ಪಹಣಿ ತಿದ್ದುಪಡಿ ಮಾಡುವ ಅಧಿಕಾರ ಮತ್ತೆ ತಹಶೀಲ್ದಾರ್‌ಗೆ

ಡಿ.31ರವರೆಗೆ ತಿದ್ದುಪಡಿ ಅಧಿಕಾರ ವಿಸ್ತರಣೆ

Team Udayavani, Apr 5, 2022, 1:01 PM IST

9

ದಾವಣಗೆರೆ: ಕಂದಾಯ ಅದಾಲತ್‌ ಕಾರ್ಯಕ್ರಮದ ಮೂಲಕ ಪಹಣಿ ತಿದ್ದುಪಡಿ ಮಾಡಲು ತಹಶೀಲ್ದಾರ್‌ಗೆ ಇರುವ ಅಧಿಕಾರವನ್ನು ಕಂದಾಯ ಇಲಾಖೆ ಮುಂದಿನ ಡಿಸೆಂಬರ್‌ವರೆಗೆ (31-12-2022) ವಿಸ್ತರಿಸಿದೆ.

ಪಹಣಿಗಳಲ್ಲಿನ ಲೋಪಗಳನ್ನು ತ್ವರಿತವಾಗಿ ಸರಿಪಡಿಸಿಕೊಳ್ಳಲು ಕಂದಾಯ ಅದಾಲತ್‌ ಕಾರ್ಯಕ್ರಮ ಹೆಚ್ಚು ಅನುಕೂಲವಾಗುತ್ತಿರುವ ಹಿನ್ನೆಲೆಯಲ್ಲಿ ಇಲಾಖೆ, ಈ ವರ್ಷವೂ ತಿದ್ದುಪಡಿ ಅಧಿಕಾರವನ್ನು ತಹಶೀಲ್ದಾರ್‌ಗೆ ನೀಡಿ ಕಾರ್ಯಕ್ರಮ ಮುಂದುವರಿಸಿದೆ.

ಕಂದಾಯ ಅದಾಲತ್‌ ಮೂಲಕ ಪಹಣಿ ತಿದ್ದುಪಡಿ ಮಾಡುವ ಅಧಿಕಾರವನ್ನು ಸಹಾಯ ಆಯುಕ್ತರಿಂದ ತಹಶೀಲ್ದಾರ್‌ಗೆ ನೀಡಲಾಗಿದೆ. ಈ ಅಧಿಕಾರವನ್ನು ಆಗಾಗ ವಿಸ್ತರಿಸುತ್ತ ಬರಲಾಗಿದೆ. ಈ ವರ್ಷ 31-12-2021ಕ್ಕೆ ಅಧಿಕಾರ ಕೊನೆಗೊಂಡು, ಪಹಣಿ ತಿದ್ದುಪಡಿ ಅಧಿಕಾರ ಮೂರು (ಜನವರಿ, ಫೆಬ್ರವರಿ ಮತ್ತು ಮಾರ್ಚ್‌) ತಿಂಗಳು ಮರಳಿ ಸಹಾಯಕ ಆಯುಕ್ತರ ಕೈಗೆ ಹೋಗಿತ್ತು. ತಹಶೀಲ್ದಾರ್‌ಗೆ ನೀಡಿರುವ ಈ ವಿಶೇಷ ಅಧಿಕಾರವನ್ನು ಈಗ ಡಿಸೆಂಬರ್‌ ಅಂತ್ಯದ ವರೆಗೆ ವಿಸ್ತರಿಸಿದ್ದು, ಪ್ರಸಕ್ತ ಏಪ್ರಿಲ್‌ನಿಂದ ಲೇ ತಹಶೀಲ್ದಾರರು ಕಂದಾಯ ಅದಾಲತ್‌ ಮೂಲಕ ಪಹಣಿ ತಿದ್ದುಪಡಿ ಕಾರ್ಯ ಮುಂದುವರಿಸಲಿದ್ದಾರೆ.

ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ಎಲ್ಲ ತಾಲೂಕುಗಳ ಗ್ರಾಮ ಲೆಕ್ಕಾಧಿ ಕಾರಿಗಳ ವೃತ್ತ ಮಟ್ಟದಲ್ಲಿ ಕಂದಾಯ ಅದಾಲತ್‌ ಗಳನ್ನು ನಡೆಸಿ ಪಹಣಿಗಳಲ್ಲಿನ ಲೋಪಗಳನ್ನು ಸರಿಪಡಿಸಲು ಈ ಕಾರ್ಯಕ್ರಮದ ಮೂಲಕ ಅವಕಾಶ ನೀಡಲಾಗಿದೆ.

ಕಂದಾಯ ಅದಾಲತ್‌ ಕಾರ್ಯಕ್ರಮದಡಿ ಬಾಕಿಯಿರುವ ಹಾಗೂ ಸ್ವೀಕೃತವಾಗುವ ಅರ್ಜಿಗಳನ್ನು 2022ರ ಡಿಸೆಂಬರ್‌ ಅಂತ್ಯಕ್ಕೆ ತಿದ್ದುಪಡಿ ಮಾಡಿ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಯಾವ ಕಾರಣಕ್ಕೂ ಮುಂದೆ ಕಂದಾಯ ಅದಾಲತ್‌ ಕಾರ್ಯಕ್ರಮವನ್ನು ವಿಸ್ತರಿಸಲಾಗುವುದಿಲ್ಲ ಎಂಬ ಎಚ್ಚರಿಕೆಯನ್ನು ಇಲಾಖೆ ಅಧಿಕಾರಿಗಳಿಗೆ ನೀಡಿದೆ.

ಇದನ್ನೂ ಓದಿ:ಎಲ್ಲ ಎಸ್ಸಿ-ಎಸ್ಟಿ ಸಮುದಾಯಗಳಿಗೆ ಮೊದಲ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಪೂರೈಕೆ: ಸಿಎಂ

ಹೆಚ್ಚುವರಿ ಸಿಬ್ಬಂದಿ ಇಲ್ಲ: ಕಂದಾಯ ಅದಾ ಲತ್‌ ಕಾರ್ಯಕ್ರಮ ಆರಂಭದಲ್ಲಿ (2014ರಲ್ಲಿ) ಹೆಚ್ಚಿನ ಅರ್ಜಿಗಳು ಸ್ವೀಕೃತವಾಗುತ್ತಿದ್ದವು. ಆದ್ದರಿಂದ ಆಗ ಕಂದಾಯ ಅದಾಲತ್‌ ನಡೆಸಲು ಅನುಕೂಲವಾಗುವಂತೆ ಪ್ರತಿ ತಾಲೂಕಿಗೆ ಇಬ್ಬರು ನಿವೃತ್ತ ಕಂದಾಯ ಇಲಾಖಾ ನೌಕರರ ಸೇವೆ ಬಳಸಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು.

ಆದರೆ 2021ರ ಅಂತ್ಯಕ್ಕೆ ಬಾಕಿ ಇರುವ ಅರ್ಜಿಗಳ ಸಂಖ್ಯೆ ಅದಾ ಲತ್‌ ಆರಂಭವಾದಾಗ ಇದ್ದಷ್ಟು ಇಲ್ಲ. ಆದ್ದರಿಂದ ಈ ಕಾರ್ಯಕ್ಕಾಗಿ ಹೆಚ್ಚುವರಿ ಸಿಬ್ಬಂದಿ ನೇಮಿಸಿಕೊಳ್ಳುವ ಅವಶ್ಯಕತೆ ಇಲ್ಲ. ಅರ್ಜಿಗಳನ್ನು ವಿಲೇವಾರಿ ಮಾಡಲು ಆಯಾ ಕಚೇರಿಯ ಸಿಬ್ಬಂದಿಯನ್ನೇ ನಿಯೋಜಿಸಿಕೊಳ್ಳಬೇಕು ಎಂದು ಇಲಾಖೆ ಸೂಚಿಸಿದೆ.

