ಭಾರಿ ಮಳೆ: ಮೂಡಿಗೆರೆ, ಚಿಕ್ಕಮಗಳೂರಿನಲ್ಲಿ ಅವಾಂತರ
Team Udayavani, Apr 3, 2022, 2:22 PM IST
ಚಿಕ್ಕಮಗಳೂರು: ಕಳೆದ ರಾತ್ರಿ ಮೂಡಿಗೆರೆ ಚಿಕ್ಕಮಗಳೂರಿನಲ್ಲಿ ಸುರಿದ ಮಳೆಯ ಅವಾಂತರಗಳನ್ನು ಸೃಷ್ಟಿಸಿದೆ .
ಮೂಡಿಗೆರೆಯಲ್ಲಿ ಭಾರೀ ಮಳೆ ಬಂದಿದ್ದು ಮಹಾಮಳೆಗೆ ಮನೆಯ ಮೇಲ್ಛಾವಣಿ ಹಾರಿ ಹೋಗಿದೆ . ಮೂಡಿಗೆರೆ ತಾಲೂಕಿನ ಗೋಣಿಬೀಡು ಗ್ರಾಮದ ಗಿರಿಜನ ಕಾಲೋನಿಯ ಕೂಲಿ ಕಾರ್ಮಿಕ ಹರೀಶ್ ಮನೆಗೆ ಹಾನಿಯಾಗಿದೆ .
ಕಳೆದ ನಾಲ್ಕೈದು ದಿನದಿಂದ ಸಂಜೆ ಈ ಭಾಗದಲ್ಲಿ ಮಳೆ ಸುರಿಯುತ್ತಲೇ ಇದೆ. ಭಾರೀ ಮಳೆಯಿಂದ ಜಿಲ್ಲಾದ್ಯಂತ ಅಲ್ಲಲ್ಲಿ ಸಣ್ಣ-ಪುಟ್ಟ ಅವಾಂತರ ಉಂಟಾಗಿದ್ದು ಜಿಲ್ಲಾ ಕೇಂದ್ರ ಚಿಕ್ಕಮಗ ಳೂರಿನ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ .
ಟಿಪ್ಪು ನಗರ ಸಮೀಪ , ಸಣ್ಣ ಕಾಲುವೆಗೆ ದೊಡ್ಡ ಕಾಲುವೆಯ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ . ಸೇತುವೆಯಲ್ಲಿ ಭಾರಿ ಪ್ರಮಾಣದ ಕಸ ಕಡ್ಡಿ ತುಂಬಿಕೊಂಡಿದ್ದು ನೀರು ಸರಾಗವಾಗಿ ಹರಿಯದೆ , ಉಕ್ಕಿ ಹರಿದು ತಗ್ಗು ಪ್ರದೇಶಗಳು ಜಲಾವೃತವಾಗಿವೆ .
ಇಂದು ಬೆಳಿಗ್ಗೆ ನಗರಸಭೆ ಅಧ್ಯಕ್ಷರು ಮತ್ತು ಆಯುಕ್ತರು ಸಿಬ್ಬಂದಿಯೊಂದಿಗೆ ತೆರಳಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿದ್ದಾರೆ .
ಈ ವೇಳೆ ಕೆಲ ಜಮೀನು ಮಾಲೀಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು
Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್ ಪತ್ನಿ ಆಕ್ರೋಶ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.