ಅಧಿಕಾರಿಗಳ ಗೈರು: ದಲಿತ ಮುಖಂಡರ ಆಕ್ರೋಶ
Team Udayavani, Apr 1, 2022, 3:34 PM IST
ಸುರಪುರ: ಡಾ| ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದಲಿತರಿಗೆ ಮಾತ್ರವಲ್ಲ ಎಲ್ಲಾ ಸಮಾಜದವರಿಗೆ ಅಗತ್ಯವಾಗಿದ್ದಾರೆ. ಕೇವಲ ದಲಿತರನ್ನು ಕರೆದು ಸಭೆ ಮಾಡುವುದರಲ್ಲಿ ಅರ್ಥವಿಲ್ಲ. ಸರಕಾರವೇ ಈ ರೀತಿ ಮಾಡಿದರೆ ಹೇಗೆ? ಮೇಲಾಗಿ ವಿವಿಧ ಇಲಾಖೆಗಳ ಅಧಿಕಾರಿಗಳು ಗೈರಾಗಿದ್ದಾರೆ. ಇತರೆ ಸಮಾಜದವವರು, ವಿವಿಧ ಸಂಘಟನೆಗಳ ಮುಖಂಡರನ್ನು ಆಹ್ವಾನಿಸಿ ಸಭೆ ಮಾಡಿ ಸದ್ಯಕ್ಕೆ ಸಭೆ ಮುಂದೂಡುವಂತೆ ದಲಿತ ಮುಖಂಡರು ಒತ್ತಾಯಿಸಿದರು.
ಡಾ| ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತ್ಯುತ್ಸವ ಹಿನ್ನೆಲೆಯಲ್ಲಿ ಗುರುವಾರ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದ ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಮುಖಂಡರ ಕೋರಿಕೆ ಮೇರೆಗೆ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಸಭೆ ಮುಂದೂಡುವುದಾಗಿ ತಿಳಿಸಿದರು.
ಗ್ರೇಡ್-2 ತಹಶೀಲ್ದಾರ್ ಮಲ್ಲಯ್ಯ, ತಾಪಂ ಇಒ ಅಮರೇಶ, ಪಿಐ ಸುನೀಲ್ ಕುಮಾರ ಮೂಲಿಮನಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸತ್ಯನಾರಾಯಣ ದರಬಾರಿ, ಸಿಡಿಪಿಒ ಲಾಲ್ ಸಾಬ್ ಪೀರಾಪುರ, ಎಸ್‌ಟಿಒ ಡಾ| ಮೋನಪ್ಪ ಸಿರವಾಳ, ಪರಿಶಿಷ್ಟ ಪಂಗಡ ಇಲಾಖೆ ಅಧಿಕಾರಿ ಮೊಹ್ಮದ್ ಸಲೀಂ, ಅಲ್ಪಸಂಖ್ಯಾತರ ಇಲಾಖೆ ಸಂಗೀತಾ ಮಾಡ್ಯಾಳ, ದಲಿತ ಮುಖಂಡರಾದ ನಾಗಣ್ಣ ಕಲ್ಲದೇವನಹಳ್ಳಿ, ಮಾನಪ್ಪ ಕಟ್ಟಿಮನಿ, ವೆಂಕಟೇಶ ಹೊಸ್ಮನಿ, ಭೀಮರಾಯ ಸಿಂದಗೇರಿ, ಶಿವಲಿಂಗ ಹಸನಾಪುರ, ರಾಹುಲ್ ಹುಲಿಮನಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.