ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಾಗ, ಪೊಲೀಸರನ್ನು ತಳ್ಳಿ ಪರಾರಿಯಾದ ಅತ್ಯಾಚಾರ ಆರೋಪಿ
Team Udayavani, Apr 2, 2022, 11:22 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ನೇಪಾಳ ಮೂಲದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ರೌಡಿಶೀಟರ್ ಅವೇಜ್(22)ನನ್ನು ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಾಗ, ಪೊಲೀಸರನ್ನು ತಳ್ಳಿ ಪರಾರಿಯಾಗಿದ್ದಾನೆ.
ಗುರುವಾರ ಮುಂಜಾನೆ ಡಿ.ಜೆ.ಹಳ್ಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ನೇಪಾಳ ಮೂಲದ ಮಹಿಳೆಯನ್ನು ಎಳೆ ದೊಯ್ದು ಅತ್ಯಾಚಾರ ಎಸಗಿದ್ದ. ಘಟನೆ ನಡೆದ ಕೆಲ ಗಂಟೆಗಳಲ್ಲೇ ಆರೋಪಿಯನ್ನು ಬಂಧಿಸಲಾಗಿತ್ತು. ನಂತರ ರಾತ್ರಿ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಾಗ, ಪೊಲೀಸರನ್ನು ತಳ್ಳಿ ಪರಾರಿಯಾಗಿದ್ದಾನೆ.
ಈತನ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಪೂರ್ವ ವಿಭಾಗ ಡಿಸಿಪಿ ಭೀಮಾಶಂಕರ್ ಗುಳೇದ್ ಹೇಳಿದರು. ರೌಡಿ ಅವೇಜ್ ವಿರುದ್ಧ ಕೊಲೆ, ಕೊಲೆ ಯತ್ನ, ಸುಲಿಗೆ, ಜೀವ ಬೆದರಿಕೆ ಸೇರಿದಂತೆ 27 ಪ್ರಕರಣಗಳು ದಾಖಲಾಗಿವೆ. ಕಮರ್ಷಿಯಲ್ ಸ್ಟ್ರೀಟ್ ಠಾಣೆಯ ರೌಡಿಶೀಟರ್ ಆಗಿದ್ದಾನೆ. ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆಂದು ಸಿಬ್ಬಂದಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಪರೀಕ್ಷೆ ಮುಗಿಸಿ ಠಾಣೆಗೆ ವಾಪಸು ಕರೆದೊಯ್ಯಲು ಜೀಪು ಹತ್ತಿಸಲಾಗುತ್ತಿತ್ತು. ಅದೇ ವೇಳೆ ಪೊಲೀಸರನ್ನು ತಳ್ಳಿ ಓಡಿ ಹೋಗಿದ್ದಾನೆ. ಆತನನ್ನು ಬೆನ್ನಟ್ಟಿದರೂ ಸಿಕ್ಕಿಲ್ಲ ಎಂದು ಹೇಳಿದರು.
ಇಬ್ಬರು ಪೊಲೀಸ್ ಸಿಬ್ಬಂದಿ ವಿರುದ್ಧವೂ ಕ್ರಮ: ಕಳೆದ ಜುಲೈನಲ್ಲಿ ಆರೋಪಿಯನ್ನು ಗಡಿಪಾರು ಮಾಡಲಾಗಿತ್ತು. ಈ ಅವಧಿಯಲ್ಲಿಯೂ ಆರೋಪಿಯು ಅಪರಾಧ ಕೃತ್ಯ ಎಸೆಗಿದ್ದಾನೆ. ಇದೀಗ ಅತ್ಯಾಚಾರ ಎಸಗಿ ಪೊಲೀಸರ ವಶದಿಂದ ತಪ್ಪಿಸಿಕೊಂಡು ಹೋಗಿದ್ದಾನೆ. ಹೀಗಾಗಿ ಆತನ ವಿರುದ್ಧ ಮತ್ತೂಂದು ಪ್ರಕರಣ ದಾಖಲಿಸಲಾಗಿದೆ. ಇನ್ನು ಆರೋಪಿಯು ತಪ್ಪಿಸಿಕೊಳ್ಳಲು ಕಾರಣರಾದ ಇಬ್ಬರು ಪೊಲೀಸ್ ಸಿಬ್ಬಂದಿ ವಿರುದ್ಧವೂ ಇಲಾಖಾ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಹಿಡಿದು ಥಳಿಸಿದ್ದ ಜನ: ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಮಾ.31ರ ಬೆಳಗ್ಗೆ ನೇಪಾಳದ ಮಹಿಳೆ ಮೇಲೆ ರೌಡಿ ಅವೇಜ್ ಅತ್ಯಾಚಾರ ಎಸಗಿದ್ದ. ಮಹಿಳೆ ಕೂಗಾಟ ಕೇಳಿ ರಕ್ಷಣೆಗೆ ಹೋಗಿದ್ದ ಸ್ಥಳೀಯರು, ಅವೇಜ್ನನ್ನು ಹಿಡಿದು ಥಳಿಸಿದ್ದರು. ನಂತರ, ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ ಕೈಗೆ ಒಪ್ಪಿಸಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.