿರುವ ಇಂದಿನ ಜಗತ್ತಿನಲ್ಲಿ ಬರೀ ಜ್ಞಾನಕ್ಕಾಗಿ ಶಿಕ್ಷಣ ಪಡೆದರೆ ಸಾಲದು, ಗ್ರಾಮೀಣ ಭಾಗದ ಆರ್ಥಿಕತೆ ಸುಧಾರಣೆ ನಿಟ್ಟಿನಲ್ಲಿ ಬದುಕುವ ಕಲೆಯನ್ನು ಬೆಳೆಸಿಕೊಳ್ಳಬೇಕು. ಪರಿಶ್ರಮದ ಅಧ್ಯಯನ ವಿದ್ಯಾರ್ಥಿ ಭವಿಷ್ಯವನ್ನು ರೂಪಿಸುತ್ತದೆ. ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಸಲಹೆ ನೀಡಿದರು. ಪ್ರಾಚಾರ್ಯ ಎಸ್.ಸಿ. ಪಾಟೀಲ್ ಮಾತನಾಡಿ, 2021ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ ಬಿಡಿಎಸ್ ಕೋರ್ಸ್‌ಗೆ ಆಯ್ಕೆಯಾದ ವಿದ್ಯಾರ್ಥಿನಿ ಪವಿತ್ರಾ ಕಟ್ಟಿಮನಿ ಸಾಧನೆ ಇತರೆ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ ಎಂದರು.
ಯಂಕಣ್ಣ ಯರಾಶಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿವರ್ಷ ಉತ್ತಮ ಸಾಧನೆಯಯಲ್ಲಿ ಸಾಗುತ್ತಿರುವ ಕೆಎಲ್‌ಇ ಶಿಕ್ಷಣ ಸಂಸ್ಥೆಯು ಈ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಇದಕ್ಕೆ ಕಾರಣಿಕರ್ತರಾದ ಉಪನ್ಯಾಸಕ ಪಾತ್ರ ಹಿರಿದು ಎಂದರು.
ಇದೇ ಸಂದರ್ಭದಲ್ಲಿ 2021-22ನೇ ಸಾಲಿನಲ್ಲಿ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಉಪನ್ಯಾಸಕರಾದ ಎಸ್.ಎಸ್. ರಾಜೂರು, ಪ್ರಕಾಶ ಗಡ್ಡದ, ಶರಣಪ್ಪ ಉಮಚಗಿ, ನೇತ್ರಾವತಿ ಉಳ್ಳಾಗಡ್ಡಿ, ಬೀರಪ್ಪ ಬಿಸರಳ್ಳಿ, ಪುರುಷೋತ್ತಮ ಪೂಜಾರ, ಶರಣಪ್ಪ ರಡ್ಡೆರ, ಶೈಲಶ್ರೀ ಹಿರೇಮಠ ಹಾಗೂ ಇತರರಿದ್ದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.