ಪಂಚಮಸಾಲಿ 2ಎ ಮೀಸಲಾತಿಗೆ ಹೊಸ ಗಡುವು
Team Udayavani, Mar 31, 2022, 10:30 PM IST
ಬೆಂಗಳೂರು: ಲಿಂಗಾಯತ ಪಂಚಮಸಾಲಿಗಳಿಗೆ 2ಎ ಮೀಸಲಾತಿ ಹೋರಾಟದ ನೇತೃತ್ವದ ವಹಿಸಿರುವ ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಮೀಸಲಾತಿ ಕಲ್ಪಿಸಲು ರಾಜ್ಯ ಸರಕಾರಕ್ಕೆ ಎ.14ರ ಅಂಬೇಡ್ಕರ್ ಜಯಂತಿಯ ಅಂತಿಮ ಗಡುವು ನೀಡಿದ್ದಾರೆ. ಅಷ್ಟರೊಳಗೆ ಮೀಸಲಾತಿ ಕಲ್ಪಿಸದಿದ್ದರೆ ಎ.21ರಂದು ಕೂಡಲಸಂಗಮದಲ್ಲಿ ಅಂತಿಮ ಹಂತದ ಹೋರಾಟ ನಡೆಸಲಾಗುತ್ತದೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಗುರುವಾರ ನಗರದಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಬಜೆಟ್ ಅಧಿವೇಶನದಲ್ಲಿಯೇ ಸರ್ಕಾರ ಮೀಸಲಾತಿ ಕಲ್ಪಿಸುವುದಾಗಿ ಮಾತು ನೀಡಿತ್ತು. ಆದರೆ, ಹಿಂದುಳಿದ ವರ್ಗದ ಆಯೋಗದಿಂದ ವರದಿ ತರಿಸಿಕೊಳ್ಳುವುದು ತಡವಾಗಿದೆ. ಮುಂದಿನ 15 ದಿನಗಳಲ್ಲಿ ಮೀಸಲಾತಿ ಕಲ್ಪಿಸುವುದಾಗಿ ಹೇಳಿದ್ದಾರೆ. ಸರ್ಕಾರ ವರದಿ ತರಿಸಿಕೊಳ್ಳುತ್ತೋ ಬಿಡುತ್ತೋ ಗೊತ್ತಿಲ್ಲ. ಇದು ಅಂತಿಮ ಹಂತದ ಗಡುವು ಎಮದು ಹೇಳಿದರು.
ಮೀಸಲಾತಿ ಅನುಷ್ಠಾನಕ್ಕಾಗಿ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಸಚಿವರಾದ ಸಿ.ಸಿ. ಪಾಟೀಲ್, ಶಂಕರಪಾಟೀಲ್ ಮುನೇನಕೊಪ್ಪ, ಶಾಸಕರಾದ ಬಸವನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ, ವಿಜಯಾನಂದ ಕಾಶಪ್ಪನವರ್ ಅವರನ್ನು ಒಳಗೊಂಡ 12 ಮಂದಿ ಸದಸ್ಯರ ಸಮಿತಿಯನ್ನು ರಚಿಸಲಾಗಿದೆ ಎಂದು ತಿಳಿಸಿದರು.
ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ರಾಷ್ಟ್ರೀಯ ಸ್ವಾಗತ ಸಮಿತಿ ಅಧ್ಯಕ್ಷ ಬಸವನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಪ್ರಮಾಣವನ್ನು ಶೇ.7.5ಕ್ಕೆ ಹೆಚ್ಚಿಸುವ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಂದಿನ 15 ದಿನಗಳಲ್ಲಿ ಪಂಚಮಸಾಲಿಗಳಿಗೆ ಮೀಸಲಾತಿ ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವರಾದ ವಿನಯ್ ಕುಲಕರ್ಣಿ, ಎ.ಬಿ. ಪಾಟೀಲ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
High Court: ಗುರು ರಾಘವೇಂದ್ರ ಬ್ಯಾಂಕ್ ಅಧ್ಯಕಗೆ ಜಾಮೀನು ನಿರಾಕರಣೆ
Arrested: ಬಿಹಾರದ ಬೆಡ್‌ಶೀಟ್ ಗ್ಯಾಂಗ್‌ನ 8 ಮಂದಿ ಸೆರೆ
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.