ಪಡಿತರ ಧಾನ್ಯ ವಿತರಿಸಲು ಆಗ್ರಹ
Team Udayavani, Apr 1, 2022, 6:00 PM IST
ಹುಣಸಗಿ: ತಾಲೂಕಿನ ನ್ಯಾಯಬೆಲೆ ಅಂಗಡಿ ಮಾಲೀಕರು ಗ್ರಾಹಕರಿಂದ ಬಯೋಮೆಟ್ರಿಕ್ ಮಾಡಿಸಿಕೊಳ್ಳಲು ಹಣ ವಸೂಲಿ ಮಾಡುತ್ತಿದ್ದಾರೆ. ಇದರಲ್ಲಿ ಆಹಾರ ನಿರೀಕ್ಷಕ ಅಧಿಕಾರಿಗಳು ಪಾಲ್ಗೊಂಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಇವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ರಾಷ್ಟ್ರೀಯ ಭಷ್ಟಾಚಾರ ವಿರೋಧಿ ದಳದ ತಾಲೂಕು ಘಟಕ ಅಧ್ಯಕ್ಷ ಕಾಶೀನಾಥ ಹಾದಿಮನಿ ನೇತೃತ್ವದಲ್ಲಿ ತಹಶೀಲ್ದಾರ್ ಅಶೋಕ ಸುರಪುರಕರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಗ್ರಾಹಕರಿಗೆ 2/3 ಕೆಜಿ ಕಡಿಮೆ ಪಡಿತರ ವಿತರಿಸುತ್ತಿದ್ದಾರೆ. ಈ ಬಗ್ಗೆ ಪ್ರಶ್ನೆ ಮಾಡಿದಾಗ ಅಕ್ಕಿ, ಗೋಧಿ ಕಡಿಮೆ ಬಂದಿದೆ ಎಂದು ಸಬೂಬು ನೀಡಿ ವಂಚಿಸಲಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ. ಆದ್ದರಿಂದ ಸೂಕ್ತ ತನಿಖೆ ನಡೆಸಿ ಸತ್ಯ ಕಂಡು ಬಂದರೆ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು. ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
ಯಮನಪ್ಪ ಚನ್ನೂರು, ಗುರುರಾಜ ಮಜ್ಜಗಿ, ಸದ್ದಾಂ ಬಿದರಿ, ಪ್ರಭು ಕಚಕನೂರು, ಭೀಮಣ್ಣ ಚಾನಿ, ಮಾನಪ್ಪ ಹಳ್ಳಿ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.