ಹಿಜಾಬ್ ವಿವಾದ; ಅಲ್ಲಾಹನನ್ನು ನಂಬಿ, ಮುಲ್ಲಾಗಳನ್ನಲ್ಲ: ಅನಿಲ್ ಮೆಣಸಿನಕಾಯಿ

ಭಾರತೀಯ ವಾತಾವರಣಕ್ಕೆ ಬುರ್ಖಾ ಧರಿಸುವ ಅಗತ್ಯವಿಲ್ಲ‌

Team Udayavani, Apr 2, 2022, 6:21 PM IST

1-addsa

ಗದಗ: ನಾಡಿನಲ್ಲಿ ಇತ್ತೀಚೆಗೆ ಹಿಜಾಬ್ ಮತ್ತು ಹಲಾಲ್ ಬಗ್ಗೆ ಗಂಬೀರ ಚಿಂತನೆ ನಡೆದಿದ್ದು, ಈ ವಿಚಾರದಲ್ಲಿ ಮುಸ್ಲಿಮರು ಅಲ್ಲಾಹುನನ್ನು ನಂಬಬೇಕೆ ಹೊರತು ಮುಲ್ಲಾಗಳನ್ನಲ್ಲ ಎಂದು ಬಿಜೆಪಿ ಯುವ ಮುಖಂಡ ಅನಿಲ್ ಮೆಣಸಿನಕಾಯಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಬುರ್ಖಾ, ಹಿಜಾಬ್ ಧರಿಸುವ ಹಿಂದಿನ ವೈಜ್ಞಾನಿಕ ಅಂಶಗಳನ್ನು ಅರಿತುಕೊಳ್ಳಬೇಕು.‌ ಮಿಡ್ಲ್ ಈಸ್ಟ್ ಗಳಲ್ಲಿ ಬಿಸಲಿನ ತಾಪ ಹೆಚ್ಚಿರುತ್ತದೆ. ಸೂರ್ಯನ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಅಲ್ಲಿನ ಮಹಿಳೆಯರು ಹಸಿರು, ನೀಲಿ ಹಾಗೂ ಶ್ವೇತ ಬಣ್ಣದ ಬುರ್ಖಾ, ಹಿಜಾಬ್ ಧರಿಸುತ್ತಾರೆ. ಅಲ್ಲದೇ ಒಂಟೆ ಮಾಂಸ‌ ಅವರ ಆಹಾರ ಪದ್ಧತಿಯಾಗಿದ್ದರಿಂದ ದೇಹದಲ್ಲಿ ಹೆಚ್ಚುವರಿಯಾಗಿ ವಿಟಮಿನ್ ‘ಡಿ’ ಉತ್ಪತ್ತಿಯಾಗುವುದರಿಂದ ಚರ್ಮ ಕ್ಯಾನ್ಸರ್, ಎಲುಬು ಕ್ಯಾನ್ಸರ್ ಉಂಟಾಗುವುದನ್ನು ತಡೆಗಟ್ಟಲು ಬುರ್ಖಾ, ಹಿಜಾಬ್ ಧರಿಸುತ್ತಾರೆ. ಅಲ್ಲಿನ ಮುಸ್ಲಿಮರು ದಾಡಿ ಬಿಡುವುದರ ಹಿಂದೆಯೂ ಅಂತಹದ್ದೇ ವೈಜ್ಞಾನಿಕ ಕಾರಣಗಳಿವೆ .ಆದರೆ, ಭಾರತೀಯ ವಾತಾವರಣಕ್ಕೆ ಅಂತಹ ವಸ್ತ್ರ ಧರಿಸುವ ಅಗತ್ಯವಿಲ್ಲ‌ ಎಂದು ಅಭಿಪ್ರಾಯಪಟ್ಟರು.

ಹಿಜಾಬ್ ಕುರಿತು ಈಗಾಗಲೇ ಹೈಕೋರ್ಟ್ ಕೂಡಾ ಸ್ಪಷ್ಟಪಡಿಸಿದೆ. ಅದನ್ನು ವಿರೋಧಿಸುವ ನಡೆ ಸರಿಯಲ್ಲ. ಇದರಿಂದ ಸಂವಿಧಾನ ಶಿಲ್ಪಿ ಡಾ.ಬಿ‌.ಆರ್.ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದಂತಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ಆದರೆ, ವೋಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ಹಿಜಾಬ್ ವಿಚಾರದಲ್ಲಿ ರಾಜಕಾರಣ ಮಾಡುತ್ತಿದೆ. ಕೆಲ ಅಲ್ಪಸಂಖ್ಯಾತ ನಾಯಕರೂ ಕಾಂಗ್ರೆಸ್ ಪಕ್ಷದ ಚೇಲಾಗಳಂತೆ ವರ್ತಿಸುತ್ತಿದ್ದಾರೆ. ಅಂತವರ ಮಾತಿಗೆ ಕಿವಿಗೊಡಬಾರದು ಎಂದು ಮನವಿ‌ ಮಾಡಿದರು.

