ಎಲ್ಲರೂ ಕಾನೂನು ಗೌರವಿಸಿ: ವಡಿಗೇರಿ
ಮಹಿಳಾ-ಮಕ್ಕಳ ದೌರ್ಜನ್ಯ ತಡೆಗೆ ಮುಂದಾಗಿ
Team Udayavani, Apr 1, 2022, 12:23 PM IST
ಮಹಾಲಿಂಗಪುರ: ಸಮಾಜದಲ್ಲಿರುವ ಪ್ರತಿಯೊಬ್ಬರು ಕಾನೂನಿಗೆ ತಲೆಬಾಗಬೇಕು, ಗೌರವಿಸಬೇಕು. ಸತ್ಯ ಮತ್ತು ಪ್ರಾಮಾಣಿಕರಾಗಿದ್ದರು ಕಾನೂನು ಖಂಡಿತವಾಗಿಯೂ ನಿಮ್ಮನ್ನು ರಕ್ಷಿಸುತ್ತದೆ ಎಂದು ಬನಹಟ್ಟಿಯ ದಿವಾಣಿ ನ್ಯಾಯಾಧೀಶ ಕಿರಣಕುಮಾರ ಡಿ. ವಡಿಗೇರಿ ಹೇಳಿದರು.
ಪಟ್ಟಣದ ಪೊಲೀಸ್‌ಠಾಣೆಯ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ ಆಶ್ರಯದಲ್ಲಿ ಜರುಗಿದ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ವಿಷಯದ ಕುರಿತು ತಾಲೂಕು ಮಟ್ಟದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳು ಅಧಿಕವಾಗುತ್ತಿರುವುದು ವಿಷಾದನೀಯ. ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಕಾನೂನುಗಳಿರುವುದರಿಂದ ಅವುಗಳ ಮೂಲಕ ರಕ್ಷಣೆ ಪಡೆಯಬೇಕು. ಸಮಸ್ಯೆಗಳಿದ್ದರೆ ತಾಲೂಕು ಕಾನೂನು ಸೇವಾ ಸಮಿತಿ ಸಂಪರ್ಕಿಸಿ. 2 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ ಬಡವರಾಗಿದ್ದರೇ ನುರಿತ ವಕೀಲರನ್ನು ನೇಮಕಗೊಳಿಸಿ, ಉಚಿತವಾಗಿ ಕಾನೂನು ಸೇವೆಯ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದರು.
ಅನಾವಶ್ಯಕವಾಗಿ ಮಕ್ಕಳ ಭವಿಷ್ಯ ಹಾಳು ಮಾಡದೇ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣವನ್ನು ಉತ್ತಮ ಸಮಾಜವನ್ನು ನಿರ್ಮಿಸಲು ಪ್ರಯತ್ನಿಸಿ. ಸಹೋದರ- ಸಹೋದರಿಯರ ಭಾವನೆಯೊಂದಿಗೆ ನಮ್ಮ ದೇಶದ ಪ್ರಗತಿಯನ್ನು ಇನ್ನಷ್ಟು ಹೆಚ್ಚಿಸೋಣ ಎಂದರು.
ಇನ್ನೊರ್ವ ದಿವಾಣಿ ನ್ಯಾಯಾಧಿಧೀಶರಾದ ಸುಷ್ಮಾ ಟಿ.ಸಿ ಅವರು ಮಹಿಳೆಯರು ಮತ್ತು ಮಕ್ಕಳ ರಕ್ಷಣೆ ಕುರಿತಾಗಿರುವ ಕಾನೂನುಗಳ ಕುರಿತು ಮಾತನಾಡಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಬನಹಟ್ಟಿ ಸಿಪಿಆಯ್ ಜೆ.ಕರುಣೇಶಗೌಡ ಮಾತನಾಡಿದರು. ನ್ಯಾಯವಾದಿ ಐ.ಸಿ.ಭೂತಿ ಅವರು ಮಹಿಳೆ ಮತ್ತು ಮಕ್ಕಳ ಮಾರಾಟ ತಡೆ ಕಾಯ್ದೆ, ಜಮಖಂಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅನುರಾಧಾ ಬಿ.ಹಾದಿಮನಿ ಅವರು ಲೈಂಗಿಕ ದೌರ್ಜನ್ಯದಿಂದ ಮಹಿಳೆ ಮತ್ತು ಮಕ್ಕಳ ರಕ್ಷಣೆ, ಮಹಾಲಿಂಗಪುರ ಠಾಣಾಧಿಕಾರಿ ವಿಜಯಕುಮಾರ ಕಾಂಬಳೆ ಅವರು ಮಹಿಳೆ ಮತ್ತು ಮಕ್ಕಳ ರಕ್ಷಣೆಯಲ್ಲಿ ಪೊಲೀಸ್ ಇಲಾಖೆಯ ಪಾತ್ರ ಕುರಿತು ಮಾತನಾಡಿದರು.
ತೇರದಾಳ ಉಪತಹಶೀಲ್ದಾರ್ ಎಸ್ .ಬಿ.ಮಾಯನ್ನವರ, ಬನಹಟ್ಟಿ ವಕೀಲರ ಸಂಘದ ಅಧ್ಯಕ್ಷ ಶ್ರೀಕಾಂತ ಜಿ.ಕುಲಕರ್ಣಿ, ಕಾರ್ಯದರ್ಶಿ ಮಹಾಂತೇಶ ಸಿ.ಮಸಳಿ, ವಕೀಲರ ಸಂಘದ ಉಪಾಧ್ಯಕ್ಷ ಆರ್.ಎ.ಗೂಗಾಡ, ವಕೀಲರಾದ ಎಲ್.ಎ.ಬನಾಜ, ಎಸ್.ಎ.ಮಡಿವಾಳರ, ಮಂಜುನಾಥ ಕೌಜಲಗಿ, ತಾಪಂ ಕಾರ್ಯನಿರ್ವಾಹಕ ಅಧಿ ಕಾರಿ ಸಂಜು ಹಿಪ್ಪರಗಿ, ಬನಹಟ್ಟಿ ಪಿಎಸ್‌ಐ ಸುರೇಶ ಮಂಟೂರ, ತೇರದಾಳ ಪಿಎಸ್‌ಐ ಆರ್.ವೈ.ಬೀಳಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.