ಕೇಂದ್ರ ಸರಕಾರಿ ನೌಕರರ ತುಟ್ಟಿಭತ್ತೆ ಶೇ. 3 ಏರಿಕೆ
Team Udayavani, Mar 31, 2022, 7:15 AM IST
ಹೊಸದಿಲ್ಲಿ: ಕೇಂದ್ರ ಸರಕಾರಿ ನೌಕರರ ತುಟ್ಟಿ ಭತ್ತೆಯನ್ನು ಶೇ.3ರಷ್ಟು ಏರಿಕೆ ಮಾಡಲು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಇದರಿಂದಾಗಿ 1.16 ಕೋಟಿ ಮಂದಿ ಕೇಂದ್ರ ಸರಕಾರಿ ನೌಕರರು ಮತ್ತು ನಿವೃತ್ತ ಉದ್ಯೋಗಿಗಳಿಗೆ ಅನುಕೂಲವಾಗಲಿದೆ.
ಹೆಚ್ಚುವರಿ ತುಟ್ಟಿಭತ್ತೆಯು ಪ್ರಸಕ್ತ ವರ್ಷದ ಜ.1ರಿಂದಲೇ ಪೂರ್ವಾನ್ವಯವಾಗಲಿದೆ.
ಸದ್ಯ ಮೂಲ ವೇತನದ ಶೇ.31ರಷ್ಟು ಮೊತ್ತ ವನ್ನು ತುಟ್ಟಿಭತ್ತೆ ಅಥವಾ ಪರಿಹಾರ ವಾಗಿ ನೀಡಲಾಗುತ್ತಿದೆ.
ಇದನ್ನೂ ಓದಿ:ವಿಧಾನ ಮಂಡಲ ಅಧಿವೇಶನ ಅನಿರ್ಧಿಷ್ಠಾವಧಿಗೆ ಮುಂದೂಡಿಕೆ
ಹೊಸ ನಿರ್ಧಾರದಿಂದಾಗಿ ಡಿ.ಎ. ಪ್ರಮಾಣ ಶೇ.34ಕ್ಕೆ ಏರಿಕೆಯಾಗಿದೆ. ಕೇಂದ್ರ ಸರಕಾರಿ ನೌಕರರ ವೇತನ ಪರಿಷ್ಕರಿಸಬೇಕು ಎಂದು ಏಳನೇ ವೇತನ ಆಯೋಗ ನೀಡಿದ ಶಿಫಾರಸಿಗೆ ಅನುಗುಣವಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ಈ ನಿರ್ಧಾರದಿಂದಾಗಿ ಸರಕಾರದ ಬೊಕ್ಕಸಕ್ಕೆ 9,544.50 ಕೋ. ರೂ. ಹೆಚ್ಚುವರಿ ಮೊತ್ತ ವೆಚ್ಚವಾಗಲಿದೆ. ಕಳೆದ ಅಕ್ಟೋಬರ್ನಲ್ಲಿ ಶೇ.3 ಡಿ.ಎ.ಏರಿಕೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.