ಜಿಲ್ಲಾಧಿಕಾರಿಗಳು ತಪ್ಪದೇ ಪ್ರತಿ ವಾರ ಕಂದಾಯ ಅದಾಲತ್‌ಗೆ ಸಂಬಂಧಿಸಿದಂತೆ ಪ್ರತಿ ತಾಲೂಕಿನ ತಹಶೀಲ್ದಾರರ ಪ್ರಗತಿ ಪರಿಶೀಲಿಸಿ ಅತಿ ಹೆಚ್ಚು ಪಹಣಿ ತಿದ್ದುಪಡಿ ಮಾಡುವ ನಿಟ್ಟಿನಲ್ಲಿ ಸೂಕ್ತ ನಿರ್ದೇಶನ ನೀಡಬೇಕು. ಕಂದಾಯ ಅದಾಲತ್‌ ಕಾರ್ಯಕ್ರಮದ ಮೇಲುಸ್ತುವಾರಿ ಜವಾಬ್ದಾರಿ ಭೂಮಾಪನ ಇಲಾಖೆ ಆಯುಕ್ತರು, ಕಂದಾಯ ಇಲಾಖೆ ನಿರ್ದೇಶಕರದ್ದಾಗಿದ್ದು (ಭೂಮಿ ವಿಭಾಗ) ಅನುಷ್ಠಾನದ ಪ್ರಗತಿ ವಿವರವನ್ನು ಜಿಲ್ಲಾಧಿಕಾರಿಗಳು ಪ್ರತಿ ತಿಂಗಳು ಪರಿಶೀಲಿಸಬೇಕು ಎಂದು ಇಲಾಖೆ ನಿರ್ದೇಶಕರು ನಿರ್ದೇಶನ ನೀಡಿದ್ದಾರೆ.

ತಿದ್ದುಪಡಿ ಮುಖ್ಯ ಅಂಶಗಳು: ಡಾಟಾ ಎಂಟ್ರಿಗೆ ಬಳಸಲಾದ ಕೈಬರಹದ ಪಹಣಿ ಮತ್ತು ಭೂಮಿ ಡಾಟಾ ಬೇಸ್‌ನಲ್ಲಿರುವ ಪಹಣಿಗಳನ್ನು ಹೋಲಿಸಿದಾಗ ಕಂಡು ಬರುವ ವ್ಯತ್ಯಾಸಗಳು, ಡಾಟಾ ಎಂಟ್ರಿಗೆ ಬಳಸಲಾದ ಕೈಬರಹ ಪಹಣಿಯಲ್ಲಿ ಗಣಕೀಕರಣದ ಪೂರ್ವದಲ್ಲೇ ಇದ್ದ ಮ್ಯುಟೇಶನ್‌ ಪ್ರಕಾರ ಪಹಣಿ ಕಾಲೋಚಿಗೊಳಿಸದಿರುವುದು ಅಥವಾ ತಪ್ಪಾಗಿ ಕಾಲೋಚಿತಗೊಳಿಸಿರುವುದು, ಯಾವುದೇ ಮ್ಯುಟೇಶನ್‌ ಇಲ್ಲದೇ ಪಹಣಿಯಿಂದ ನಮೂದನ್ನು ತೆಗೆದು ಹಾಕಿರುವುದು ಇಲ್ಲವೇ ಹೊಸದಾಗಿ ನಮೂದು ಮಾಡಿರುವುದು ಈ ಪಹಣಿ ತಿದ್ದುಪಡಿಯಲ್ಲಿ ಕಂಡು ಬರುವ ಮುಖ್ಯ ಅಂಶಗಳಾಗಿವೆ.

ಕಂದಾಯ ಅದಾಲತ್‌ ಮೂಲಕ ಪಹಣಿ ತಿದ್ದುಪಡಿ ಕಾರ್ಯವನ್ನು ಸರ್ಕಾರ ಮತ್ತೆ ತಹಶೀಲ್ದಾರ್‌ಗಳಿಗೆ ವಹಿಸಿದೆ. ಈ ಅಧಿಕಾರವನ್ನು 2022, ಡಿ.31ರವರೆಗೆ ವಿಸ್ತರಿಸಿದೆ. ಪಹಣಿಯಲ್ಲಿನ ಲೋಪದೋಷ ತಿದ್ದುಪಡಿ ಮಾಡಲು ಕಂದಾಯ ಅದಾಲತ್‌ ಕಾರ್ಯಕ್ರಮ ಹೆಚ್ಚು ಅನುಕೂಲವಾಗಿದೆ. ●ಮಹಾಂತೇಶ ಬೀಳಗಿ, ಜಿಲ್ಲಾಧಿಕಾರಿ, ದಾವಣಗೆರೆ

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.