ರಾಜ್ಯ ಪ್ರವಾಸೋದ್ಯಮದ ಅಭಿವೃದ್ಧಿಗೆ ಲಿಂಕೇಜ್‌ ಯೋಜನೆ!


Team Udayavani, Apr 5, 2022, 7:53 AM IST

ರಾಜ್ಯ ಪ್ರವಾಸೋದ್ಯಮದ ಅಭಿವೃದ್ಧಿಗೆ ಲಿಂಕೇಜ್‌ ಯೋಜನೆ!

ಉಡುಪಿ: ರಾಜ್ಯ ಅಥವಾ ಜಿಲ್ಲೆಯ ಪರಿಸರ, ಪಾರಂಪರಿಕ, ಗ್ರಾಮೀಣ, ಆಧ್ಯಾತ್ಮಿಕ ಹಾಗೂ ವನ್ಯಜೀವಿ ಪ್ರವಾಸೋದ್ಯಮವನ್ನು ಲಿಂಕೇಜ್‌ ಮಾಡಲು ಪ್ರವಾ ಸೋದ್ಯಮ ಸರ್ಕ್ನೂಟ್‌ ಅಭಿ ವೃದ್ಧಿ ಪಡಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಎಲ್ಲ ಜಿಲ್ಲೆಗಳಿಂದಲೂ ಪ್ರಸ್ತಾವನೆಯನ್ನು ಪಡೆಯಲಾಗುತ್ತಿದೆ.

ಚಾರಿತ್ರಿಕ, ಸಾಂಸ್ಕೃತಿಕ, ಧಾರ್ಮಿಕ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಯ ಪರಿಕಲ್ಪನೆಯಡಿ ಒಂದಕ್ಕೊಂದು ಸಂಪರ್ಕ ಕಲ್ಪಿಸಿ, ಆಯಾ ಜಿಲ್ಲೆಯ ಪ್ರವಾಸೋದ್ಯಮ ಸಮಗ್ರ ಮಾಹಿತಿ ಒಂದೆಡೆ ಲಭ್ಯವಾಗುವ ಜತೆಗೆ ಪ್ರವಾಸಿಗರಿಗೆ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಲು ಇದರಿಂದ ಅನುಕೂಲವಾಗಲಿದೆ.

ಚಾರಿತ್ರಿಕ ಪ್ರವಾಸೋದ್ಯಮದ ಉತ್ತೇ ಜನಕ್ಕಾಗಿ ಕೇಂದ್ರ ಸರಕಾರದ ವಿವಿಧ ಇಲಾಖೆಗಳ ಸಹಯೋಗ ಪಡೆಯಲು ಪ್ರಯತ್ನ ನಡೆಯುತ್ತಿದೆ. ಇದರಡಿ ರಾಜ್ಯದ ನಾಲ್ಕೈದು ಪಾರಂಪರಿಕ ತಾಣ ಗಳು ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಯಾಗಲಿವೆ. ಬೇಲೂರು, ಹಳೆಬೀಡು, ಹೊಯ್ಸಳ ಸ್ಮಾರಕ ಯುನೆಸ್ಕೋ ತಾತ್ಕಾಲಿಕ ಪಟ್ಟಿಯಲ್ಲಿದ್ದು, ರಾಜ್ಯದ ಇನ್ನಷ್ಟು ಸ್ಥಳ ಗಳನ್ನು ಈ ಪಟ್ಟಿಗೆ ಸೇರಿಸಲು ಪ್ರಯತ್ನ ನಡೆಯುತ್ತಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಸಾಂಸ್ಕೃತಿಕ ಪ್ರವಾಸೋದ್ಯಮದ ಪ್ರೋತ್ಸಾಹಕ ಅಂಶಗಳಾದ ಕಲೆ, ಕರಕುಶಲತೆ, ತಿಂಡಿ ತಿನಿಸು, ಪ್ರದೇಶಿಕ ಉತ್ಸವ, ಜಾತ್ರೆ, ಹಬ್ಬಕ್ಕೆ ಮಹತ್ವ ನೀಡಿ ಇನ್ನಷ್ಟು ಅಭಿವೃದ್ಧಿಪಡಿಸಲಾಗುತ್ತದೆ. ಧಾರ್ಮಿಕ ಮತ್ತು ಆಧ್ಯಾತ್ಮಿಕ ಸಂಸ್ಥೆಗಳನ್ನು ಪರಿಗಣನೆಗೆ ತೆಗೆದುಕೊಂಡು ಅಲ್ಲಿರುವ ಸೌಲಭ್ಯ, ಪ್ರವಾಸಿಗರಿಗೆ ಗುಣ್ಣಮಟ್ಟದ ಸೇವೆ ಒದಗಿಸುವುದು ಇತ್ಯಾದಿ ಯೋಜ ನೆಯ ಭಾಗವಾಗಿರಲಿದೆ.

