ಶಬ್ದ ಮಾಲಿನ್ಯ : 1001 ಧಾರ್ಮಿಕ,ಇತರ ಸಂಸ್ಥೆಗಳಿಗೆ ಮಂಗಳೂರು ಪೊಲೀಸ್ ನೋಟಿಸ್
ಕಮಿಷನರೆಟ್ ವ್ಯಾಪ್ತಿಯಲ್ಲಿ ಶಬ್ದದ ಮಿತಿ ಎಷ್ಟು?
Team Udayavani, Apr 6, 2022, 4:31 PM IST
ಸಾಂದರ್ಭಿಕ ಚಿತ್ರ ಮಾತ್ರ
ಮಂಗಳೂರು: ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಮೈಕ್ ಬಳಕೆ ಮಾಡುವ 1001 ಸಂಸ್ಥೆಗಳನ್ನು ಪ್ರಾಥಮಿಕ ಹಂತದಲ್ಲಿ ಗುರುತಿಸಲಾಗಿದ್ದು ನೋಟೀಸ್ ನೀಡುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಪರಿಸರ ಸಚಿವಾಲಯದ ಶಬ್ದ ಮಾಲಿನ್ಯ ನಿಯಮಗಳನ್ನು ಪಾಲಿಸುವಂತೆ ಜ್ಞಾಪಿಸಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಸುಮಾರು 1001 ಧಾರ್ಮಿಕ, ಕೈಗಾರಿಕೆ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಏಪ್ರಿಲ್ 6 ರಂದು ಪೊಲೀಸ್ ನೋಟಿಸ್ ಜಾರಿ ಮಾಡಲಾಗಿದೆ.ಕಳೆದ ಕೆಲವು ದಿನಗಳಿಂದ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ತೆಗೆದುಹಾಕುವ ಕುರಿತಾಗಿ ವಿವಾದ ನಡೆಯುತ್ತಿರುವ ವೇಳೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ದೇವಾಲಯಗಳು, ಮಸೀದಿಗಳು, ಚರ್ಚ್‌ಗಳು, ಹೊರಾಂಗಣ ಕಾರ್ಯಕ್ರಮಗಳನ್ನು ನಡೆಸುವ ಸ್ಥಳಗಳು, ಮಾಲ್‌ಗಳು ಮತ್ತು ಜನಪ್ರಿಯ ತಿನಿಸುಗಳ ಮಳಿಗೆಗಳಿಗೆ ಆಯಾ ಪೋಲೀಸ್ ಠಾಣೆಗಳಿಂದ ಸೂಚನೆಗಳನ್ನು ನೀಡಲಾಗಿದೆ.
ಪರಿಸರ ಮತ್ತು ಅರಣ್ಯ ಸಚಿವಾಲಯವು ಶಬ್ದ ಮಾಲಿನ್ಯ ನಿಯಂತ್ರಣ ನಿಯಮ 2000 ತಿದ್ದುಪಡಿ ಮಾಡಿದ -2010 ಪರಿಸರ ಸಂರಕ್ಷಣಾ ಕಾಯಿದೆ 1986 ರ ಅಡಿಯಲ್ಲಿ ಅಧಿಸೂಚಿಸಿದ ಶಬ್ದ ಮಾನದಂಡಗಳನ್ನು ನೋಟಿಸ್‌ಗಳು ಉಲ್ಲೇಖಿಸಿವೆ.
ಹಗಲಿನ ಸಮಯದಲ್ಲಿ ವಸತಿ, ವಾಣಿಜ್ಯ ಮತ್ತು ಕೈಗಾರಿಕಾ ಪ್ರದೇಶಗಳಿಗೆ ಇಂದಿನಿಂದಲೇ ಅನ್ವಯವಾಗಲಿದೆ. ಈ ನಿಯಮಗಳನ್ನು ಪಾಲಿಸದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನೋಟಿಸ್‌ನಲ್ಲಿ ಎಚ್ಚರಿಕೆ ನೀಡಲಾಗಿದೆ.
ಶಬ್ದದ ಮಿತಿ ಎಷ್ಟು?
ಕೈಗಾರಿಕಾ ಪ್ರದೇಶಗಳಲ್ಲಿ ಬೆಳಿಗ್ಗೆ 6 ರಿಂದ ರಾತ್ರಿ 10 ರವರೆಗೆ 75 ಡೆಸಿಬಲ್ ಮತ್ತು ರಾತ್ರಿಯ ಸಮಯ10 ರಿಂದ ಬೆಳಿಗ್ಗೆ 6 ರವರೆಗೆ 70 ಡೆಸಿಬಲ್.ವಾಣಿಜ್ಯ ಪ್ರದೇಶಗಳಲ್ಲಿ ಬೆಳಿಗ್ಗೆ 6 ರಿಂದ ರಾತ್ರಿ 10 ರವರೆಗೆ 65 ಡೆಸಿಬಲ್ ಮತ್ತು ರಾತ್ರಿಯ ಸಮಯ10 ರಿಂದ ಬೆಳಿಗ್ಗೆ 6 ರವರೆಗೆ 55 ಡೆಸಿಬಲ್, ವಸತಿ ಪ್ರದೇಶಗಳಲ್ಲಿ ಬೆಳಿಗ್ಗೆ 6 ರಿಂದ ರಾತ್ರಿ 10 ರವರೆಗೆ 55 ಡೆಸಿಬಲ್ ಮತ್ತು ರಾತ್ರಿಯ ಸಮಯ10 ರಿಂದ ಬೆಳಿಗ್ಗೆ 6 ರವರೆಗೆ 45 ಡೆಸಿಬಲ್, ಮೌನ ವಲಯದಲ್ಲಿ ಬೆಳಿಗ್ಗೆ 6 ರಿಂದ ರಾತ್ರಿ 10 ರವರೆಗೆ 50 ಡೆಸಿಬಲ್ ಮತ್ತು ರಾತ್ರಿಯ ಸಮಯ10 ರಿಂದ ಬೆಳಿಗ್ಗೆ 6 ರವರೆಗೆ 40 ಡೆಸಿಬಲ್ ಶಬ್ದವನ್ನು ಮಾತ್ರ ಕೇಳಿಸಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.