ಪುಸಲಾಯಿಸಿ ಬಾಲಕರಿಗೆ ಲೈಂಗಿಕ ದೌರ್ಜನ್ಯ: ಚಂದ್ರ ಹೆಮ್ಮಾಡಿಗೆ ಮತ್ತೆರಡು ಪ್ರಕರಣದಲ್ಲಿ ಜೈಲು


Team Udayavani, Apr 1, 2022, 8:00 AM IST

ಪುಸಲಾಯಿಸಿ ಬಾಲಕರಿಗೆ ಲೈಂಗಿಕ ದೌರ್ಜನ್ಯ: ಚಂದ್ರ ಹೆಮ್ಮಾಡಿಗೆ ಮತ್ತೆರಡು ಪ್ರಕರಣದಲ್ಲಿ ಜೈಲು

ಉಡುಪಿ: ಬಾಲಕರಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಗಂಗೊಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿನ ಎರಡು ಪ್ರತ್ಯೇಕ ಪ್ರಕರಣದಲ್ಲಿ ಆರೋಪಿ ಚಂದ್ರ ಕೆ. ಹೆಮ್ಮಾಡಿ ದೋಷಿಯೆಂದು ಉಡುಪಿ ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಒಂದನೇ ಪ್ರಕರಣದಲ್ಲಿ ಸಂತ್ರಸ್ತ 15 ವರ್ಷದ ಬಾಲಕನನ್ನು ಶಾಲೆಯಲ್ಲಿ ಹಾಡುಗಾರನೆಬಂತೆ ಪರಿಚಯಿಸಿ ಕೊಂಡ ಆರೋಪಿ ಶಾಲಾ ಆಟದ ಮೈದಾನದಲ್ಲಿರುವಾಗ ಬೈಕ್‌ ಸವಾರಿ ಮಾಡಿಸುವ ನೆಪದಲ್ಲಿ ಬಾಲಕನನ್ನು ಶೌಚಾಲಯದೊಳಕ್ಕೆ ಕರೆಯಿಸಿ ಲೈಂಗಿಕ ದೌರ್ಜನ್ಯವೆಸಗಿದ್ದ. 23 ಸಾಕ್ಷ್ಯಾಧಾರಗಳ ಪೈಕಿ 15 ಸಾಕ್ಷಿಗಳ ವಿಚಾರಣೆ ನಡೆಸಿದ್ದು, ನೊಂದ ಬಾಲಕ ನುಡಿದ ಸಾಕ್ಷಿ ಹಾಗೂ ಸಾಂದರ್ಭಿಕ ಸಾಕ್ಷಿಗಳ ಆಧಾರದಲ್ಲಿ ಚಂದ್ರ ಕೆ. ಹೆಮ್ಮಾಡಿ ಅಪರಾಧಿಯೆಂದು ತೀರ್ಪು ನೀಡಿದ ನ್ಯಾಯಾಲಯ 10 ವರ್ಷ ಜೈಲು ಹಾಗೂ ನೊಂದ ಬಾಲಕನಿಗೆ 25 ಸಾವಿರ ರೂ. ಪರಿಹಾರ ನೀಡಲು ಆದೇಶಿಸಿದೆ.

22 ಸಾಕ್ಷಿದಾರರ ಪೈಕಿ 14 ಸಾಕ್ಷಿಗಳ ವಿಚಾರಣೆ ನಡೆಸಲಾಗಿತ್ತು. ನೊಂದ ಬಾಲಕನ ಸಾಕ್ಷಿ ಹಾಗೂ ಸಾಂದರ್ಭಿಕ ಸಾಕ್ಷಿಗಳು ಅಭಿಯೋಜನೆಗೆ ಪೂರಕವಾಗಿದ್ದು, ಅಪರಾಧಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿದ್ದು ಹಾಗೂ ನೊಂದ ಬಾಲಕನಿಗೆ 25 ಸಾವಿರ ರೂ. ಪರಿಹಾರ ನೀಡಲು ನ್ಯಾಯಾಲಯ ಆದೇಶಿಸಿದೆ.

ಈ ಎರಡು ಪ್ರತ್ಯೇಕ ಪ್ರಕರಣದ ದೋಷಾರೋಪಣೆ ಪಟ್ಟಿಯನ್ನು ಅಂದಿನ ಬೈಂದೂರು ಸಿಪಿಐ ಪರಮೇಶ್ವರ ಆರ್‌. ಗುನಗ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.  ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಎರ್ಮಾಳು ಕಲ್ಪನಾ ಅವರು ತೀರ್ಪು ನೀಡಿದ್ದು, ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ಅವರು ಪ್ರಾಸಿಕ್ಯೂಶನ್‌ ಪರ ವಾದ ಮಂಡಿಸಿದ್ದರು. ಆರೋಪಿ ಚಂದ್ರನ ಮೇಲೆ ಇನ್ನೂ 18 ಪ್ರಕರಣಗಳು ವಿಚಾರಣೆಗೆ ಬಾಕಿ ಇದೆ.

ಗುಹೆಯೊಳಗೆ ಕರೆದೊಯ್ದಿದ್ದ :

ಮತ್ತೂಂದು ಪ್ರಕರಣ ಗಂಗೊಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಚಂದ್ರ ಹೆಮ್ಮಾಡಿ 13 ವರ್ಷದ ಬಾಲಕನನ್ನು ಪರಿಚಯಿಸಿಕೊಂಡು ಗುಹೆ ಫೋಟೋ ತೆಗೆಯಲು ಹೋಗುವುದಿದೆ ಎಂದು ಸ್ನೇಹಿತನೊಂದಿಗೆ ಬೈಕಿನಲ್ಲಿ ಕರೆದೊಯ್ದು ಸ್ನೇಹಿತನಿಗೆ ಆಟವಾಡಲು ಮೊಬೈಲ್‌ ನೀಡಿ ಬಾಲಕನನ್ನು ಗುಹೆಯೊಳಗೆ ಕರೆದೊಯ್ದು ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ಕಿರುಕುಳ ನೀಡಿದ್ದ ಎನ್ನುವ ಆರೋಪದಡಿ ಪ್ರಕರಣ ದಾಖಲಾಗಿತ್ತು.

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.