ಕುರಿ-ಕೋಳಿ ಮಾಂಸ ಮಾರಾಟಕ್ಕೆ ಪ್ರತ್ಯೇಕ ವಲಯ ಅಗತ್ಯ


Team Udayavani, Apr 4, 2022, 4:23 PM IST

ಕುರಿ-ಕೋಳಿ ಮಾಂಸ ಮಾರಾಟಕೆ ಪ್ರತ್ಯೇಕ ವಲಯ ಅಗತ್ಯ

ದಾವಣಗೆರೆ:  ಹಲಾಲ್‌, ಜಟ್ಕಾ ಕಟ್‌ನಿಂದ ಕುಕ್ಕುಟೋದ್ಯಮದ ಮೇಲೆ ಭಾರೀ ಪರಿಣಾಮ ಉಂಟಾಗುತ್ತಿದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ
ಅತ್ಯಾಧುನಿಕ ಕಸಾಯಿಖಾನೆ, ಕುರಿ, ಕೋಳಿ ಮಾಂಸ ಮಾರಾಟಕ್ಕೆ ಪ್ರತ್ಯೇಕ ವಲಯ ಪ್ರಾರಂಭಿಸಬೇಕು ಎಂದು ಕರ್ನಾಟಕ ಕುಕ್ಕುಟ ಸಹಕಾರ ಮಹಾಮಂಡಳ ಸದಸ್ಯ ಮಲ್ಲಾಪುರ
ದೇವರಾಜ್‌ ಒತ್ತಾಯಿಸಿದ್ದಾರೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಕ್ಕುಟೋದ್ಯಮ ಹಲಾಲ್‌, ಜಟ್ಕಾ ಕಟ್‌ ವಿವಾದದಿಂದ ನಲುಗುತ್ತಿದೆ. ಹಲಾಲ್‌, ಜಟ್ಕಾ ಕಟ್‌, ಧರ್ಮದ ಹೆಸರಲ್ಲಿ ಸುಖಾಸುಮ್ಮನೆ ಅಶಾಂತಿ ಉಂಟು ಮಾಡಲಾಗುತ್ತಿದೆ. ಯಾರೋ ಹಲಾಲ್‌, ಜಟ್ಕಾ ಕಟ್‌ ಬಗ್ಗೆ ಚರ್ಚಿಸುತ್ತಾರೆ. ನೇರವಾಗಿ ಸಮಸ್ಯೆ ಆಗುತ್ತಿರುವುದು ಕುಕ್ಕುಟೋದ್ಯಮಿಗಳಿಗೆ ಎಂದು ಅಳಲು ತೋಡಿಕೊಂಡರು.

ಸಾರ್ವಜನಿಕರು ಅವರಿಗೆ ಬೇಕಾದಂತೆ ಆಹಾರ ಪದ್ಧತಿ ಅನುಸರಿಸುತ್ತಾರೆ. ಇದನ್ನೇ, ಹೀಗೆಯೇ ತಿನ್ನಬೇಕು ಎಂದು ಹೇಳುವುದು, ಅನಗತ್ಯ ವಿವಾದ ಉಂಟು ಮಾಡುವುದು ಸರಿಯಲ್ಲ. ಹಲಾಲ್‌, ಜಟ್ಕಾ ಕಟ್‌ ಎರಡೂ ಅವೈಜ್ಞಾನಿಕ. ಜನರಿಗೆ ಹೇಗೆ ಬೇಕೋ ಹಾಗೆ ತಿನುತ್ತಾರೆ. ಆದರೂ ಎಂದೆಂದಿಗೂ ಕೋಳಿ ಮಾಂಸ ಬಳಕೆ ಮಾಡದೇ ಇದ್ದಂತಹವರು ಹಲಾಲ್‌, ಜಟ್ಕಾ ಕಟ್‌
ಬಗ್ಗೆ ಚರ್ಚೆ ಮಾಡುವುದು, ಒಂದು ರೀತಿಯ ಫರ್ಮಾನಿನಂತೆ ಹೇಳುತ್ತಿರುವುದು ನಿಜಕ್ಕೂ ವಿಪರ್ಯಾಸ ಎಂದು ಬೇಸರ ವ್ಯಕ್ತಪಡಿಸಿದರು.