ಜಿಲ್ಲೆಗಳಿಂದ ಪ್ರಸ್ತಾವನೆ
ಪ್ರವಾಸೋದ್ಯಮದ ಅಭಿವೃದ್ಧಿಗೆ ಪ್ರಮುಖವಾಗಿರುವ ಈ ಐದು ಅಂಶಗಳನ್ನು ಒಳಗೊಂಡಂತೆ ಆಯಾ ಜಿಲ್ಲೆಗಳ ಪ್ರಮುಖ ಪ್ರವಾಸೋದ್ಯಮ ಸ್ಥಳಗಳು, ಅಲ್ಲಿರುವ ಸೌಲಭ್ಯ, ಯಾವ ಅಂಶಗಳನ್ನು ಹೇಗೆ ಲಿಂಕ್‌ ಮಾಡಬಹುದು ಎಂಬಿತ್ಯಾದಿ ಎಲ್ಲ ಮಾಹಿತಿಯನ್ನು ಒಳಗೊಂಡ ಪ್ರಸ್ತಾವನೆಯನ್ನು ಜಿಲ್ಲೆ ಗಳಿಂದ ಪಡೆಯುತ್ತಿದ್ದೇವೆ. ಕೆಲವು ಜಿಲ್ಲೆಗಳಿಂದ ಈಗಾಗಲೇ ಪ್ರಸ್ತಾವನೆ ಬಂದಿದೆ. ಇನ್ನು ಕೆಲವು ಜಿಲ್ಲೆಗಳಲ್ಲಿ ಪ್ರಸ್ತಾವನೆ ಸಿದ್ಧಪಡಿಸುವ ಸಂಬಂಧ ಸಭೆಗಳು ನಡೆಯುತ್ತಿದೆ ಎಂದು ಇಲಾಖೆಯ ಉನ್ನತ ಅಧಿಕಾರಿಯೊಬ್ಬರು ಉದಯವಾಣಿಗೆ ತಿಳಿಸಿದರು.

