ಮಂಗಳೂರು: ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ್ದ ಆರೋಪಿಗೆ 10 ವರ್ಷ ಜೈಲು
Team Udayavani, Apr 1, 2022, 7:50 AM IST
ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭವತಿಯಾಗಿ ಮಗುವಿಗೆ ಜನ್ಮ ನೀಡಲು ಕಾರಣನಾದ ಆರೋಪಿಗೆ 10 ವರ್ಷ ಜೈಲು ಮತ್ತು 30,000 ರೂ. ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಹಾಗೂ 2ನೇ ತ್ವರಿತಗತಿ ವಿಶೇಷ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.
ಸುರತ್ಕಲ್ ಸಮೀಪದ ಸಸಿಹಿತ್ಲು ನಿವಾಸಿ ವಾಮನ ಪೂಜಾರಿ (59) ಆರೋಪಿ.
ಪ್ರಕರಣದ ವಿವರ :
2016ರ ಸೆಪ್ಟಂಬರ್ ತಿಂಗಳಲ್ಲಿ ಒಂದು ದಿನ ಹಗಲು ಹೊತ್ತಿನಲ್ಲಿ 16 ವರ್ಷ ಪ್ರಾಯದ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಆರೋಪಿ ವಾಮನ ಪೂಜಾರಿ ಆಕೆಯ ಮೇಲೆ ಅತ್ಯಾಚಾರ ಎಸಗಿ ಯಾರಿಗೂ ವಿಷಯ ಹೇಳಬಾರದೆಂದು ಬೆದರಿಕೆ ಹಾಕಿದ್ದ. ಆ ಬಳಿಕ ಪದೇ ಪದೇ ಆತ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದು, ಇದರ ಪರಿಣಾಮವಾಗಿ ಆಕೆ ಗರ್ಭಿಣಿಯಾಗಿದ್ದಳು. 2017ರ ಮಾ. 29ರಂದು ಖಾಸಗಿ ಆಸ್ಪತ್ರೆಯಲ್ಲಿ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು.
ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಡಿಎನ್‌ಎ ಪರೀಕ್ಷೆ ನಡೆಸಿದಾಗ ಆರೋಪಿ ವಾಮನ ಪೂಜಾರಿ ಆ ಮಗುವಿನ ತಂದೆ ಎನ್ನುವುದು ಸಾಬೀತಾಗಿತ್ತು. ಸುರತ್ಕಲ್ ಎಸ್‌ಐ ಎಚ್.ಎಂ. ಪೂವಪ್ಪ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಪೊಲೀಸ್ ಇನ್‌ಸ್ಪೆಕ್ಟರ್ ಚೆಲುವರಾಜು ಅವರು ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಪ್ರಕ ರಣದ ವಿಚಾರಣೆಯನ್ನು ಕೈಗೆತ್ತಿ ಕೊಂಡ ಮಂಗಳೂರಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಹಾಗೂ 2ನೇ ತ್ವರಿತ ಗತಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬುಧವಾರ ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದರು.
ಶಿಕ್ಷೆಯ ವಿವರ :
ಪೋಕ್ಸೋ ಕಲಂ 6ರನ್ವಯ 10 ವರ್ಷ ಜೈಲು ಶಿಕ್ಷೆ ಮತ್ತು 30,000 ರೂ. ದಂಡ ಹಾಗೂ ದಂಡ ತೆರಲು ತಪ್ಪಿದರೆ ಹೆಚ್ಚುವರಿಯಾಗಿ 2 ತಿಂಗಳ ಸಾದಾ ಸಜೆಯನ್ನು ಅನುಭವಿಸಬೇಕು. ಐಪಿಸಿ ಸೆಕ್ಷನ್ 506 (ಕೊಲೆ ಬೆದರಿಕೆ ಆರೋಪ) ಅನ್ವಯ ಒಂದು ವರ್ಷ ಸಾದಾ ಸಜೆ ವಿಧಿಸಲಾಗಿದೆ. ಇಷ್ಟೇ ಅಲ್ಲದೆ ಸಂತ್ರಸ್ತ ಬಾಲಕಿಗೆ 4 ಲಕ್ಷ ರೂ.ಗಳನ್ನು ಸರಕಾರದಿಂದ ಪರಿಹಾರವಾಗಿ ಕೊಡಿಸಬೇಕೆಂದು ನ್ಯಾಯಾಧೀಶರು ಆದೇಶಿಸಿದ್ದಾರೆ. ಸರಕಾರದ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸಿ. ವೆಂಕಟರಮಣಸ್ವಾಮಿ ಅವರು ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
China Badminton: ಚಿರಾಗ್- ಸಾತ್ವಿಕ್ ಸೆಮಿಫೈನಲ್‌ಗೆ
Kasragodu: ನರ್ಸಿಂಗ್ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್ ತನಿಖೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.