ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, Apr 4, 2022, 7:19 AM IST
ಮೇಷ:
ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ. ಗೌರವದಿಂದ ಕೂಡಿದ ಧನಾರ್ಜನೆ. ದೂರ ಪ್ರಯಾಣ. ಅವಿವಾಹಿತರಿಗೆ ಕಂಕಣ ಭಾಗ್ಯ. ಸಾಂಸಾರಿಕ ಸುಖ ವೃದ್ಧಿ. ಸರಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ ಒತ್ತಡ ಎದುರಾದೀತು. ಸಹೋದರ ಸಮಾನರ ನಿಮಿತ್ತ ಧನವ್ಯಯ
ವೃಷಭ:
ಅವಿವಾಹಿತರಿಗೆ ವಿವಾಹ ಭಾಗ್ಯ. ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಸಫಲತೆ. ಸ್ಥಾನಮಾನ ಗೌರವಾದಿಗಳು ವೃದ್ಧಿ. ಹಣಕಾಸಿನ ಉಳಿತಾಯ. ಭೂಮ್ಯಾದಿ ವ್ಯವಹಾರಗಳಲ್ಲಿ ಗೃಹದಲ್ಲಿ ಸಂತಸ
ಮಿಥುನ:
ಧೈರ್ಯ, ಶೌರ್ಯ, ಜವಾಬ್ದಾರಿಯಿಂದ ಕೆಲಸ ನಿರ್ವಹಣೆ. ಪರಿಶ್ರಮದಿಂದ ಸಫಲತೆ. ಆರೋಗ್ಯ ಗಮನಿಸಿ. ಮಾನಸಿಕ ಒತ್ತಡಕ್ಕೆ ಒಳಗಾಗದಿರಿ. ಸಾಂಸಾರಿಕ ಸುಖ ತೃಪ್ತಿದಾಯಕ. ಬಂಧು-ಮಿತ್ರರಿಂದ ಸಹಾಯ ಸಹಕಾರ ಲಭ್ಯ. ಉತ್ತಮ ಧನಾರ್ಜನೆ
ಕಟಕ:
ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತಸ. ಗುರುಹಿರಿಯರ ಆಶೀರ್ವಾದದಿಂದ ಸಂತೋಷ. ಗೃಹೋಪಕರಣ ವಸ್ತುಗಳ ಸಂಗ್ರಹ. ಆಸ್ತಿ ವಿಚಾರದಲ್ಲಿ ನಿರೀಕ್ಷಿತ ಪ್ರಗತಿ ಬದಲಾವಣೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ
ಸಿಂಹ:
ದೈಹಿಕ ಆರೋಗ್ಯದ ಬಗ್ಗೆ ಗಮನಹರಿಸಿ. ಅಧಿಕ ಒತ್ತಡಕ್ಕೆ ಅವಕಾಶ ಕೊಡದಿರಿ. ಹಣಕಾಸಿನ ವಿಚಾರದಲ್ಲಿ ಮಂದಗತಿಯಲ್ಲಿ ಪ್ರಗತಿ. ಮಾತಿನಲ್ಲಿ ಸ್ವತ್ಛತೆ ಇರಲಿ. ಚರ್ಚೆಗೆ ಅವಕಾಶ ಕಲ್ಪಿಸದಿರಿ. ಗುರುಹಿರಿಯರಲ್ಲಿ ಸಮಾದಾನದಿಂದಿರಿ.
