25 ಕೋಟಿ ಮೌಲ್ಯದ ನಿವೇಶನ ಕಬಳಿಸಲು ಬಿಜೆಪಿ ಸಂಚು

ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಜಿ.ಎಸ್‌. ಮಂಜುನಾಥ್‌ ಗಡಿಗುಡಾಳ್‌ ಆರೋಪ

Team Udayavani, Apr 4, 2022, 3:39 PM IST

davangere

ದಾವಣಗೆರೆ: ಇಲ್ಲಿನ ಎಂಸಿಸಿ ಬಿ ಬ್ಲಾಕ್‌ನಲ್ಲಿ ಮಹಾನಗರಪಾಲಿಕೆಗೆ ಸೇರಿದ 25 ಕೋಟಿ ರೂ. ಮೌಲ್ಯದ ನಿವೇಶನ ಕಬಳಿಸಲು ಬಿಜೆಪಿ ಸಂಚು ರೂಪಿಸಿದೆ ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಜಿ.ಎಸ್‌. ಮಂಜುನಾಥ್‌ ಗಡಿಗುಡಾಳ್‌ ಗಂಭೀರ ಆರೋಪ ಮಾಡಿದ್ದಾರೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷದಿಂದ ಮಹಾನಗರಪಾಲಿಕೆಯ ನಿವೇಶನದಲ್ಲಿ ಒಳಾಂಗಣ ಕ್ರೀಡಾಂಗಣ, ವಾಣಿಜ್ಯ ಕಟ್ಟಡ, ನಗರಪಾಲಿಕೆ ಕಚೇರಿ ನಿರ್ಮಾಣಕ್ಕೆ ಮನವಿ ಮಾಡಲಾಗುತ್ತಿದೆ. ಸ್ವತಃ ಶಾಸಕ ರವೀಂದ್ರನಾಥ್‌ ಕೂಡ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಆ ನಿವೇಶನ ಕಾರ್ಯಾಲಯಕ್ಕೆ ನಿವೇಶನ ಮಂಜೂರು ಮಾಡಿಕೊಡುವಂತೆ ಬಿಜೆಪಿ ಜಿಲ್ಲಾಧ್ಯಕ್ಷರು ಮಹಾನಗರಪಾಲಿಕೆಗೆ ಮನವಿ ಸಲ್ಲಿಸಿದ್ದಾರೆ. ಅದು ನಮ್ಮ ಜಾಗ ಮತ್ತು ನಮ್ಮ ಹಕ್ಕು. ಯಾವುದೇ ಕಾರಣಕ್ಕೂ ನಿವೇಶನ ಬಿಟ್ಟುಕೊಡುವುದಿಲ್ಲ ಎಂದರು.

ಎಂಸಿಸಿ ಬಿ ಬ್ಲಾಕ್‌ನಲ್ಲಿ 3681/10, 3681/10ಎ, 3681/11 ಹಾಗೂ 3681/12 ಸರ್ವೇ ನಂಬರ್‌ನಲ್ಲಿ 131.23 -196.86 ಅಡಿ ಸುತ್ತಳತೆಯ ಮಹಾನಗರ ಪಾಲಿಕೆಗೆ ಸೇರಿದ ನಿವೇಶನ ಇದೆ. ಈಗಿನ ಮಾರುಕಟ್ಟೆ ಬೆಲೆ 25 ಕೋಟಿ ರೂ. ಆಗಬಹುದು. ಅಂತಹ ಬೆಲೆ ಬಾಳುವ ಮತ್ತು ಸಾರ್ವಜನಿಕ ಅನುಕೂಲಕ್ಕೆ ಮೀಸಲಿಟ್ಟಿರುವ ಜಾಗವನ್ನ ಬಿಜೆಪಿ ಕಾರ್ಯಾಲಯಕ್ಕೆ ಮಂಜೂರು ಮಾಡಿಕೊಡಬೇಕು ಎಂದು ಜಿಲ್ಲಾಧ್ಯಕ್ಷ ಎಸ್‌. ಎಂ. ವೀರೇಶ್‌ ಹನಗವಾಡಿ ಜ. 20ರಂದು ಮಹಾನಗರ ಪಾಲಿಕೆ ಆಯುಕ್ತರಿಗೆ ಅರ್ಜಿ ಸಲ್ಲಿಸಿದ್ದಾರೆ. ಆ ಮೂಲಕ ನಿವೇಶನ ಕಬಳಿಸುವ ಯತ್ನ ನಡೆಸಲಾಗುತ್ತಿದೆ ಎಂದು ದೂರಿದರು.

ನಾವು ಯಾವುದೇ ಕಾರಣಕ್ಕೂ ನಿವೇಶನ ಬಿಟ್ಟು ಕೊಡುವುದಿಲ್ಲ. ಕಾನೂನು ಹೋರಾಟ ಒಳಗೊಂಡಂತೆ ಎಲ್ಲ ಹಂತದ ಹೋರಾಟ ನಡೆಸುತ್ತೇವೆ. ಆ ಜಾಗವನ್ನು ಬಿಜೆಪಿ ಆಸ್ತಿಯನ್ನಾಗಿ ಮಾಡಿಕೊಳ್ಳಲು ಬಿಡುವುದೇ ಇಲ್ಲ. ಎಂತದ್ದೇ ತ್ಯಾಗಕ್ಕೂ ಸಿದ್ಧ ಎಂದು ಗುಡುಗಿದರು.