ಅಲ್ಲದೇ ನಗರದ ಹೃದಯ ಭಾಗದಲ್ಲಿ ಜವಳಗಲ್ಲಿಯ 16 ಎಕರೆ ಪ್ರದೇಶ ಸಂಪೂರ್ಣ ಶ್ರೀ ವೀರನಾರಾಯಣ ದೇವಸ್ಥಾನಕ್ಕೆ ಸೇರಿದ್ದು. ಆದರೆ, ಅನೇಕ‌ ಮುಸ್ಲಿಂ ಕುಟುಂಬಗಳು ದಶಕಗಳಿಂದ ಅನಧಿಕೃತವಾಗು ವಾಸಿಸುತ್ತಿವೆ. ಅವರಿಗೆ ರೆಹಮತ್‌ ನಗರದಲ್ಲಿ ಸ್ಲಂ ಬೋರ್ಡ್ ನಿಂದ ಮನೆಗಳು ಮಂಜೂರಾಗಿದ್ದರೂ, ಅವುಗಳನ್ನು ಬಾಡಿಗೆಗೆ ನೀಡಿ, ಇಲ್ಲೇ ಉಳಿದಿದ್ದಾರೆ. ತಕ್ಷಣ ಅವರನ್ನು ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿಗೆ ಆಗ್ರಹಿಸಿದ ಅವರು, ಕೆಲವರು ವೀರನಾರಾಯಣ ದೇವಸ್ಥಾನದ ಜಾಗೆಯನ್ನು ಅಕ್ರಮವಾಗಿ ಮಾರಾಟ ಮಾಡಿದ್ದು, ಅವುಗಳನ್ನು ವಾಪಸ್ ಪಡೆಯುತ್ತೇವೆ. ಒಂದೇ ಒಂದು ಇಂಚು ಕೂಡಾ ಬಿಟ್ಟುಕೊಡುವುದಿಲ್ಲ ಎಂದರು.

ಜೊತೆಗೆ ಜವಳಗಲ್ಲಿಯ ರಾಜಕಾಲುವೆ ಮೇಲೆ ಮಾಂಸದ ಅಂಗಡಿಗಳು, ಮಳಿಗೆಗಳು ತಲೆ ಎತ್ತಿವೆ. ಅದರಿಂದ‌ ಸುತ್ತಲಿನ ಪ್ರದೇಶ ಗಬ್ಬು ನಾರುತ್ತಿದೆ. ಅವುಗಳನ್ನು ಬೆಟಗೇರಿಯಲ್ಲಿ ನಗರಸಭೆ ನಿಗದಿಪಡಿಸಿದ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ನಗರಸಭೆಗೆ ಒತ್ತಾಯಿಸಿದರು.

ಸ್ಥಳೀಯ ಶಾಸಕ ಎಚ್.ಕೆ.ಪಾಟೀಲ ಸ್ಲಂ ನಿವಾಸಿಗಳ ಹಕ್ಕು ಪತ್ರಗಳ ಹೆಸರಲ್ಲೇ ದಶಕಗಳಿಂದ ರಾಜಕಾರಣ ಮಾಡುತ್ತಿದ್ದಾರೆ. ಆದರೂ, ಬಹುತೇಕರಿಗೆ ಹಕ್ಕು ಪತ್ರ ನೀಡಿಲ್ಲ. ಈ ಬಾರಿ ಬಿಜೆಪಿ ಸರಕಾರದಿಂದ ಅರ್ಹರಿಗೆ ಹಕ್ಕು ಪತ್ರ ಕಲ್ಪಿಸಲಾಗುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ದ್ರಾಕ್ಷಾರಸ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಕಾಂತಿಲಾಲ ಬನ್ಸಾಲಿ, ನಗರಸಭೆ ಅಧ್ಯಕ್ಷೆ ಉಷಾ ಮಹೇಶ ದಾಸರ, ಉಪಾಧ್ಯಕ್ಷೆ ಸುನಂದಾ ಬಾಕಳೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ, ನಗರಸಭೆ ಸದಸ್ಯರಾದ ರಾಘವೇಂದ್ರ ಯಳವತ್ತಿ, ಅನಿಲ್ ಅಬ್ಬಿಗೇರಿ, ದಿಂಡೂರ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.