ಮಕ್ಕಳ ಬೆಳವಣಿಗೆ ಸಮತೋಲನದಲ್ಲಿರಲಿ

ಶ್ರೇಯೋಭಿವೃದ್ಧಿಗೆ ಪೂರಕ ವಾತಾವರಣ ಸೃಷ್ಟಿಸಿ

Team Udayavani, Apr 2, 2022, 10:57 AM IST

4

ಧಾರವಾಡ: ಬಿಳಿ ವಸ್ತ್ರದಂತೆ ಮನಸ್ಸು ಇರುವ ಮಕ್ಕಳಿಗೆ ಹೇಳಿ ಕೊಡುವ ವಿಷಯಗಳು ಶಾಶ್ವತವಾಗಿ ಅಚ್ಚಳಿಯದೆ ಉಳಿದು ಹೋಗುತ್ತವೆ. ಹೀಗಾಗಿ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಕೇವಲ ಸಾಹಿತ್ಯ ಒಂದೇ ಆಯಾಮವಲ್ಲ. ಬದಲಾಗಿ ಎಲ್ಲ ಆಯಾಮಗಳಲ್ಲಿ ಸರಿಸಮವಾಗಿ ಪರಿಗಣಿಸುವುದು ತೀವ್ರ ಅವಶ್ಯಕತೆಯಿದೆ ಎಂದು ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ಹೇಳಿದರು.

ನಗರದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಅಕಾಡೆಮಿ ಮುನ್ನೋಟದಲ್ಲಿ ಮಕ್ಕಳ ಸಾಹಿತ್ಯ ಮತ್ತು ಮಕ್ಕಳ ಸಾಹಿತಿಗಳು ಎಂಬ ಕಾರ್ಯಕ್ರಮದ ಮಕ್ಕಳು-ಸಾಹಿತಿಗಳ ಸಂವಾದವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ಬೆಳವಣಿಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಸಮತೋಲನದಲ್ಲಿ ಇರಬೇಕು. ಮಕ್ಕಳಿಗೆ ತಿಳಿಯುವ ಹಾಗೆ ಸಂದರ್ಭ ಅನುಸಾರವಾಗಿ ಮಕ್ಕಳ ಸಾಹಿತ್ಯವನ್ನು ಸೃಜಿಸಬೇಕು. ಮಕ್ಕಳ ಸಲುವಾಗಿ ಮಾಡಬೇಕಾಗಿರುವ ಕೆಲಸಗಳು ಹಲವಾರು ಇವೆ. ಅವುಗಳನ್ನು ಅರಿತು ಅವರ ಬೆಳವಣಿಗೆಗೆ ಮತ್ತು ಶ್ರೇಯೋಭಿವೃದ್ಧಿಗೆ ಪೂರಕವಾದಂತಹ ವಾತಾವರಣ ಸೃಷ್ಟಿಸಿ, ಅವುಗಳಿಗೆ ಅನುಗುಣವಾಗಿ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕಿದೆ ಎಂದರು.

ಡಾ| ಸಿದ್ಧನಗೌಡ್ರ ಪಾಟೀಲ ಮಾತನಾಡಿ, ಮಕ್ಕಳನ್ನು ಕೇಂದ್ರೀಕರಿಸಿ ಅವರಿಗೆ ಪ್ರಚಲಿತ ವಿದ್ಯಮಾನಗಳನ್ನು ಅಥ್ಯೆìಸಿಕೊಂಡು ಮುಂದಿನ ಅವರ ಜೀವನವನ್ನು ರೂಪಿಸಿಕೊಳ್ಳಲು ಅನುಕೂಲವಾಗುವಂತಹ ಮಕ್ಕಳ ಸಾಹಿತ್ಯ ರಚನೆ ಮಾಡಬೇಕು. ಬದಲಾಗುತ್ತಿರುವ ಸಮಾಜದಲ್ಲಿ ಮಕ್ಕಳು ಪಠ್ಯೇತರ ಕಲಿಕೆಗಳಲ್ಲಿ ಅತೀ ಹೆಚ್ಚು ಉತ್ಸುಕರಾಗಿದ್ದಾರೆ. ಆದ್ದರಿಂದ ಅವರಿಗೆ ಸರಿಯಾದ ಮಾರ್ಗದರ್ಶನ ಮತ್ತು ಮೇಲ್ವಿಚಾರಣೆಯ ಅವಶ್ಯಕತೆಯಿದೆ ಎಂದು ಹೇಳಿದರು.