ಕನ್ಯಾ:
ದೀರ್ಘ ಪ್ರಯಾಣ ಸಂಭವ. ಪಾಲುದಾರಿಕಾ ಕ್ಷೇತ್ರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ದಂಪತಿಗಳಲ್ಲಿ ಅನ್ಯೋನ್ಯತೆಗೆ ಕೊರತೆಯಾಗದಿರಲಿ. ಹಿರಿಯರಿಂದ ಮಕ್ಕಳಿಂದ ಸುಖ ಸಂತೋಷ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ
ತುಲಾ:
ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಗೃಹೋಪಕರಣ ವಸ್ತುಗಳ ಸಂಗ್ರಹ. ದಾಂಪತ್ಯ ಸುಖ ಉತ್ತಮ. ಅವಿವಾಹಿತರಿಗೆ ವಿವಾಹ ಯೋಗ. ವಿದ್ಯಾರ್ಥಿಗಳಿಗೆ ಸವಲತ್ತುಗಳು ಲಭ್ಯ. ವಾಕ್ ಚತುರತೆಯಿಂದ ಕೂಡಿದ ಕಾರ್ಯವೈಖರಿ ಆರ್ಥಿಕ ಸ್ಥಿತಿ ಪ್ರಗತಿ.
ವೃಶ್ಚಿಕ:
ದೈರ್ಯ ಶೌರ್ಯ ಉದಾರತೆಯಿಂದ ಕೂಡಿದ ಕಾರ್ಯ ವೈಖರಿ. ಜನಮನ್ನಣೆ. ಚುರುಕುತನದ ನಡವಳಿಕೆ. ವಿದ್ಯಾರ್ಥಿಗಳಿಗೆ ಶ್ರೇಯಸ್ಸು. ನಿರೀಕ್ಷಿತ ಧನ ಪ್ರಾಪ್ತಿ. ದಾಂಪತ್ಯ ಅನುರಾಗ ವೃದ್ಧಿ ಅವಿವಾಹಿತರಿಗೆ ವಿವಾಹ ಭಾಗ್ಯ ಗುರುಹಿರಿಯರ ಕೃಪೆ
ಧನು:
ಆರೋಗ್ಯ ಗಮನಿಸಿ. ಕುಟುಂಬದಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಪ್ರಯತ್ನಪೂರ್ವ ಕಾರ್ಯ ಸಾಧನೆ. ಉತ್ತಮ ಅಭಿವೃದ್ಧಿದಾಯಕ ಧನಾರ್ಜನೆ. ಬಂಧುಮಿತ್ರರ ಸಹಕಾರದಿಂದ ನೆಮ್ಮದಿ. ಅಧ್ಯಯನ ನಿರತರಿಗೆ ಅನುಕೂಲಕರ ಪರಿಸ್ಥಿತಿ
ಮಕರ:
ಆರೋಗ್ಯ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಸಾಂಸಾರಿಕ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸಫಲತೆ. ಧನಾರ್ಜನೆಗೆ ಸಮವಾಗಿ ಧನ ವ್ಯಯ
ಕುಂಭ:
ನಿರಂತರ ಧನ ಸಂಚಯನ. ದೀರ್ಘ ಪ್ರಯಾಣ. ಪರಊರ ವ್ಯವಹಾರಗಳಲ್ಲಿ ಅಭಿವೃದ್ಧಿದಾಯಕ ಪ್ರಗತಿ. ಸಂದರ್ಭೋಚಿತ ವಾಕ್ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಸಾಂಸಾರಿಕ ಸುಖ ತೃಪ್ತಿದಾಯಕ.
ಮೀನ:
ಆರೋಗ್ಯ ಗಮನಿಸಿ. ತಾಳ್ಮೆಯಿಂದ ವ್ಯವಹರಿಸಿ. ಆರ್ಥಿಕ ಸ್ಥಿತಿ ಸುದೃಢ. ಗೃಹ ವಾಹನ ಇತ್ಯಾದಿಗಳ ನಿಮಿತ್ತ ಧನವ್ಯಯ. ಸಾಂಸಾರಿಕ ಸುಖ ತೃಪ್ತಿದಾಯಕ. ಪರಊರ ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನಮಾನ ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳು. ಪರಿಶ್ರಮಕ್ಕೆ ತಕ್ಕ ಫಲ ಲಭ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.