ಕಾಂಗ್ರೆಸ್‌ ಸದಸ್ಯ ಎ. ನಾಗರಾಜ್‌ ಮಾತನಾಡಿ, ಮಹಾನಗರ ಪಾಲಿಕೆ ಬಜೆಟ್‌ ಸಭೆಯಲ್ಲಿ ಏಕಾಏಕಿ ಸ್ವಯಂ ಘೋಷಣೆ ಆಸ್ತಿ ತೆರಿಗೆ ಹೆಚ್ಚಳ ಮಾಡಿರುವುದನ್ನ ವಿರೋಧಿಸಿ ಮುಂದಿನ ದಿನಗಳಲ್ಲಿ ಹಂತ ಹಂತದ ಹೋರಾಟ ನಡೆಸಲಾಗುವುದು. ಕೊರೊನಾ ಕಾರಣದಿಂದ ತೆರಿಗೆ ಹೆಚ್ಚಳ ಮಾಡದಂತೆ ಮನವಿ ಮಾಡಲಾಗಿತ್ತು. ಆದರೂ ಬಜೆಟ್‌ ಸಭೆಯಲ್ಲಿ ಎಸ್‌ ಎಎಸ್‌ ಪದ್ಧತಿಯಡಿ ಶೇ. 3 ರಷ್ಟು ತೆರಿಗೆ ಹೆಚ್ಚಿಸಿರುವುರಿಂದ ಜನರಿಗೆ ಹೊರೆ ಅಗಲಿದೆ. 2005-06ರಲ್ಲಿ ನಿಗದಿಯಾಗಿರುವಂತೆ ತೆರಿಗೆ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.

2020-21ನೇ ಸಾಲಿನಲ್ಲಿ ಜಿಲ್ಲಾಧಿಕಾರಿ ಅಧಿಕಾರಾವಧಿಯಲ್ಲಿ ವಸತಿ ವಲಯಕ್ಕೆ ಶೇ. 15, ವಾಣಿಜ್ಯ ಸಂಕೀರ್ಣಕ್ಕೆ ಶೇ. 17 ತೆರಿಗೆ ಹೆಚ್ಚಿಸಲಾಗಿದೆ. ಈಗ ಉಪ ನೋಂದಣಿ ಇಲಾಖೆ ಮೌಲ್ಯದ ಆಧಾರದಲ್ಲಿ ಶೇ. 3 ರಿಂದ 5ರಷ್ಟು ತೆರಿಗೆ ಹೆಚ್ಚಿಸಿರುವುದರಿಂದ ತೆರಿಗೆ ಪಾವತಿದಾರರಿಗೆ ಹೆಚ್ಚು ಹೊರೆ ಆಗಲಿದೆ. ಒಂದು ವರ್ಷ ತೆರಿಗೆ ಕಟ್ಟದೇ ಹೋದಲ್ಲಿ ಶೇ. 24ರಷ್ಟು ದಂಡ ಹಾಕಲಾಗುವುದು. ಮೂಲ ಕಂದಾಯಕ್ಕೆ ಸೆಸ್‌ ವಿಧಿಸಬೇಕು. ತೆರಿಗೆ ಹೆಚ್ಚಳ ಹಿಂದಕ್ಕೆ ಪಡೆಯಬೇಕು. ಇಲ್ಲದೆ ಹೋದರೆ ಕಾಂಗ್ರೆಸ್‌ ನಿಂದ ಹೋರಾಟ ಮಾಡಲಾಗುವುದು ಎಂದರು.

ಸದಸ್ಯ ಕೆ. ಚಮನ್‌ ಸಾಬ್‌ ಮಾತನಾಡಿ, ಕೇಂದ್ರ, ರಾಜ್ಯ ಸರ್ಕಾರ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು, ಜನರ ಬೇರೆಡೆ ಗಮನ ಸೆಳೆಯಲು ಹಿಜಾಬ್‌, ಕಾಶ್ಮೀರ್‌ ಫೈಲ್ಸ್‌, ಈಗ ಜಟ್ಕಾ, ಹಲಾಲ್‌ ಕಟ್‌ ವಿಚಾರ ಕೈಗೆತ್ತಿಕೊಂಡಿವೆ ಎಂದು ದೂರಿದರು. ಕೆಪಿಸಿಸಿ ವಕ್ತಾರ ಡಿ. ಬಸವರಾಜ್‌, ಗಣೇಶ್‌ ಹುಲ್ಮನೆ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

BJP Waqf protest: Renukacharya, Gayatri Siddeshwar and many others taken into police custody

Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್‌ ವಶಕ್ಕೆ

BBommai

Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.