ಹೊಲದ ದಾರಿ ಸಮಸ್ಯೆ ಇತ್ಯರ್ಥಕ್ಕೆ ಕಂದಾಯ ಸಚಿವರ ಸ್ಪಂದನೆ
Team Udayavani, Apr 6, 2022, 2:39 PM IST
ವಿಜಯಪುರ: ಜಮೀನುಗಳಿಗೆ ಹೋಗುವ ವಹಿವಾಟು ದಾರಿ ಸಮಸ್ಯೆ ಇತ್ಯರ್ಥಕ್ಕಾಗಿ ಶೀಘ್ರದಲ್ಲಿ ತಹಶೀಲ್ದಾರರಿಗೆ ಅನುಭೋಗದ ಹಕ್ಕಿನಡಿ ದಾರಿ ಮಾಡಿ ಕೊಡುವ ಅಧಿಕಾರವನ್ನು ವಹಿಸಿಕೊಡುವುದಾಗಿ ಕಂದಾಯ ಸಚಿವ ಆರ್. ಅಶೋಕ ಭರವಸೆ ನೀಡಿದ್ದಾರೆ.
ಅಖಂಡ ಕರ್ನಾಟಕ ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ ನೇತೃತ್ವದಲ್ಲಿ ರೈತರು ಸಲ್ಲಿಸಿದ ಮನವಿಗೆ ಸ್ಪಂದಿಸಿರುವ ಕಂದಾಯ ಸಚಿವ ಆರ್.ಅಶೋಕ, ರೈತರ ಬೇಡಿಕೆಯನ್ನು ಸಹಾನುಭೂತಿಯಂದ ಪರಿಶೀಲಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ರೈತರು ಜಮೀನುಗಳಿಗೆ ಹೋಗುವ ವಹಿವಾಟು ದಾರಿ ಸಮಸ್ಯೆ ತೀವ್ರವಾಗುತ್ತಿದೆ. ದಾರಿ ಇಲ್ಲದ ಕಾರಣ ಜಮೀನುಗಳಿಗೆ ಮಳೆಯಾದರೂ ಬಿತ್ತನೆಗಾಗಿ ಹೊಲಕ್ಕೆ ಹೋಗುವುದು ತೊಂದರೆಯಾಗುತ್ತಿದೆ. ಆದ್ದರಿಂದ ಹಳ್ಳಿಗಳಲ್ಲಿ ರೈತರ ಮಧ್ಯೆ ಹೊಡೆದಾಟಗಳು, ಪೊಲೀಸ್ ಪ್ರಕರಣಗಳು, ಕೋರ್ಟ್ ಕಚೇರಿ ಅಲೆದಾಟಗಳು ನಡೆಯುತ್ತಿವೆ ಎಂದು ಸಮಸ್ಯೆಯ ಗಂಭೀರತೆಯನ್ನು ಮನವರಿಕೆ ಮಾಡಿಕೊಟ್ಟರು. ಮಳೆಯಾದರೂ ದಾರಿಯ ಸಮಸ್ಯೆಯ ಕಾರಣ ಜಮೀನು ಹೂಳು ಬಿದ್ದು ರೈತ ಕುಟುಂಬಗಳು ಬೀದಿಪಾಲಾಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಹೊಲಗಳಿಗೆ ಹೋಗುವ ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ಈ ಹಿಂದೆ ತಹಶೀಲ್ದಾರರಿಗೆ ಇತ್ತು. ಹೀಗಾಗಿ ಮೊದಲಿದ್ದಂತೆ ಹೊಲದ ದಾರಿ ಸಮಸ್ಯೆ ಪರಿಹಾರದ ಅಕಾರವನ್ನು ತಹಶೀಲ್ದಾರರಿಗೆ ನೀಡಬೇಕು ಎಂದು ಆಗ್ರಹಿಸಿದರು.
ಇದಲ್ಲದೇ ರಾಜ್ಯಾದ್ಯಂತ ಜಮೀನುಗಳನ್ನು ಪುನಃ ಮೋಜಣಿ ಮಾಡಿಸಿ ಹದ್ದಿ ಗುರುತಿಸಬೇಕು. ಇದರಿಂದ ಖರಾಬು ಕ್ಷೇತ್ರ ಗುರುತಿಸಿ ಅದನ್ನೇ ವಹಿವಾಟು ದಾರಿ ಎಂದು ಪರಿಗಣಿಸಬೇಕು. ಖರಾಬು ಕ್ಷೇತ್ರವಿಲ್ಲದ ಜಮೀನುಗಳಲ್ಲಿ ತಹಶೀಲ್ದಾರರು ಇಜಿಲೆಂಟ್ ಕಾಯ್ದೆ ಒಳಗಡೆ ದಾರಿ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ರೈತರ ಸಮಸ್ಯೆ ಆಲಿಸಿದ ಕಂದಾಯ ಸಚಿವ ಆರ್.ಅಶೊಕ, ರೈತರ ಜಮೀನು ದಾರಿ ಸಮಸ್ಯೆ ಸರ್ಕಾರದ ಗಮನಕ್ಕಿದ್ದು ಇದು ರಾಜ್ಯಾದ್ಯಂತ ರೈತರಿಗೆ ತೀವ್ರ ಸಮಸ್ಯೆಯಾಗಿದೆ. ಆದ್ದರಿಂದ ಶೀಘ್ರದಲ್ಲಿ ದಾರಿ ಸಮಸ್ಯೆ ಇತ್ಯರ್ಥಪಡಿಸಲು ಜಮೀನು ಮೋಜಣಿ ಮಾಡಿಸುವುದಾಗಿ ಭರವಸೆ ನೀಡಿದರು. ಸದಾಶಿವ ಬರಟಗಿ, ಹೊನಕೇರೆಪ್ಪ ತೆಲಗಿ, ಚಂದ್ರಾಪ ಹಿಪ್ಪಲಿ, ಶಕೀಲದಾರ ಕರ್ಜಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.