14 ವರ್ಷಗಳಿಂದ ವಿಮಾನ ನಿಲ್ದಾಣದಲ್ಲೇ ಈತನ ವಾಸ!
Team Udayavani, Apr 1, 2022, 6:50 AM IST
ನವದೆಹಲಿ: ಚೀನಾದ ಬೀಜಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14 ವರ್ಷಗಳಿಂದ ವಾಸ ಮಾಡುತ್ತಿರುವ ವ್ಯಕ್ತಿಯೊಬ್ಬರಿಗೆ ಈಗ ಮನೆಗೆ ಹೋಗಲು ಮನಸ್ಸೇ ಇಲ್ಲ! ವೀ ಜಿಯಾಂಗುವೊ ಎಂಬ ವ್ಯಕ್ತಿ 2008ರಲ್ಲಿ ವಿಮಾನ ನಿಲ್ದಾಣದ 2ನೇ ಟರ್ಮಿನಲ್‌ನಲ್ಲಿ ವಾಸ ಆರಂಭಿಸಿದ್ದರು. ಅಲ್ಲಿಂದ ಇಲ್ಲಿಯವರೆಗೆ ಭದ್ರತಾ ಸಿಬ್ಬಂದಿಯಾಗಲೀ, ಸ್ವಚ್ಛತಾ ಸಿಬ್ಬಂದಿಯಾಗಲೀ ಅವರನ್ನು ಹೊರಗೆ ಹಾಕಿಲ್ಲ (ಒಂದು ಬಾರಿ ಹೊರತುಪಡಿಸಿ)!
ವಸ್ತುಸ್ಥಿತಿಯಲ್ಲಿ ಅವರ ಮನೆ ವಿಮಾನ ನಿಲ್ದಾಣದಿಂದ 20 ಕಿ.ಮೀ. ದೂರದಲ್ಲಿದೆ. ಕುಡಿಯಬಾರದು, ಸಿಗರೇಟು ಸೇದಬಾರದು, ಹಾಗಿದ್ದರೆ ಮಾತ್ರ ಜೊತೆಯಲ್ಲಿರಬೇಕು. ಇಲ್ಲವೇ ಸರ್ಕಾರ ತಿಂಗಳಿಗೆ ನೀಡುವ ಅಷ್ಟೂ ಆರ್ಥಿಕ ನೆರವನ್ನು ಮನೆಗೇ ನೀಡಬೇಕು ಎಂದು ಕುಟುಂಬಸ್ಥರು ಹೇಳಿದ್ದಾರಂತೆ. ಕುಡಿಯುವುದಕ್ಕೆ ಅವಕಾಶವಿಲ್ಲದಿದ್ದ ಮೇಲೆ ಮನೆಯಲ್ಲಿದ್ದು ಏನು ಮಾಡಬೇಕೆಂದು ವಿಮಾನ ನಿಲ್ದಾಣದಲ್ಲೇ ವಾಸವಾಗಿದ್ದಾರೆ. ಇವರದ್ದು ಅನಧಿಕೃತ ವಾಸ. ಇವರಂತೆಯೇ ಇನ್ನೂ ಐದಾರು ಮಂದಿ ಅಲ್ಲೇ ಇದ್ದಾರೆ!
ಪ್ರಖ್ಯಾತ ಹಾಲಿವುಡ್ ನಿರ್ದೇಶಕ ಸ್ಟೀವನ್ ಸ್ಪಿಲ್‌ಬರ್ಗ್ ಅವರು ದಿ ಟರ್ಮಿನಲ್ ಸಿನಿಮಾದಲ್ಲಿ ವಿಮಾನ ನಿಲ್ದಾಣದಲ್ಲೇ ಅನಿವಾರ್ಯವಾಗಿ ಉಳಿದುಕೊಂಡಿದ್ದ ವ್ಯಕ್ತಿಯೊಬ್ಬನನ್ನು ಕುರಿತು ಸಿನಿಮಾ ಮಾಡಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.