ದ್ವೇಷ, ಅಸೂಯೆ ನಿಯಂತ್ರಿಸಬೇಕಿದೆ; ರಾಹುಲ್ ಗಾಂಧಿ
ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖರೆನಿಸಿರುವ ಅವರಿಗೆ ದೇವರು ನಾಡನ್ನು ಮುನ್ನಡೆಸುವ ಸ್ಫೂರ್ತಿ, ಶಕ್ತಿ ನೀಡಲೆಂದು ಹಾರೈಸಿದರು.
Team Udayavani, Apr 1, 2022, 5:34 PM IST
ತುಮಕೂರು: ದೇಶದಲ್ಲಿ ಜಾತಿ, ಮತ, ಧರ್ಮ ಭೇದವಿಲ್ಲದೆ ಎಲ್ಲರೂ ಬದುಕಬೇಕಿದೆ. ಸದ್ಯ ದ್ವೇಷ, ಅಸೂಯೆ ಭಾವನೆ ಹೆಚ್ಚಾಗಿ ಹರಡುತ್ತಿದ್ದು, ಇದನ್ನು ನಿಯಂತ್ರಿಸುವ ಕೆಲಸ ಆಗಬೇಕಿದೆ. ಡಾ.ಶ್ರೀ ಶಿವಕುಮಾರಸ್ವಾಮೀಜಿ ಅವರ ತಪೋನೆಲವಾದ ಸಿದ್ಧಗಂಗೆಯಲ್ಲಿ ಈ ಕಾರ್ಯ ಶತಮಾನಗಳಿಂದ ನಡೆದುಕೊಂಡು ಬಂದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ಶ್ರೀ ಶಿವಕುಮಾರ ಸ್ವಾಮೀಜಿಯವರ 115ನೇ ಗುರುವಂದನಾ ಮಹೋತ್ಸವದ ಹಿನ್ನೆಲೆಯಲ್ಲಿ ಶ್ರೀ ಮಠಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ ಅವರು, ಗದ್ದುಗೆ ದರ್ಶನ ಪಡೆದು ಸಿದ್ಧಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದು ಸ್ವಲ್ಪ ಸಮಯ ಧ್ಯಾನ ಮಾಡಿದರು. ನಂತರ ಮಠದ ಮಕ್ಕಳ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಠಕ್ಕೂ ತಮ್ಮ ಕುಟುಂಬಕ್ಕೂ ಇರುವ ನಂಟನ್ನು ಮೆಲುಕು ಹಾಕಿ ಮಾತನಾಡಿದರು.
ಡಾ.ಶಿವಕುಮಾರ ಸ್ವಾಮೀಜಿ ಅವರು ಬದುಕಿದ್ದಾಗ ಶ್ರೀಮಠಕ್ಕೆ ಭೇಟಿ ನೀಡಿದ್ದೆ. ಎರಡನೇ ಭೇಟಿಯಲ್ಲಿ ಅವರ ಅಗಲಿಕೆಯ ದುಃಖ ಕಾಡುತ್ತಿದೆ. ಭವ್ಯ ಭಾರತದ ಬಗ್ಗೆ ದೂರದೃಷ್ಟಿ ಹೊಂದಿದ್ದ ಶ್ರೀಗಳು ಲಕ್ಷಾಂತರ ಮಕ್ಕಳಿಗೆ ತ್ರಿವಿಧ ದಾಸೋಹ ಮೂಲಕ ಭವಿಷ್ಯ ರೂಪಿಸಿಕೊಟ್ಟಿದ್ದಾರೆ. ಬಸವಣ್ಣನವರ ಆಶಯದಂತೆ ಎಲ್ಲರೂ ಒಟ್ಟಾಗಿ ಬಾಳಬೇಕು ಎಂದರು.
