ಸರ್ವರ್‌ ಸಮಸ್ಯೆಯಿಂದ ಜೋಳ ಖರೀದಿ ಸ್ಥಗಿತ

ಕಾದು ಕಾದು ಸುಸ್ತಾದ ರೈತರು

Team Udayavani, Mar 31, 2022, 2:43 PM IST

corn

ಸಿರುಗುಪ್ಪ: ತಾಲೂಕಿನಲ್ಲಿ ರೈತರು ಬೆಳೆದಿರುವ ಜೋಳವನ್ನು ಖರೀದಿಸಲು ನಗರದ ಎಪಿಎಂಸಿ ಆವರಣದಲ್ಲಿ ತೆರೆದಿರುವ ಜೋಳ ಖರೀದಿ ಕೇಂದ್ರದಲ್ಲಿ ಸರ್ವರ್‌ ಸಮಸ್ಯೆಯಿಂದಾಗಿ ಕಳೆದ ಒಂದು ವಾರದಿಂದ ಜೋಳ ಮಾರಾಟ ಮಾಡಲು ಬಂದ ರೈತರು ಖರೀದಿ ಕೇಂದ್ರದ ಮುಂದೆ ಸರ್ವರ್‌ ಬರುತ್ತದೆ ಎನ್ನುವ ನಿರೀಕ್ಷೆ ಇಟ್ಟುಕೊಂಡು ಕಾಯುತ್ತಾ ಕುಳಿತು ಸುಸ್ತಾಗುತ್ತಿದ್ದಾರೆ ಹೊರತು ಸರ್ವರ್‌ ಮಾತ್ರ ಬರುತ್ತಿಲ್ಲ.

ನಗರದಲ್ಲಿ ಜನವರಿ 24ರಿಂದ ಖರೀದಿ ಕೇಂದ್ರ ಪ್ರಾರಂಭವಾಗಿದ್ದು, ಮಾರ್ಚ್‌ 20ರಿಂದ ಜೋಳ ಖರೀದಿ ಕಾರ್ಯ ಆರಂಭವಾಗಿದ್ದು, ಮಾರ್ಚ್‌ 31ರ ವರೆಗೆ ರೈತರು ತಮ್ಮ ಜೋಳವನ್ನು ಮಾರಾಟ ಮಾಡಲು ಸರ್ಕಾರ ಅವಕಾಶ ನೀಡಿದೆ. ಆದರೆ ಮಾರ್ಚ್‌ 22ರಿಂದ ಖರೀದಿ ಕೇಂದ್ರದಲ್ಲಿ ಸರ್ವರ್‌ ಸಮಸ್ಯೆ ಉಂಟಾಗಿರುವುದರಿಂದ ಜೋಳ ಮಾರಾಟವಾಗದೆ, ರೈತರು ಖರೀದಿ ಕೇಂದ್ರದ ಮುಂದೆಯೇ ಬೆಳಗಿನಿಂದ ಸಂಜೆಯವರೆಗೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ತಾಲೂಕಿನಲ್ಲಿ ಸುಮಾರು 4860 ಹೆಕ್ಟರ್‌ ಪ್ರದೇಶದಲ್ಲಿ ಜೋಳ ಬಿತ್ತನೆ ಮಾಡಿದ್ದು, ಜೋಳ ಖರೀದಿಗಾಗಿ 3295 ರೈತರು ನೋಂದಣಿ ಮಾಡಿಸಿದ್ದು, 1,29,220.76 ಕ್ವಿಂಟಾಲ್‌ ಜೋಳ ಖರೀದಿಸುವ ಗುರಿಯನ್ನು ಹೊಂದಲಾಗಿದೆ. 33611.50 ಕ್ವಿಂಟಲ್‌ ಜೋಳವನ್ನು ಖರೀದಿ ಕೇಂದ್ರದಲ್ಲಿ ರೈತರಿಂದ ಖರೀದಿಸುವ ಗುರಿ ಇಟ್ಟುಕೊಳ್ಳಲಾಗಿದ್ದು, ಸುಮಾರು 800ಕ್ಕೂ ಹೆಚ್ಚು ರೈತರು ಜೋಳ ಖರೀದಿ ಕೇಂದ್ರದ ಮುಂದೆ ಜೋಳ ಮಾರಾಟವು ಇರುವ ಕೆಲಸ ಕಾರ್ಯಗಳನ್ನು ಬದಿಗೊತ್ತಿ ರೈತರು ಖರೀದಿ ಕೇಂದ್ರಕ್ಕೆ ಬರುತ್ತಿದ್ದಾರೆ. ಆದರೆ ಸರ್ವರ್‌ ಇಂದು ಬರುತ್ತದೆ, ನಾಳೆ ಬರುತ್ತದೆ, ಸರ್ವರ್‌ ನಮ್ಮ ಕೈಯಲ್ಲಿಲ್ಲ ಎಂದು ಅ ಧಿಕಾರಿಗಳು ಸಬೂಬು ಹೇಳುತ್ತಾ ರೈತರನ್ನು ಸಾಗಹಾಕುತ್ತಿದ್ದಾರೆ. ಸರ್ವರ್‌ ಬರುತ್ತದೆ ಎನ್ನುವ ನಿರೀಕ್ಷೆಯಲ್ಲಿಯೇ ರೈತರು ಖರೀದಿ ಕೇಂದ್ರದ ಮುಂದೆ ಕಾದು ಕುಳಿತುಕೊಂಡಿದ್ದಾರೆ.