ಸರ್ಕ್ಯೂಟ್ ಲಿಂಕೇಜ್‌ ಹೇಗೆ?
ಇದಕ್ಕೆ ಜಿಲ್ಲೆಗಳ ಗಡಿ ರೇಖೆ ಇರುವುದಿಲ್ಲ. ರಾಜ್ಯವ್ಯಾಪಿ ಪ್ರವಾಸೋದ್ಯಮ ಅಭಿವೃದ್ಧಿಗೆ ನಡೆಸಿರುವ ಯೋಚನೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಈ ಮೂರು ಜಿಲ್ಲೆಗಳನ್ನು ಸೇರಿಸಿಕೊಂಡು ಬೀಚ್‌ಗಳ ಅಭಿವೃದ್ಧಿಯ ಜತೆಗೆ ಅದಕ್ಕೆ ಹೊಂದಿಕೊಂಡಿರುವ ಧಾರ್ಮಿಕ ಕೇಂದ್ರಗಳ ಲಿಂಕೇಜ್‌ ಮಾಡಲಾಗುತ್ತದೆ. ಚಿಕ್ಕಮಗಳೂರು, ಹಾಸನ ಮೊದಲಾದ ಜಿಲ್ಲೆಗಳನ್ನು ಒಳಗೊಂಡು ಪರಿಸರ ಪ್ರವಾಸೋ ದ್ಯಮ, ವನ್ಯಜೀವಿ ತಾಣಗಳಿರುವ ಜಿಲ್ಲೆಗಳನ್ನು ಸೇರಿಸಿಕೊಂಡು (ಕೊಡಗು, ಚಾಮರಾಜನಗರ ಇತ್ಯಾದಿ) ವನ್ಯಜೀವಿ ಪ್ರವಾಸೋದ್ಯಮ, ಸಾಂಸ್ಕೃತಿಕ ರಾಜಧಾನಿ ಎಂದೇ ಕರೆಯಲ್ಪಡುವ ಮೈಸೂರನ್ನು ಸಾಂಸ್ಕೃತಿಕ ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುತ್ತದೆ. ಪರಿಸರ, ಪಾರಂಪರಿಕ, ಗ್ರಾಮೀಣ, ಆಧ್ಯಾತ್ಮಕ ಹಾಗೂ ವನ್ಯಜೀವಿ ಪ್ರವಾಸೋದ್ಯದ ಲಿಂಕೇಜ್‌ ಮಾಡಲಾಗುತ್ತದೆ.

ಸ್ಥಳೀಯವಾಗಿ ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜನೆಗಳನ್ನು ಸಿದ್ಧ ಪಡಿಸುತ್ತಿದ್ದೇವೆ. ಧಾರ್ಮಿಕ ಸ್ಥಳಗಳಿಗೆ ಬರುವವರಿಗೆ ಇನ್ನಷ್ಟು ಧಾರ್ಮಿಕ ಸ್ಥಳ ವನ್ನು ಪರಿಚಯಿಸುವುದು, ಟ್ರಕ್ಕಿಂಗ್‌ ಮಾಡುವವರಿಗೆ ಮಾಹಿತಿ ಒದಗಿಸುವುದು ಹೀಗೆ ಹಲವು ಯೋಚನೆಗಳು ನಡೆಯುತ್ತಿವೆ‌. ಇದಕ್ಕೆ ರಾಜ್ಯದ ಒಪ್ಪಿಗೆ ಬೇಕಾಗುವುದಿಲ್ಲ. ಆದರೆ ಅವರ ವೆಬ್‌ಸೈಟ್‌ನಲ್ಲಿ ಮಾಹಿತಿ ಅಳವಡಿಸಲು ಅಲ್ಲಿಗೆ ಸಲ್ಲಿಸಲಾಗುತ್ತದೆ.
-ಡಾ| ಕೆ.ವಿ. ರಾಜೇಂದ್ರ, ದ.ಕ. ಜಿಲ್ಲಾಧಿಕಾರಿ

ಪ್ರವಾಸೋದ್ಯಮದ ಲಿಂಕೇಜ್‌ಗೆ ಸಂಬಂಧಿಸಿದ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸಲ್ಲಿಸಲಿದ್ದೇವೆ. ಬೀಚ್‌, ಧಾರ್ಮಿಕ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳು ಇವೆ.
– ಕೂರ್ಮಾ ರಾವ್‌ ಎಂ., ಉಡುಪಿ ಜಿಲ್ಲಾಧಿಕಾರಿ

-ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

KAUP: ಸಂವಿಧಾನ ಉಳಿಸಿ ಬೃಹತ್‌ ಜಾಥಾ ಮತ್ತು ಸಾರ್ವಜನಿಕ ಸಭೆ

KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್‌ ರಾಜ್‌ ಮೌರ್ಯ

man-a

Udupi: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.