ಸರ್ಕಾರಕ್ಕೆ ಯಾವುದೇ ರೀತಿಯಲ್ಲಿ ಹಲಾಲ್‌, ಜಟ್ಕಾ ಕಟ್‌ ಸಮಸ್ಯೆ ಬೇಡ ಎನ್ನುವುದಾದರೆ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಅತ್ಯಾಧುನಿಕ, ಸುಸಜ್ಜಿತ ಕಸಾಯಿಖಾನೆ ಪ್ರಾರಂಭಿಸಬೇಕು.
ಅಲ್ಲಿ ಮಾಂಸ ಸಂಸ್ಕರಣೆಗೆ ಅವಕಾಶ ಮಾಡಿಕೊಡುವುದರಿಂದ ಹಲಾಲ್‌, ಜಟ್ಕಾ ಕಟ್‌ ಸಮಸ್ಯೆ ಉದ್ಭವವಾಗುವುದೇ ಇಲ್ಲ. ಮೀನು ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿರುವಂತೆ ಕುರಿ,
ಕೋಳಿ ಮಾಂಸ ಮಾರಾಟಕ್ಕೆ ಪ್ರತ್ಯೇಕ ವಲಯ ನಿರ್ಮಾಣ ಮಾಡಿದಲ್ಲಿ ವ್ಯಾಪಾರಸ್ಥರು ಬಂದು ನೇರವಾಗಿ ಗ್ರಾಹಕರಿಗೆ ಕುರಿ, ಕೋಳಿ ಮಾಂಸ ಮಾರಾಟ ಮಾಡುವರು. ಅದರಿಂದ ಜನರಿಗೆ,
ಕುಕ್ಕುಟೋದ್ಯಮಿಗಳಿಗೆ ಅನುಕೂಲ ಆಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ : 25 ಕೋಟಿ ಮೌಲ್ಯದ ನಿವೇಶನ ಕಬಳಿಸಲು ಬಿಜೆಪಿ ಸಂಚು : ಮಂಜುನಾಥ್‌ ಗಡಿಗುಡಾಳ್‌ ಗಂಭೀರ ಆರೋಪ

ಮೊದಲಿನಿಂದಲೂ ಕೋಳಿ, ಕುರಿ ಮಾಂಸ ಬಳಕೆ ನಡೆದೇ ಇತ್ತು. ಹಲಾಲ್‌, ಜಟ್ಕಾ ಕಟ್‌ ಗೊತ್ತೇ ಇರಲಿಲ್ಲ. ಈಗ ನಿರ್ಮಾಣವಾಗಿರುವ ಹಲಾಲ್‌, ಜಟ್ಕಾ ಕಟ್‌ ವಿವಾದದಿಂದ ಕೋಳಿ ಸಾಕಾಣಿಕೆ ರೈತರು ಕೋಳಿ ಮಾರಾಟ ಮಾಡಲಾಗುತ್ತಿಲ್ಲ. ಜನರು ಮುಕ್ತವಾಗಿ ಮಾರುಕಟ್ಟೆಗೆ ಬರದಂತಾಗಿದೆ. 45 ರೂಪಾಯಿಗೆ ಕೋಳಿ ಮರಿ ಖರೀದಿ ಮಾಡಿ ಒಂದು ಕೆಜಿ ಮಾಂಸದ ಕೋಳಿ ಮಾಡುವುದಕ್ಕೆ 200 ರೂಪಾಯಿಗೂ ಹೆಚ್ಚು ಖರ್ಚಾಗುತ್ತದೆ. ರೈತರು ನಷ್ಟಕ್ಕೆ ಒಳಗಾಗುತ್ತಿದ್ದರೂ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ. ಕೋಳಿ ಸಾಕಾಣಿಕೆ ರೈತರು ಅನುಭವಿಸುತ್ತಿರುವ ನಷ್ಟಕ್ಕೆ ಹೊಣೆಗಾರರು ಯಾರು ಎಂದು ಪ್ರಶ್ನಿಸಿದರು.

ದಾವಣಗೆರೆಯಲ್ಲಿ ಬಹಳ ದಿನಗಳಿಂದಲೂ ಕೋಳಿ ಮಾಂಸ ಮಾರಾಟಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಳ್ಳುತ್ತಿದ್ದೇವೆ. ಆದರೆ ಜನಪ್ರತಿನಿಧಿಗಳು,
ಅಧಿಕಾರಿಗಳು ಗಮನ ನೀಡುತ್ತಿಲ್ಲ ಎಂದು ದೂರಿದರು. ಕೋಳಿ ಸಾಕಾಣಿಕೆ ರೈತರಾದ ಐಗೂರು ಶಿವಮೂರ್ತಿ, ನಾಗರಾಜ್‌ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

R Ashok (2)

BPL ಕಾರ್ಡ್‌ನಿಂದ ಎಪಿಎಲ್‌ಗೆ 6ನೇ ಗ್ಯಾರಂಟಿ: ಅಶೋಕ್‌ ಲೇವಡಿ

renukaacharya

Waq ಹೋರಾಟಕ್ಕೆ ವಿಜಯೇಂದ್ರ ತಂಡಗಳೇ ಅಧಿಕೃತ: ರೇಣುಕಾಚಾರ್ಯ

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.