ಚಲಿಸುತ್ತಿದ್ದ ರಿಕ್ಷಾದ ಮೇಲೆ ಬಿದ್ದ ಮರ : ಮಹಿಳೆ ಸಾವು, ಐವರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ
Team Udayavani, Apr 5, 2022, 3:58 PM IST
ವಿಜಯಪುರ : ಚಲಿಸುತ್ತಿದ್ದ ಆಟೋ ಮೇಲೆ ಮರ ಉರುಳಿಬಿದ್ದು, ಓರ್ವ ಮಹಿಳೆ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದು, ಚಾಲಕನ ಸ್ಥಿತಿ ಗಂಭಿರವಾಗಿದೆ.
ವಿಜಯಪುರ ನಗರದ ಪೊಲೀಸ್ ತರಬೇತಿ ಕೇಂದ್ರದ ಆವರಣದಲ್ಲಿನ ಬೇರು ದುರ್ಬಲಗೊಂಡ ಮರ ರಸ್ತೆಗೆ ಉರುಳಿ ಬಿದ್ದಿದೆ.
ಪರಿಣಾಮ ವಿಜಯಪುರ ನಗರದ ಸಿದ್ದಾರೂಢ ಕಾಲೋನಿಯ ನಿವಾಸಿ ಯಲ್ಲಮ್ಮಾ ಕೊಂಡಗೂಳಿ (45) ಮೃತಪಟ್ಡಿದ್ದು, ಇಂದುತಾಯಿ ಕುಲಕರ್ಣಿ, ಚಂದ್ರಕಲಾ ವಾಲೀಕಾರ, ಮಂದಾಕಿನಿ ಬಡಿಗೇರ, ಸುವರ್ಣಾ ಮಜ್ಜಿಗಿ, ಅಟೋ ಚಾಲಕ ಸಚಿನ ರಾಠೋಡ ಎಂಬವರಿಗೆ ಗಾಯಗಳಾಗಿವೆ. ಆಟೋ ಚಾಲಕ ಸಚಿನ್ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಜಯಪುರ ತಾಲೂಕಿನ ಮದಬಾವಿ ತಾಂಡಾದ ಅಟೋ ಚಾಲಕ ಸಚಿನ ಸಂಬಂಧಿಕರ ಮನೆಯಲ್ಲಿನ ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮರಳಿ ಬರುವಾಗ ಈ ಅವಘಡ ಸಂಭವಿಸಿದೆ.
ಘಟನೆಯಿಂದ ರಸ್ತೆ ಸಂಚಾರ ಸ್ಥಗಿತಗೊಂಡಿದ್ದು, ಈ ಮಾರ್ಗದ ವಾಹನ ಸವಾರರು ಪರದಾಡುವಂತಾಗಿದೆ.
ಇದನ್ನೂ ಓದಿ : ಮೈಕ್ ಉಚಿತ…ಆಜಾನ್ ವೇಳೆ ಹನುಮಾನ್ ಚಾಲೀಸಾ ಮೊಳಗಲಿ; ಮಹಾರಾಷ್ಟ್ರದ ಬಿಜೆಪಿ ಮುಖಂಡ
ಕಳೆದ ಎರಡು ದಿನಗಳಿಂದ ಬೀಸುತ್ತಿರುವ ಗಾಳಿ ಮಳೆಗೆ ನಗರದಲ್ಲಿ ಹಲವು ಮರಗಳು ದುರ್ಬಲಗೊಂಡಿದ್ದರೂ ಅರಣ್ಯ ಇಲಾಖೆ ಇಂಥ ಮರಗಳ ತೆರವಿಗೆ ಮುಂದಾಗಿಲ್ಲ. ಇದುವೇ ಈ ದುರಂತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಾಂಧಿಚೌಕ್ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿದ್ದು, ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಮರ ತೆರವು ಮಾಡಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ಕೆಲಸದಲ್ಲಿ ತೊಡಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.