‘ಕೃಷಿ ಕ್ಷೇತ್ರದಲ್ಲಿ ವೈಜ್ಞಾನಿಕ ಬದಲಾವಣೆ’
Team Udayavani, Apr 6, 2022, 12:24 PM IST
ಸುಳ್ಯ: ಎಲ್ಲರೂ ಸಮಾನರಾಗಿ ಬದುಕಬೇಕೆಂದು ಶ್ರಮಿಸಿದವರಲ್ಲಿ ಮಾಜಿ ಉಪಪ್ರಧಾನಿ ಡಾ| ಬಾಬು ಜಗಜೀವನ ರಾಂ ಕೂಡ ಒಬ್ಬರು. ಈ ಬಗೆಗಿನ ಕಾನೂನು ಪರಿಣಾಮಕಾರಿಯಾಗಿ ಜಾರಿಗೆ ತರಲು ಶ್ರಮಿಸಿದ್ದರು. ಕಾರ್ಮಿಕರ ಏಳಿಗೆಯನ್ನು ಸದಾ ಅವರು ಬಯಸುತ್ತಿದ್ದರು ಹಾಗೂ ಅವರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದರು. ದೇಶದ ಕಟ್ಟ ಕಡೆಯ ಸಮುದಾಯದ ಹಿತರಕ್ಷಣೆಗಾಗಿಯೂ ಅವರು ಕಾರ್ಯ ಪ್ರವೃತ್ತರಾಗಿದ್ದರು. ಕೃಷಿ ಕ್ಷೇತ್ರದಲ್ಲಿ ಅನೇಕ ವೈಜ್ಞಾ ನಿಕ ಬದಲಾವಣೆ ತಂದಿದ್ದರು ಎಂದು ಸುಳ್ಯ ನ.ಪಂ. ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ಹೇಳಿದರು.
ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಸುಳ್ಯ ತಾಲೂಕು ನಾಡ ಹಬ್ಬಗಳ ದಿನಾಚರಣ ಸಮಿತಿ ಆಶ್ರಯದಲ್ಲಿ ಹಸುರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ| ಬಾಬು ಜಗಜೀವನ್ ರಾಂ ಅವರ 115ನೇ ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು. ತಹಶೀಲ್ದಾರ್ ಅನಿತಾಲಕ್ಷ್ಮೀ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹಶಿಕ್ಷಕಿ ಚಂದ್ರಮತಿ ಪ್ರಮುಖ ಭಾಷಣ ನೆರವೇರಿಸಿದರು.
ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಭವಾನಿಶಂಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹಾದೇವ ಉಪಸ್ಥಿತರಿದ್ದರು. ವಸತಿ ನಿಲಯ ಮೇಲ್ವಿಚಾರಕ ಮಾಧವ ಸ್ವಾಗತಿಸಿದರು. ಶಿಕ್ಷಣ ಸಂಯೋಜಕ ಚಂದ್ರಶೇಖರ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.