ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣ ಸನ್ನಿಹಿತ

ಮುಂದಿನ ತಿಂಗಳಿನಿಂದ ಕಟ್ಟಡ ಕಾಮಗಾರಿ ಆರಂಭ ಸಾಧ್ಯತೆ  

Team Udayavani, Apr 5, 2022, 2:34 PM IST

medical

ಚಿತ್ರದುರ್ಗ: ಜಿಲ್ಲೆಯ ದಶಕಗಳ ಕನಸಾದ ಸರ್ಕಾರಿ ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಮುಂದಿನ ತಿಂಗಳಿನಿಂದ ಆರಂಭವಾಗಲಿದೆ. ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್‌ರಾಜ್‌ ಸಿಂಗ್‌ ಸೋಮವಾರ ಜಿಲ್ಲಾಸ್ಪತ್ರೆ ಆವರಣದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣವಾಗುವ ಸ್ಥಳ ಪರಿಶೀಲನೆ ನಡೆಸಿದರು.

ಕಾಲೇಜು ಕಟ್ಟಡ ನಿರ್ಮಾಣದ ಹಿನ್ನೆಲೆಯಲ್ಲಿ ಇಲ್ಲಿರುವ ಹಳೆಯ ಹಾಗೂ ಅಗತ್ಯವಾಗಿ ತೆರವು ಮಾಡಬೇಕಾದ ಕಟ್ಟಡಗಳ ಪಟ್ಟಿ ಮಾಡಿಸಿದ್ದಾರೆ. ಜಿಲ್ಲಾಸ್ಪತ್ರೆಗೆ ಸಂಬಂಧಿಸಿದ ಕಟ್ಟಡಗಳಾಗಿರುವುದರಿಂದ ಇಲ್ಲಿ ನಿತ್ಯವೂ ನೂರಾರು ರೋಗಿಗಳು ಬಂದು ಹೋಗುತ್ತಾರೆ. ಈ ನಿಟ್ಟಿನಲ್ಲಿ ಹಂತ ಹಂತವಾಗಿ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಯಬೇಕು. ಸಾರ್ವಜನಿಕರು, ರೋಗಿಗಳಿಗೆ ತೊಂದರೆಯಾಗಬಾರದು ಎಂಬ ಸೂಚನೆಯನ್ನೂ ಅಧಿಕಾರಿಗಳಿಗೆ ನೀಡಿದ್ದಾರೆ.

ಜಿಲ್ಲಾಸ್ಪತ್ರೆ ಆವರಣದಲ್ಲಿ ಅಂದಾಜು 20 ಎಕರೆ ವಿಸ್ತೀರ್ಣದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿದ್ದು, ನಗರದ ಜೋಗಿಮಟ್ಟಿ ರಸ್ತೆಯ ಭಾಗದಿಂದ ಕಾಲೇಜಿಗೆ ಪ್ರವೇಶ ಕಲ್ಪಿಸುವ ಬಗ್ಗೆ ನೀಲನಕ್ಷೆ ತಯಾರಾಗಿದೆ. ನವೀನ್‌ರಾಜ್‌ಸಿಂಗ್‌ ಅವರು ಜಿಲ್ಲಾಧಿಕಾರಿಗಳು ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿದರು. ರಕ್ತನಿಧಿ ಕೇಂದ್ರ, ಎಎನ್‌ಟಿಸಿ, ಸರ್ವೇಕ್ಷಣ ಘಟಕ, ಲ್ಯಾಬ್‌, ಜಿಲ್ಲಾ ತರಬೇತಿ ಸಂಸ್ಥೆ, ಎನ್‌ಎಚ್‌ಎಂ ಕಚೇರಿ, ಕಾರ್ಯಾಗಾರ, ವೈದ್ಯರು, ಶುಶ್ರೂಷಕರ ಕ್ವಾಟ್ರಸ್‌ಗಳು, ಡಿಎಚ್‌ಒ ಕಚೇರಿ ಕಟ್ಟಡ ಸೇರಿದಂತೆ ಹಲವು ಕಟ್ಟಡಗಳನ್ನು ತೆರವು ಮಾಡಬೇಕಿದೆ. ಎರಡನೇ ಹಂತದಲ್ಲಿ ಟ್ರಾಮಾ ಕೇರ್‌, ತುರ್ತು ಚಿಕಿತ್ಸಾ ಘಟಕಗಳನ್ನು ತೆರವು ಮಾಡಲಾಗುವುದು. ಆಸ್ಪತ್ರೆ ಆವರಣದಲ್ಲಿ ಆರ್‌ಡಿಎಲ್‌ ಲ್ಯಾಬ್‌ ಬಹಳ ಮುಖ್ಯವಾಗಿದ್ದು, ಇದರ ತೆರವಿಗೆ ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ನಿತ್ಯ ಇಲ್ಲಿಗೆ ಬರುವ ರೋಗಿಗಳಿಗೆ ತೊಂದರೆಯಾಗದಂತೆ ಎಂಆರ್‌ಐ ಮತ್ತು ಡಯಾಗ್ನಿಸ್ಟಿಕ್‌ ಘಟಕ ಹೊಂದಿರುವ ಆರ್‌ಡಿಎಲ್‌ ಲ್ಯಾಬ್‌ ಅನ್ನು ಮೂರನೇ ಹಂತದಲ್ಲಿ ತೆರವು ಮಾಡಲು ತಿಳಿಸಿದ್ದಾರೆ.

ಈ ವೇಳೆ ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ, ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ಡಿಎಚ್‌ಒ ಡಾ| ಆರ್‌. ರಂಗನಾಥ್‌, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಬಸವರಾಜಪ್ಪ ಸೇರಿದಂತೆ ವಿವಿಧ ಅಧಿಕಾರಿಗಳು, ಎಂಜಿನಿಯರ್‌ಗಳು, ವೈದ್ಯರು ಇದ್ದರು.

ಟಾಪ್ ನ್ಯೂಸ್

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.