ನಾವು ಜೋಳದ ಬೆಳೆಯನ್ನು ಬೆಳೆದಿದ್ದು, ಎರಡು ಎಕರೆಗೆ ಇಪ್ಪತ್ತು ಕ್ವಿಂಟಲಿಗೂ ಅಧಿಕ ಇಳುವರಿ ಬಂದಿದ್ದು ಮಾರಾಟಕ್ಕೆ ಮಾರ್ಚ್‌ 31 ಕೊನೆಯದಿನವಾಗಿದೆ. ಆದರೆ ಮಾ. 22 ರಿಂದ ಸರ್ವರ್‌ ಬರುತ್ತಿಲ್ಲವೆಂದು ಅಧಿ ಕಾರಿಗಳು ಹೇಳುತ್ತಿದ್ದಾರೆ. ನಾವು ಇರುವ ಕೆಲಸ ಕಾರ್ಯಗಳನ್ನು ಬಿಟ್ಟು ಜೋಳ ಮಾರಾಟಕ್ಕಾಗಿ ಖರೀದಿ ಕೇಂದ್ರಕ್ಕೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಸರ್ವರ್‌ ಸಮಸ್ಯೆಯನ್ನು ಪರಿಹರಿಸಿ ಜೋಳ ಖರೀದಿಗೆ ಅನುವು ಮಾಡಿಕೊಡಬೇಕು. ನೆಹರು, ಬಸಪ್ಪ, ರೈತ

ಮಾ. 22ರಿಂದ ಸರ್ವರ್‌ ಸಮಸ್ಯೆ ಉಂಟಾಗಿರುವುದರಿಂದ ಜೋಳ ಖರೀದಿ ಮಾಡಲು ಅಡಚಣೆ ಉಂಟಾಗಿದೆ. ಸರ್ವರ್‌ ಸಮಸ್ಯೆ ಬಗ್ಗೆ ನಮ್ಮ ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಸುಮಾರು 800ಕ್ಕೂ ಹೆಚ್ಚು ರೈತರಿಂದ ಜೋಳ ಖರೀದಿ ಮಾಡಬೇಕಾಗಿದೆ. ಬಸವರಾಜ್‌, ಪಡಿತರ ಮತ್ತು ಆಹಾರ ನಾಗರಿಕ ಸರಬರಾಜು ಇಲಾಖೆಯ ಗೋದಾಮು ವ್ಯವಸ್ಥಾಪಕ

– ಆರ್‌. ಬಸವರೆಡ್ಡಿ ಕರೂರು

ಟಾಪ್ ನ್ಯೂಸ್

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.