ವಾಸ್ಕೊ: ಬಿಟ್ಸ್ ಕ್ಯಾಂಪಸ್‍ನಲ್ಲಿ 24 ವಿದ್ಯಾರ್ಥಿಗಳಿಗೆ ಕೋವಿಡ್: ಆತಂಕ ಹೆಚ್ಚಳ
Team Udayavani, Apr 1, 2022, 1:52 PM IST
ಪಣಜಿ: ವಾಸ್ಕೊ ಜುವಾರಿ ನಗರದ ಬಿರ್ಲಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಸೈನ್ಸ್, ಡೀಮ್ಡ್ ಯೂನಿವರ್ಸಿಟಿ ಕ್ಯಾಂಪಸ್‍ನಲ್ಲಿ 24 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಸೋಂಕು ದೃಢಪಟ್ಟವರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳಾಗಿದ್ದು, ಈ ಭಾಗದಲ್ಲಿ ಮತ್ತೆ ಕೋವಿಡ್ ಸೋಂಕು ಹರಡುವ ಭೀತಿ ಎದುರಾಗಿದೆ.
ಈ ಕುರಿತು ರಾಜ್ಯ ಸಾಂಕ್ರಾಮಿಕ ರೋಗ ತಜ್ಞೆ ಡಾ. ಉತ್ಕರ್ಷ ಬೇತೋಡ್ಕರ್ ಮಾಹಿತಿ ನೀಡಿ, ಮಾರ್ಚ 25 ರಂದು ಬಿಟ್ಸ್ ಪಿಲಾನಿ ಕ್ಯಾಂಪಸ್‍ನಲ್ಲಿ ಮೊದಲ ಕೋವಿಡ್ ಸೋಂಕಿತ ಪತ್ತೆಯಾಗಿದ್ದು, ಇದೀಗ ಕ್ಯಾಂಪಸ್‍ನಲ್ಲಿ 24 ಜನರಿಗೆ ಸೋಂಕು ದೃಢಪಟ್ಟಿದ್ದು ಸೋಂಕಿತರನ್ನು ಪ್ರತ್ಯೇಕ ಕೊಠಡಿಯಲ್ಲಿಡಲಾಗಿದೆ. ಸೋಂಕಿತರಲ್ಲಿ ಯಾರಿಗೂ ಗಂಭೀರ ಪರಿಸ್ಥಿತಿಯಿಲ್ಲ. ಕ್ಯಾಂಪಸ್‍ನಲ್ಲಿ ರೋಗಲಕ್ಷಣಗಳನ್ನು ಹೊಂದಿರುವ ಜನರನ್ನು ಪರೀಕ್ಷಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಕಳೆದ ಎರಡು ವಾರಗಳಿಂದ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿತ್ತು. ಆದರೆ ಕಳೆದ ಎರಡು ದಿನಗಳಿಂದ ಬಿಟ್ಸ್ ಪಿಲಾನಿ ಕ್ಯಾಂಪಸ್‍ನಲ್ಲಿ ಕೋವಿಡ್ ಸೋಂಕು ಹರಡುತ್ತಿರುವುದು ಆತಂಕ ಹೆಚ್ಚುವಂತೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ..ಮೀನುಗಾರಿಕಾ ದೋಣಿಯಲ್ಲಿದ್ದ 6 ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.