ಮಂಗಳೂರು: ಇಡಿಯಿಂದ ಉದ್ಯಮಿಯ ಮನೆ ಜಪ್ತಿ
Team Udayavani, Apr 1, 2022, 6:43 AM IST
ಬೆಂಗಳೂರು: ವಿದೇಶಿ ವಿನಿಮಯ ನಿರ್ವಹಣ ಕಾಯ್ದೆ (ಫೆಮಾ) ಉಲ್ಲಂಘನೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಮಂಗಳೂರಿನ ಅತ್ತಾವರದ ಇಕ್ಬಾಲ್ ಅಹ್ಮದ್ ಅವರಿಗೆ ಸೇರಿದ 8.3 ಕೋಟಿ ರೂ. ಮೌಲ್ಯದ ಮನೆಯನ್ನು ಜಪ್ತಿ ಮಾಡಿದ್ದಾರೆ.
ಇನ್ಫ್ರಾ ಪ್ರಾಜೆಕ್ಟ್ ಪ್ರೈವೇಟ್ ಲಿ. ಮತ್ತು ಶರೀಫ್ ಮರೀನಿ ಪ್ರಾಡಕ್ಟ್ಸ್ ಪ್ರೈ.ಲಿ.ನ ವ್ಯವಸ್ಥಾಪಕ ನಿರ್ದೇಶಕರಾಗಿರುವ ಇಕ್ಬಾಲ್ ಅಹ್ಮದ್ ಅವರು ಫೆಮಾ ಕಾಯ್ದೆ ಉಲ್ಲಂಘಿಸಿ ವಿದೇಶದಲ್ಲಿ ಅಕ್ರಮವಾಗಿ ಆಸ್ತಿ ಸಂಪಾದಿಸಿದ್ದಾರೆ ಎಂಬ ಮಾಹಿತಿ ಸಿಕ್ಕಿತ್ತು. ದುಬಾೖ, ಯುಎಇನಲ್ಲಿ 53.09 ಲಕ್ಷ ರೂ.ಯುಎಇ ದಿರಂಗಳ (ಭಾರತದ 8.03 ಕೋಟಿ ರೂ.ಗೆ ಸಮಾನಾದ) ಸ್ಥಿರಾಸ್ತಿ ಸಂಪಾದಿದ್ದರು.
ಈ ಹಿನ್ನೆಲೆಯಲ್ಲಿ ಅವರ ಮನೆಯನ್ನು ಜಪ್ತಿ ಮಾಡಲಾಗಿದೆ ಎಂದು ಇಡಿ ತಿಳಿಸಿದೆ. ಫೆಮಾ ಕಾಯ್ದೆ ಉಲ್ಲಂ ಸಿ ವಿದೇಶದಲ್ಲಿ ಸ್ಥಿರಾಸ್ತಿ ಸಂಪಾದಿಸಿದ್ದರೆ, ಅಲ್ಲಿನ ಮೌಲ್ಯಕ್ಕೆ ಸಮಾನವಾಗಿ ಭಾರತದಲ್ಲಿರುವ ಆರೋಪಿತ ವ್ಯಕ್ತಿಯ ಆಸ್ತಿಯನ್ನು ಜಪ್ತಿ ಮಾಡುವ ಅಧಿಕಾರ ಇದೆ ಎಂದು ಇಡಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.