ಸಮಾರಂಭದ ಸಾನ್ನಿಧ್ಯ ವಹಿಸಿದ್ಧ ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಚನ ನೀಡಿ, ನಾವೆಲ್ಲರೂ ಮಾನವೀಯತೆಯ ಹಾದಿಯಲ್ಲಿ ದ್ವೇಷ, ಅಸೂಯೆ ತೊರೆದು ಬಾಳಬೇಕಿದೆ ಎಂದು ನುಡಿದರು. ಪ್ರಜಾಪ್ರಭುತ್ವದ ಯಶಸ್ಸಿಗೆ ಪ್ರತಿಭಾ ವಂತರು, ಗುಣಸಂಪನ್ನರ ನಾಯಕತ್ವ ಅತ್ಯವಶ್ಯಕ. ರಾಹುಲ್ಗಾಂಧಿ ಅವರು ಇಂತಹ ಗುಣಸಂಪನ್ನರಾಗಿದ್ದು, ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖರೆನಿಸಿರುವ ಅವರಿಗೆ ದೇವರು ನಾಡನ್ನು ಮುನ್ನಡೆಸುವ ಸ್ಫೂರ್ತಿ, ಶಕ್ತಿ ನೀಡಲೆಂದು ಹಾರೈಸಿದರು.
ಸಮಾರಂಭದಲ್ಲಿ ರಾಹುಲ್ಗಾಂಧಿ ಭಾಷಣವನ್ನು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಕನ್ನಡಕ್ಕೆ ಅನುವಾದಿಸಿದರು. ಮಠದ ಮಕ್ಕಳ ಸಾಮೂಹಿಕ ಪ್ರಾರ್ಥನೆ, ಬಸವಣ್ಣನವರ ವಚನಕ್ಕೆ ತಲೆದೂಗಿದ ರಾಹುಲ್ ಗಾಂಧಿ ಮಕ್ಕಳೊಡನೆ ಗ್ರೂಪ್ ಫೋಟೋ ಕ್ಲಿಕ್ಕಿಸಿಕೊಂಡಿದ್ದು ಗಮನಸೆಳೆಯಿತು. ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುಜೇìವಾಲಾ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಉಪಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಸೇರಿ ಹಲವು ಗಣ್ಯರು ಹಾಜರಿದ್ದರು.
ಕಾರ್ಯಕರ್ತರ ಪರಿಶ್ರಮದಿಂದ ಕಾಂಗ್ರೆಸ್ ಪಕ್ಷದ ಉಳಿವು ಸಾಧ್ಯ
ನೆಲಮಂಗಲ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹಮತ ನೀಡುವ ಮೂಲಕ ಬಿಜೆಪಿಯನ್ನು ರಾಜ್ಯದಿಂದ ಓಡಿಸಲು ಕಾರ್ಯಕರ್ತರು ಸಂಪೂರ್ಣ ಸಹಕಾರ ನೀಡಬೇಕು ಎಂದು ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಮನವಿ ಮಾಡಿದರು.
ತಾಲೂಕಿನ ಬೊಮ್ಮನಹಳ್ಳಿ ರಾಷ್ಟ್ರೀಯ ಹೆದ್ದಾರಿ 48ರ ಸಮೀಪ ತುಮಕೂರಿನಿಂದ ಬೆಂಗ ಳೂರಿಗೆ ಹೋಗುವ ಮಾರ್ಗ ಮಧ್ಯೆ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಹಾಗೂ ಮಾಜಿ ಸಚಿವ ಅಂಜನಮೂರ್ತಿ ನೇತೃತ್ವದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದ ಮೂಲಕ ಅಧಿಕಾರಕ್ಕೆ ಬರಬೇಕಾಗಿದೆ. ಕಾರ್ಯಕರ್ತರ ಪರಿಶ್ರಮದಿಂದ ಪಕ್ಷದ ಉಳಿವು ಸಾಧ್ಯ ಎಂದರು.
ಕಾರ್ಯಕರ್ತರ ಜಮಾವಣೆ: ತಾಲೂಕಿನ ಮುಖಂಡರು ರಾಹುಲ್ ಗಾಂಧಿ ಸ್ವಾಗತಕ್ಕೆ ಬೂತ್ ಮಟ್ಟದಿಂದ ಕಾರ್ಯಕರ್ತರನ್ನು ಕರೆಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 48ರ ಟೋಲ್ ಬಳಿ ಸಾವಿರಾರು ಕಾರ್ಯಕರ್ತರು ಜಮಾವಣೆಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.