ಎ. 11: ಉಡುಪಿ ಜಿಲ್ಲೆಗೆ ಸಿಎಂ ಬೊಮ್ಮಾಯಿ ಭೇಟಿ
Team Udayavani, Apr 7, 2022, 6:40 AM IST
ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎ. 11ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಅಂದು ಬೆಳಗ್ಗೆ ಅವರು ಬೆಂಗಳೂರಿನಿಂದ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿ, ಮಂಗಳೂರಿನಿಂದ ಆದಿಉಡುಪಿಗೆ ಹೆಲಿಕಾಪ್ಟರ್ ಮೂಲಕ ಬಂದಿಳಿಯಲಿದ್ದಾರೆ. ಮಧ್ಯಾಹ್ನ 12ಕ್ಕೆ ಉಚ್ಚಿಲದ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಅಪರಾಹ್ನ 3ಕ್ಕೆ ಡಾ| ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ, 3.30ಕ್ಕೆ ಬನ್ನಂಜೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಲಿದ್ದಾರೆ.
ಸಂಜೆ 5.30ಕ್ಕೆ ಸಗ್ರಿ ಶ್ರೀ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ ಮಣಿಪಾಲದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಇದನ್ನೂ ಓದಿ:ಮಾಜಿ ಪತ್ನಿಯ ರೆಸ್ಟೋರೆಂಟ್ನಲ್ಲಿ ಗರ್ಲ್ ಫ್ರೆಂಡ್ ಜೊತೆ ಹೃತಿಕ್ ಪಾರ್ಟಿ
ಸಿದ್ಧತೆಗೆ ಜಿಲ್ಲಾಧಿಕಾರಿ ಸಭೆ
ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ಪೂರ್ವ ತಯಾರಿಯ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯಿತು. ಶಾಸಕ ರಘುಪತಿ ಭಟ್, ಜಿ.ಪಂ. ಸಿಇಒ ಡಾ| ನವೀನ್ ಭಟ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ವೀಣಾ, ನಗರಸಭೆಯ ಪೌರಾಯುಕ್ತ ಉದಯ ಶೆಟ್ಟಿ ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.