ಎಲ್ಲವೂ ಅಂದುಕೊಂಡಂತೆ ನಡೆದರೆ ಏಪ್ರಿಲ್ 8 ರಂದು ಸಂಪುಟ ಪುನರ್ ರಚನೆ
ಕೊನೆಗೂ ಒಂದು ಹಂತಕ್ಕೆ ಬಂದು ನಿಂತ ಸರ್ಕಸ್
Team Udayavani, Apr 4, 2022, 7:54 PM IST
ಬೆಂಗಳೂರು : ರಾಜ್ಯ ಸರಕಾರದ ಬಹುನಿರೀಕ್ಷಿತ ಸಂಪುಟ ಪುನರ್ ರಚನೆ ಸರ್ಕಸ್ ಕೊನೆಗೂ ಒಂದು ಹಂತಕ್ಕೆ ಬಂದು ನಿಂತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಏಪ್ರಿಲ್ 8 ರಂದು ಸಂಪುಟ ಪುನರ್ ರಚನೆಗೆ ಮುಹೂರ್ತ ನಿಗದಿಯಾಗಲಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಭೇಟಿ ಸಂದರ್ಭದಲ್ಲೇ ಸಂಪುಟ ಪುನರ್ ರಚನೆ ಪ್ರಸ್ತಾಪಕ್ಕೆ ಒಪ್ಪಿಗೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಸಂಪುಟ ಪುನರ್ ರಚನೆಗೆ ಹೈಕಮಾಂಡ್ ಒಪ್ಪಿಗೆ ಸೂಚಿಸುತ್ತಿದ್ದಂತೆ ಕೊಕ್ ಸಿಗಲಿದೆ ಎಂಬ ಆತಂಕಕ್ಕೆ ಒಳಗಾಗಿರುವ ಕೆಲ ಸಚಿವರು ಈಗಾಗಲೇ ದಿಲ್ಲಿಯಲ್ಲಿ ಬೀಡುಬಿಟ್ಟಿದ್ದಾರೆ. ಆಕಾಂಕ್ಷಿಗಳು ದಿಲ್ಲಿ ಸೇರಿ ಲಾಬಿ ನಡೆಸುವುದಕ್ಕೆ ಪ್ರಾರಂಭಿಸಿದ್ದಾರೆ. ಹೀಗಾಗಿ ರಾಜ್ಯ ರಾಜಕಾರಣದ ಚೆಂಡು ಈಗ ದಿಲ್ಲಿ ಅಂಗಣಕ್ಕೆ ಶಿಫ್ಟ್ ಆಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಏಪ್ರಿಲ್ 8 ರಂದು ಹೊಸ ಸಚಿವರು ಪ್ರಮಾಣ ವಚನ ಸ್ವೀಕರಿಸುವುದು ಪಕ್ಕಾ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ.
ಚುನಾವಣಾ ಸಂಪುಟ
ಮೂಲಗಳ ಪ್ರಕಾರ ವರಿಷ್ಠರು ಈ ಬಾರಿ ಚುನಾವಣಾ ಸಂಪುಟಕ್ಕೆ ಒತ್ತು ನೀಡಲಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ ಹೆಚ್ಚಿನ ಮಹತ್ವ ಸಿಗಬಹುದು.ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೂಡಾ ದಿಲ್ಲಿಗೆ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದ್ದು, ನಾಳೆ ಸಾಯಂಕಾಲ ಇನ್ನಷ್ಟು ಜನರು ದಿಲ್ಲಿಗೆ ತೆರಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.