ಲಂಚ ಪಡೆದ ಆರೋಪ: ಗ್ರಾಮಲೆಕಾಧಿಕಾರಿ ವಿರುದ್ಧ ದೂರು


Team Udayavani, Apr 6, 2022, 2:04 PM IST

ಲಂಚ ಪಡೆದ ಆರೋಪ: ಗ್ರಾಮಲೆಕಾಧಿಕಾರಿ ವಿರುದ್ಧ ದೂರು

ಕನಕಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸ್ವ ಕ್ಷೇತ್ರದಲ್ಲಿ ಒಂದರ ಮೇಲೊಂದು ಲಂಚಾವತಾರದ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇತ್ತೀಚಿಗಷ್ಟೇ ನಗರಸಭೆಯಲ್ಲಿ ಇ-ಖಾತೆಗಾಗಿ ಲಂಚ ಪಡೆದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು ಈಗ ಅಂತಹುದೇ ಮತ್ತೂಂದು ಲಂಚ ಪ್ರಕರಣ ಬೆಳಕಿಗೆ ಬಂದಿದೆ.

ತಾಲೂಕಿನ ಕಸಬಾ ಹೋಬಳಿಯ ಕುರಿಗೌಡನದೊಡ್ಡಿ ಗ್ರಾಮದ ನವೀನ್‌ ಎಂಬಾತನಿಂದ ಪೌತಿ ಖಾತೆಗಾಗಿ ಗ್ರಾಮಲೆಕ್ಕಾಧಿಕಾರಿಯೊಬ್ಬರು ಲಂಚ ಪಡೆದು ಕೆಲಸವನ್ನು ಮಾಡಿಕೊಡದೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎಂದು ಗ್ರೇಡ್‌-2 ತಹಶೀಲ್ದಾರ್‌ ಅವರಿಗೆ ದೂರು ನೀಡಿದ್ದಾರೆ.

ಕುರಿಗೌನಡ ದೊಡ್ಡಿ ಗ್ರಾಮದ ನವೀನ್‌ ತಮ್ಮ ಪೂರ್ವಿಕರಿಂದ ಬಂದ ಆಸ್ತಿಯನ್ನು ತಮ್ಮ ತಂದೆ ಹೆಸರಿಗೆ ಪೌತಿ ಖಾತೆ ಮಾಡಿಕೊಡಲು ಅರ್ಜಿ ಹಾಕಿದ್ದು ಕಸಬಾ ಹೋಬಳಿಯ ಗ್ರಾಮ ಲೆಕ್ಕಾಧಿಕಾರಿ ಚಂದ್ರೇಗೌಡ ಪೌತಿ ಖಾತೆ ಮಾಡಿಕೊಡಲು 50 ಸಾವಿರ ರೂ.ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 15 ಸಾವಿರ ರೂ. ಹಣ ಪಡೆದು ಪೌತಿ ಖಾತೆಯನ್ನು ಮಾಡಿಕೊಡದೆ ಹಣವನ್ನು ಹಿಂದಿರುಗಿಸದೆ ದೂರವಾಣಿ ಕರೆಯನ್ನು ಬ್ಲಾಕ್‌ ಲಿಸ್ಟ್‌ನಲ್ಲಿಟ್ಟಿದ್ದಾರೆ ಎಂದು ದೂರಿನಲ್ಲಿ ಹೇಳಿಕೊಂಡಿದ್ದಾರೆ.

ಕಳೆದ 9ವರ್ಷಗಳಿಂದ ಪೌತಿ ಖಾತೆ ಮಾಡಿ ಕೊಡದೆ ಅಲೆದಾಡಿಸುತ್ತಿದ್ದಾರೆ ಹಣ ಪಡೆದು ಕೆಲಸವನ್ನು ಮಾಡಿಕೊಡದಿರುವ ಬಗ್ಗೆ ಪ್ರಶ್ನೆ ಮಾಡಿದರೆ ನಮಗೆ ಧಮ್ಕಿ ಹಾಕುತ್ತಾರೆ ಎಂದು ಗ್ರೇಡ್‌-2 ತಹಶೀಲ್ದಾರ್‌ ಶಿವಕುಮಾರ್‌ ಅವರಿಗೆ ದೂರು ನೀಡಿದ್ದಾರೆ. ಚಂದ್ರೇಗೌಡ ಮಾತನಾಡಿರುವ ದೂರವಾಣಿ ಆಡಿಯೋ ಸಂಭಾಷಣೆ ಸಾಕ್ಯಧಾರಗಳೊಂದಿಗೆ ರಾಷ್ಟ್ರ ಸಮಿತಿ ಪಕ್ಷದ ತಾಲೂಕು ಅಧ್ಯಕ್ಷ ಪ್ರಶಾಂತ್‌ ಅವರ ಸಹಾಯ ದೂರು ನೀಡಿದ್ದು, ಈ ಪ್ರಕರಣದ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಕನಕಪುರ ತಾಲೂಕಿನಲ್ಲಿ ಲಂಚ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸಬೇಕಾದ ಅಧಿಕಾರಿಗಳು ವಿನಾಕಾರಣ ಕೆಲಸಕಾರ್ಯಗಳನ್ನು ಮಾಡಿಕೊಡದೆ ವಿಳಂಬ ಮಾಡಿ ಅಲೆದಾಡಿಸಿ ಲಂಚಕ್ಕೆ ಬೇಡಿಕೆ ಇಟ್ಟು ರೈತರು ಮತ್ತು ಸಾರ್ವಜನಿಕರನ್ನು ಸುಲಿಗೆ ಮಾಡುವ ಆರೋಪಗಳು ಇತ್ತೀಚೆಗೆ ವ್ಯಾಪಕವಾಗಿ ಕೇಳಿ ಬರುತ್ತಿದೆ ಇದಕ್ಕೆ ನಿದರ್ಶನವೆಂಬಂತೆ ಇತ್ತೀಚಿಗೆ ಕಳೆದ ಒಂದು ತಿಂಗಳ ಹಿಂದೆ ನಗರಸಭೆಯ ಲಂಚದ ಪ್ರಕರಣ ಬೆಳಕಿಗೆ ಬಂದಿತ್ತು. ಆದರೆ ಈ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ. ಅಷ್ಟರಲ್ಲಾಗಲೇ ಮತ್ತೂಂದು ಲಂಚ ಪಡೆದ ಪ್ರಕರಣ ಬೆಳಕಿಗೆ ಬಂದಿರುವುದು ತಾಲೂಕು ಆಡಳಿತ ಮತ್ತು ನಗರಸಭೆಯಲ್ಲಿ ಲಂಚಾವತಾರ ತಾಂಡವವಾಡುತ್ತಿರುವುದಕ್ಕೆ ಸಾಕ್ಷಿ ಹೇಳುತ್ತಿವೆ.

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.