ಹೋಟೆಲ್ ತಿಂಡಿ ಬೆಲೆಗಳ ಏರಿಕೆ; ಏ.4ಕ್ಕೆ ಅಂತಿಮ ನಿರ್ಧಾರ
Team Udayavani, Mar 31, 2022, 10:00 PM IST
ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಬೃಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಇದೀಗ ಏ.4ರಂದು ಸಂಘದ ಸಭೆ ನಡೆಸಿ ಬೆಲೆ ಏರಿಕೆ ಸಂಬಂಧ ಚರ್ಚೆ ನಡೆಸಲು ಮುಂದಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಘದ ಅಧ್ಯಕ್ಷ ಪಿ.ಸಿ.ರಾವ್, ಈಗಾಗಲೇ ಸರ್ಕಾರ ವಿದ್ಯುತ್, ಹಾಲಿನ ಬೆಲೆ ಏರಿಕೆಗೆ ಸಿದ್ಧತೆ ನಡೆಸಿದೆ. ಇದರ ಜತೆಗೆ ದಿನೇ ದಿನೆ ಇಂಧನ ಬೆಲೆಗಳಲ್ಲಿ ಏರಿಕೆ ಕಾಣುತ್ತಲೆ ಇದೆ. ಆ ಹಿನ್ನೆಲೆಯಲ್ಲಿ ಬೆಲೆ ಏರಿಕೆ ಮಾಡುವ ಚಿಂತನೆ ಇದೆ ಎಂದು ತಿಳಿಸಿದ್ದಾರೆ.
ಏಪ್ರಿಲ್ 1ರಿಂದ ಮತ್ತಷ್ಟು ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುವ ನಿರೀಕ್ಷೆ ಇದೆ. ಆ ಹಿನ್ನೆಲೆಯಲ್ಲಿ ಯಾವೆಲ್ಲ ಬೆಲೆಗಳಲ್ಲಿ ಹೆಚ್ಚಳವಾಗಿದೆ ಎಂಬುವುದನ್ನು ಗಮನಿಸಿ ಏ.4 ರಂದು ಸಂಜೆ ಸಂಘದ ಪದಾಧಿಕಾರಿಗಳ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಕೆಲವು ಪದಾರ್ಥಗಳ ಮೇಲೆ ಶೇ.10 ರಷ್ಟು ಬೆಲೆ ಏರಿಕೆ ಮಾಡುವ ನಿರೀಕ್ಷೆಯಿದೆ. ಆದರೆ ಇನ್ನೂ ಅಂತಿಮವಾಗಿಲ್ಲ.ಯಾವ ಯಾವ ಪದಾರ್ಥಗಳ ಮೇಲೆ ಎಷ್ಟೆಷ್ಟು ಬೆಲೆ ಹೆಚ್ಚಳ ಮಾಡಬೇಕು ಎಂಬುವುದರ ಕುರಿತು ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುಗದು ಎಂದು ಹೇಳಿದರು. ಒನ್ ಟೈಮ್ ಒನ್ ಲೆಸನ್ಸ್ ಸೇರಿದಂತೆ ಹೋಟೆಲ್ ಮಾಲೀಕರ ವಿವಿಧ ಬೇಡಿಕೆ ಈಡೇರಿಕೆ ಸಂಬಂಧ ಈಡೇರಿಕೆ ಸಂಬಂಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ದೆಹಲಿಯಲ್ಲಿ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ವೇಳೆ ಕೇಂದ್ರ ಸಚಿವರ ಹೋಟೆಲ್ ಉದ್ಯಮದ ಹಲವು ಸಮಸ್ಯೆಗಳ ಪರಿಹಾರಕ್ಕೆ ಸಕಾರತ್ಮಕ ಹೆಜ್ಜೆ ಇರಿಸಿದ್ದಾರೆ ಎಂದು ಪಿ.ಸಿ.ರಾವ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.