ಕರ್ನಾಟಕದಲ್ಲಿ ಏನಾಗುತ್ತಿದೆ ಅಂತ ಅರ್ಥವಾಗುತ್ತಿಲ್ಲ : ವಾಟಾಳ್ ನಾಗರಾಜ್
ಆರಗ ಜ್ಞಾನೇಂದ್ರ ಉರ್ದು ಹೇಳಿಕೆ ವಿರುದ್ಧ ಕೆಂಡಾಮಂಡಲ
Team Udayavani, Apr 6, 2022, 5:35 PM IST
ಬೆಂಗಳೂರು: ಕರ್ನಾಟಕದಲ್ಲಿ ಏನಾಗುತ್ತಿದೆ ಅಂತ ಅರ್ಥವಾಗುತ್ತಿಲ್ಲ ಎಂದು ಕನ್ನಡ ಚಳವಳಿ ಹೋರಾಟಗಾರ, ಮಾಜಿ ಶಾಸಕ ವಾಟಾಳ್ ನಾಗರಾಜ್ ಬುಧವಾರ ಕಿಡಿ ಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವಜನಾಂಗದ ಶಾಂತಿಯ ತೋಟ ಎಂದು ರಾಷ್ಟ್ರ ಕವಿ ಕುವೆಂಪು ಸಾಹಿತ್ಯ ಬರೆದಿದ್ದಾರೆ. ಎಲ್ಲಾ ಸಭೆ ಸಮಾರಂಭಗಳಲ್ಲಿ ಈ ಹಾಡನ್ನ ಹೇಳುತ್ತಿದ್ದಾರೆ. ಹಿಂದೂ, ಕ್ರೈಸ್ತ, ಮುಸಲ್ಮಾನ ಅಂತ ಸಾಲು ಇದೆ, ಇದು ಯಾರಿಗೂ ಅರ್ಥ ಆಗುತ್ತಿಲ್ಲ. ನಾಡಿಗೆ ಅಪಚಾರ ಆಗಬಾರದು, ಭವ್ಯ ನಾಡಿದು ಎಂದು ತೀವ್ರ ಬೇಸರ ಹೊರ ಹಾಕಿದರು.
ನಾವು ರಾಜ್ಯವನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದ್ದೇವೆ ಎಂದು ಅಂದುಕೊಂಡಿದ್ದಾರೆ.ಒಂದಾದ ಮೇಲೆ ಒಂದು ನಡೆಯುತ್ತಿದೆ. ಹಿಜಾಬ್, ದೇವಸ್ಥಾನ, ಹಲಾಲ್ ಕಟ್, ಜಟಕಾ ಕಟ್ ಬಂತು.ಈಗ ಮಾವಿನ ಹಣ್ಣು ವಿಚಾರ ಬಂದಿದೆ. ನಾನು ನಮ್ಮ ತೋಟದಲ್ಲಿ ಮಾವಿನ ಹಣ್ಣನ್ನ ಮುಸ್ಲಿಮರಿಗೆ ಕೊಟ್ಟಿದ್ದೇನೆ ಎಂದರು.
ಒಬ್ಬ ಯುವಕನ ಹತ್ಯೆಯಾಗಿದೆ.ಅದರ ಹೇಳಿಕೆ ಬಗ್ಗೆ ಗೃಹ ಸಚಿವರು ಇಂಟಲಿಜೆನ್ಸ್ ರಿಪೋರ್ಟ್ ಪಡೆದಿಲ್ಲ.ಅವರು ವಿಫಲ ಆಗಿದ್ದಾರೆ. ಉರ್ದು ಮಾತಾಡದಿದ್ದುದಕ್ಕೆ ಚೂರಿ ಇರಿದಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಕನ್ನಡದವರು ಸುಮ್ಮನೆ ಕೂತಿದ್ದೀರಾ ಎಂದು ಹರಿದಾಡುತ್ತಿದೆ. ಆರಗ ಜ್ಞಾನೇಂದ್ರ ಅವರು ಹೇಳಿಕೆ ನೀಡಿ ಬಳಿಕ ತಪ್ಪಾಯ್ತು ಅಂತ ಹೇಳಿದ್ದಾರೆ. ನಿಮಗೆ ಗೃಹ ಸಚಿವ ಸ್ಥಾನ ಕೊಡಲಾಗಿದೆ,ಯಾಕೆ ಕೊಟ್ಟಿದ್ದಾರೆ ಅನ್ನುವ ಚರ್ಚೆ ಬೇಡ. ಕೂಡಲೇ ನಿಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೊರಡಿ.ರಾಜೀನಾಮೆ ಕೊಟ್ಟರೆ ನಿಮಗೂ ಘನತೆ. ಗೃಹಸಚಿವ ಸ್ಥಾನಕ್ಕೂ ಮಾನ ಉಳಿಯುತ್ತದೆ. ನೀವು ಸಣ್ಣ ಮಕ್ಕಳ ರೀತಿ ಹುಡುಗಾಟ ಆಡುತ್ತಿದ್ದೀರಾ? ಮುಖ್ಯಮಂತ್ರಿಗಳಿಗೆ ರಾಜೀನಾಮೆ ಕೊಟ್ಟು ಹೊರಡಿ ಎಂದು ಕಿಡಿ ಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.