ಬಸು ಬೇವಿನಗಿಡದ ಮಾತನಾಡಿ, ಮಕ್ಕಳಲ್ಲಿ ಸಾಹಿತ್ಯ ಮತ್ತು ಸಂಸ್ಕೃತಿಯ ಸೂಕ್ಷ್ಮತೆಯನ್ನು ಬೆಳೆಸುವಂತಿರಬೇಕು. ಮಕ್ಕಳ ಸಾಹಿತ್ಯವನ್ನು ಕೇವಲ ಮಕ್ಕಳು ಓದದೇ ಅದನ್ನು ಮೊದಲು ಪಾಲಕರು ಓದಿ ಅದರಲ್ಲಿರುವ ಅಂಶಗಳನ್ನು ಮನದಟ್ಟು ಮಾಡಿಕೊಳ್ಳಬೇಕು. ಆ ವಿಷಯಗಳನ್ನು ಮಕ್ಕಳ ಜತೆಗೆ ಹಂಚಿಕೊಂಡಾಗ ಮಾತ್ರ ಮಕ್ಕಳನ್ನು ಕ್ರಿಯಾಶೀಲರನ್ನಾಗಿ ಮಾಡಬಹುದಾಗಿದೆ. ಮಕ್ಕಳಲ್ಲಿ ಓದುವ ಸಂಸ್ಕೃತಿ ಬೆಳೆಸುವ ಅವಶ್ಯಕತೆಯಿದೆ. ಕನ್ನಡದ ಮಕ್ಕಳ ಸಾಹಿತ್ಯ ಇತರೆ ಅನ್ಯ ಭಾಷೆಗಳಿಗೆ ಹೊಲಿಸದರೆ ಅತೀ ಉತ್ತಮವಾದ ಸಾಹಿತ್ಯ ಪ್ರಕಾರವಾಗಿದೆ. ಮಕ್ಕಳಲ್ಲಿ ಮೌಲ್ಯಗಳು, ಸಾಮರಸ್ಯ, ಸದಭಿರುಚಿ ಬೆಳೆಸುವಂತಹ ಸಾಹಿತ್ಯ ಮೂಡಿಬರಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ ಮಾತನಾಡಿ, ಕೋವಿಡ್‌ ಕಾರಣದಿಂದ ಕಳೆದ ಎರಡು ವರ್ಷಗಳಲ್ಲಿ ಮಕ್ಕಳಿಗಾಗಿ ಯಾವುದೇ ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಸಾಧ್ಯವಾಗಿರಲಿಲ್ಲ. ಪ್ರಸ್ತುತ ನಾವೆಲ್ಲರೂ ಈ ಮಹಾಮಾರಿಯಿಂದ ಹೊರ ಬಂದಿದ್ದು, 18 ವರ್ಷದ ಒಳಗಿನ ಮಕ್ಕಳಿಗಾಗಿ ಕಲೆ, ಸಂಗೀತ, ನೃತ್ಯ, ವಿಜ್ಞಾನ, ಸಂಶೋಧನೆ, ನಾಟಕ ಹಾಗೂ ಮುಂತಾದ ಕ್ಷೇತ್ರಗಳಲ್ಲಿ ಕಾರ್ಯಕ್ರಮಗಳನ್ನು ರೂಪಿಸಿ ಮಕ್ಕಳ ಶ್ರೇಯೋಭಿವೃದ್ಧಿಗೆ ಅನುಷ್ಠಾನಗೊಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ಇಂದಿನ ಕಾರ್ಯಕ್ರಮ ಆಯೋಜಿಸಿದ್ದು, ಸಲಹೆಗಳನ್ನು ಅಕಾಡೆಮಿಯ ಕಾರ್ಯಕ್ರಮಗಳಲ್ಲಿ ಅಳವಡಿಸಿಕೊಳ್ಳಲಾಗುವುದು ಎಂದರು.

