ಎಸ್ಸಿ, ಎಸ್ಟಿ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ ತಲುಪಿಸಿ
ಪೊಲೀಸ್ ಇಲಾಖೆಯಿಂದ ನೀಡಲಾಗಿರುವ 51 ಜನ ಸಂತ್ರಸ್ತರಿಗೆ 70.98 ಲಕ್ಷ ರೂ. ಪರಿಹಾರ ಧನ ಮಂಜೂರು
Team Udayavani, Mar 31, 2022, 5:34 PM IST
ದೇವನಹಳ್ಳಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸರ್ಕಾರ ಜಾರಿಗೆ ತಂದಿರುವ ಸೌಲಭ್ಯಗಳನ್ನು ತಲುಪಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಶೀಘ್ರ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ತಿಳಿಸಿದರು.
ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ 1ನೇ ತ್ರೆçಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲೆ ದೌರ್ಜನ್ಯ ಪ್ರಕರಣಗಳು ನಡೆದ 24 ಗಂಟೆಗಳಲ್ಲಿ ಪ್ರಕರಣ ದಾಖಲು ಮಾಡುವುದೊಂದಿಗೆ, ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ, ಕ್ರಮ ಕೈಗೊಂಡು ಪರಿಹಾರ ಒದಗಿಸುವ ಮೂಲಕ ಶೀಘ್ರ ಇತ್ಯರ್ಥಗೊಳಿಸಬೇಕು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಲವೊಂದು ಗ್ರಾಮಗಳನ್ನು ಹೊರತುಪಡಿಸಿ ಎಲ್ಲಾ ಗ್ರಾಮಗಳಿಗೆ ಸ್ಮಶಾನಕ್ಕಾಗಿ ಭೂಮಿ ಮಂಜೂರು ಮಾಡಲಾಗಿದೆ. ಇನ್ನುಳಿದ ಗ್ರಾಮಗಳಿಗೂ ಶೀಘ್ರವಾಗಿ ಸ್ಮಶಾನ ಭೂಮಿ ಮಂಜೂರು ಮಾಡಲಾಗುವುದು ಎಂದು ಹೇಳಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡದ ಸಂಘಟನೆಗಳ ಹೋರಾಟಗಾರರನ್ನು ರೌಡಿಶೀಟರ್ ಪಟ್ಟಿಗೆ ಸೇರಿಸಲಾಗಿದ್ದು, ಸನ್ನಡತೆ ಆಧಾರದಲ್ಲಿರುವವರ ಹೆಸರು ಗಳನ್ನು ಪುನರ್ ಪರಿಶೀಲನೆ ನಡೆಸಿ ರೌಡಿಶೀಟರ್ ಪಟ್ಟಿಯಿಂದ ಕೈಬಿಡಬೇಕೆಂದು ಜಿಲ್ಲಾ ಜಾಗೃತಿ ಸಮಿತಿ ಸದಸ್ಯರು ಒತ್ತಾಯಿಸಿದಾಗ, ಈ ಕುರಿತು ಪರಿಶೀಲಿಸಿ ಶೀಘ್ರ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಯವರು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರ ಜಮೀನುಗಳಿಗೆ ರಸ್ತೆ ಹಾಗೂ ಕಾಲೋನಿಗಳ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಕೈಗೊಂಡು ಶೀಘ್ರವಾಗಿ ಪೂರ್ಣಗೊಳಿಸಬೇಕು. ಮನೆಗಳನ್ನು ಕಳೆದುಕೊಂಡಿರು ವವರಿಗೆ ವಿವಿಧ ವಸತಿ ಯೋಜನೆಗಳಡಿ ಮನೆ ಅಥವಾ ಹಕ್ಕುಪತ್ರ ವಿತರಣೆಗೆ ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದರು. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಗಂಗಾ ಕಲ್ಯಾಣ ಯೋಜನೆಯಡಿ ಕೊರೆದಿರುವ ಕೊಳವೆ ಬಾವಿಗಳಿಗೆ ಪಂಪು ಮೋಟಾರ್ ಹಾಗೂ ಇತರೆ ಸಾಮಗ್ರಿಗಳನ್ನು ಸ್ಥಳೀಯ ಶಾಸಕರಿಂದ ವಿತರಿಸಲು ಕ್ರಮವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗೆ ನಿರ್ದೇಶಿಸಿದರು.
ವಿವಿಧ ಯೋಜನೆಗಳಡಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ನೀಡಲಾಗುವ ಸಾಲ, ಸಹಾಯಧನಕ್ಕೆ ಸಂಬಂಧಿಸಿದ ಅರ್ಜಿಗಳು ಬ್ಯಾಂಕುಗಳಲ್ಲಿ ವಿಲೇವಾರಿ ಯಾಗದೇ ಉಳಿದಿದ್ದು, ಈ ಕುರಿತು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ ಮ್ಯಾನ್ಯುಯಲ್ ಸ್ಕ್ಯಾವೆಂಜ ರ್ಸ್‌ಗಳ ಸಮೀಕ್ಷೆ ನಡೆಸಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ ಮಾತನಾಡಿ, 2021ರ ಡಿಸೆಂಬರ್ ಮಾಹೆಯಿಂದ ಪ್ರಸಕ್ತ ಮಾಹೆಯವರೆಗೆ ಪೊಲೀಸ್ ಇಲಾಖೆಯಿಂದ ನೀಡಲಾಗಿರುವ 51 ಜನ ಸಂತ್ರಸ್ತರಿಗೆ 70.98 ಲಕ್ಷ ರೂ. ಪರಿಹಾರ ಧನ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.