![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 4, 2022, 3:02 PM IST
ರಾಯಚೂರು: ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರ ದಿನೇ-ದಿನೇ ಹೆಚ್ಚಿಸುತ್ತಿರುವುದನ್ನು ಖಂಡಿಸಿ ಮಹಿಳಾ ಕಾಂಗ್ರೆಸ್ ಘಟಕದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಖಾಲಿ ಸಿಲಿಂಡರ್, ಸ್ಕೂಟರ್ ಹಾಗೂ ಆಟೋಗಳಿಗೆ ಹೂವಿನ ಹಾರ ಹಾಕಿ ಪೂಜೆ ಮಾಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಒಂದು ತಿಂಗಳಲ್ಲಿ ಸತತ ಹತ್ತು ಬಾರಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸಲಾಗಿದೆ. ಗ್ಯಾಸ್ ಸಿಲಿಂಡರ್ ಬೆಲೆ ಕೂಡ ಗಗನಕ್ಕೇರಿದ್ದು, ಜನಜೀವನ ದುಸ್ತರವಾಗಿದೆ. ಮಧ್ಯಮ ವರ್ಗದವರ ಬದುಕು ಬೀದಿಗೆ ಬಂದಂತಾಗಿದೆ. ತಕ್ಷಣವೇ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಕೂಡಲೇ ಪೆಟ್ರೋಲ್ -ಡೀಸೆಲ್ ಬೆಲೆ ಇಳಿಕೆ ಮಾಡಲು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮಹಿಳೆಯರೆಲ್ಲ ಬೀದಿಗೆ ಇಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಶಶಿಕಲಾ ಭೀಮರಾಯ, ಮಂಜುಳಾ ಅಂಬರೀಶ್, ಭಾರತಿ ಯಂಕಣ್ಣ, ಫಾತಿಮಾ ಹುಸೇನ್, ವಂದನಾ, ಪ್ರತಿಭಾ ರೆಡ್ಡಿ, ಖಾಸಿಂಬಿ ಮೆಹಬೂಬ್ ಮಾಲಾ ಭಜಂತ್ರಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.