ಅಕಾಡೆಮಿ ಮಾಜಿ ಅಧ್ಯಕ್ಷ ಶಂಕರ ಹಲಗತ್ತಿ, ಮಕ್ಕಳ ಸಾಹಿತಿ ನಿಂಗಣ್ಣ ಕುಂಟಿ ಸೇರಿದಂತೆ ಬೆಂಗಳೂರು, ಮೈಸೂರು, ಬೀದರ್‌, ಮಡಿಕೇರಿ, ಹಾಸನ, ಬಾಗಲಕೋಟೆ, ವಿಜಯಪುರ, ಬೆಳಗಾವಿ, ಗದಗ, ಹಾವೇರಿ, ಧಾರವಾಡ ಮುಂತಾದ ಜಿಲ್ಲೆಗಳಿಂದ 60ಕ್ಕೂ ಹೆಚ್ಚು ಮಕ್ಕಳ ಸಾಹಿತಿಗಳು ಆಗಮಿಸಿ ತಮ್ಮ ಸಲಹೆ-ಸೂಚನೆ ನೀಡಿದರು.

ಬಸವರಾಜ ಗಾರ್ಗಿ, ರಾಮು ಮೂಲಗಿ, ಕೆ.ಎಚ್‌. ನಾಯಕ, ವೈ.ಜಿ. ಭಗವತಿ, ಡಾ| ಲಿಂಗರಾಜ ರಾಮಾಪುರ, ಡಾ| ಎ.ಎಲ್‌. ದೇಸಾಯಿ, ನಾಗರಾಜ ಹುಡೇದ, ಜೆ.ಎಂ. ಮಠದ ಇನ್ನಿತರರಿದ್ದರು. ಅಕಾಡೆಮಿ ಯೋಜನಾ ಧಿಕಾರಿ ಡಾ| ಎಚ್‌.ಎಚ್‌ ಕೂಕನೂರ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಶಂಕರ ಹಲಗತ್ತಿ ನಿರೂಪಿಸಿದರು. ಅಕಾಡೆಮಿ ಅಧೀಕ್ಷಕ ಮುತ್ತಣ್ಣ ಸಿ.ಎ ವಂದಿಸಿದರು.

 

ಮಕ್ಕಳ ಬೆಳವಣಿಗೆಯಲ್ಲಿ ಯಾವುದೇ ರಾಜಕೀಯ ವಿಷಯಗಳನ್ನು ಅಳವಡಿಸಬಾರದು. ಅವರ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾಗಿ ಕ್ರೀಡೆ, ಮನರಂಜನೆ ವಿಷಯಗಳು ರೂಪುಗೊಳ್ಳಬೇಕು. ಮುಂದಿನ ದಿನಗಳಲ್ಲಿ ಜರುಗಬಹುದಾದ ಬದಲಾವಣೆಗಳನ್ನು ಗಮನದಲ್ಲಿ ಇರಿಸಿಕೊಂಡು ಮಕ್ಕಳನ್ನು ಈಗಿನಿಂದಲೇ ಸದೃಢರನ್ನಾಗಿ ಮಾಡಬೇಕು.  -ಡಾ| ಸಿದ್ಧನಗೌಡ್ರ ಪಾಟೀಲ

 

ಮಕ್ಕಳಿಗೆ ಶಿಕ್ಷಕರೇ ಆದರ್ಶರಾಗಿರುತ್ತಾರೆ. ಶಿಕ್ಷಕರ ಮಾತುಗಳು ಮಕ್ಕಳ ಮಸ್ತಕಕ್ಕೆ ತಟ್ಟುತ್ತದೆ. ಹೀಗಾಗಿ ಮಕ್ಕಳಲ್ಲಿ ಜಾತಿ, ಮತ, ಪಂಥ ಹಾಗೂ ಧರ್ಮದ ಬೀಜಗಳನ್ನು ಬಿತ್ತಬಾರದು. ಇದರಿಂದ ಮಕ್ಕಳ ಮೇಲೆ ಹಾಗೂ ಸಮಾಜದ ಮೇಲೆ ಮುಂದಿನ ದಿನಗಳಲ್ಲಿ ವ್ಯತಿರಿಕ್ತ ಪರಿಣಾಮಗಳು ಉಂಟಾಗುತ್ತವೆ. ಅಕಾಡೆಮಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೂರಕ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕು. -ಜಿ.ಬಿ ಹೊಂಬಳ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.