ಪುರಸಭೆ: 5 ಲಕ್ಷ ರೂ. ಉಳಿತಾಯ ಬಜೆಟ್‌ ಮಂಡನೆ

ಆಡಳಿತ ಪಕ್ಷದ ಸದಸ್ಯರಿಂದಲೇ ವಿರೋಧ

Team Udayavani, Apr 7, 2022, 12:04 PM IST

9

ಗುಳೇದಗುಡ್ಡ: ಪಟ್ಟಣದ ಪುರಸಭೆಯ ಸಭಾ ಭವನದಲ್ಲಿ ಅಧ್ಯಕ್ಷೆ ಯಲ್ಲವ್ವ ಗೌಡರ ಅಧ್ಯಕ್ಷತೆಯಲ್ಲಿ ನಡೆದ ಬಜೆಟ್‌ ಸಭೆಯಲ್ಲಿ 5 ಲಕ್ಷ ರೂ. ಉಳಿತಾಯ ಬಜೆಟ್‌ ಮಂಡಿಸಲಾಯಿತು.

ಪುರಸಭೆ 2022-23ನೇ ಸಾಲಿನ ಬಜೆಟ್‌ ಗೆ ವಿರೋಧ ಪಕ್ಷಗಳಾದ ಜೆಡಿಎಸ್‌-ಬಿಜೆಪಿ ಸದಸ್ಯರು ಒಪ್ಪಿಗೆ ಸೂಚಿಸಿದರೆ, ಆಡಳಿತಾರೂಢ ಕಾಂಗ್ರೆಸ್‌ನ ಮೂವರು ಸದಸ್ಯರು ವಿರೋಧಿಸಿದ ಘಟನೆ ಪುರಸಭೆ ವಿಶೇಷ ಸಾಮಾನ್ಯ ಸಭೆಯಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಯಲ್ಲವ್ವ ಗೌಡರ 2022-23ನೇ ಸಾಲಿನ ಬಜೆಟ್‌ ಮಂಡಿಸುವುದಕ್ಕಿಂತ ಮೊದಲೇ ಸಭೆ ಆರಂಭವಾದಾಗ ಕಾಂಗ್ರೆಸ್‌ ಸದಸ್ಯರಾದ ರಾಜು ಹೆಬ್ಬಳ್ಳಿ, ರಾಜವ್ವ ಹೆಬ್ಬಳ್ಳಿ, ವಿದ್ಯಾ ಮುರಗೋಡ ಬಜೆಟ್‌ಗೆ ನಮ್ಮ ವಿರೋಧವಿದೆ ಎಂದು ವಿರೋಧ ವ್ಯಕ್ತಪಡಿಸಿದರು.

ಬಜೆಟ್‌ನ ಕರಡುಪ್ರತಿ ಮೊದಲೇ ನೀಡಬೇಕಾಗಿತ್ತು, ಆದರೆ ಸಭೆಯಲ್ಲಿ ನೀಡಿದ್ದೀರಿ. ಇದರಿಂದ ನಾವು ಬಜೆಟ್‌ ಬಗ್ಗೆ ತಿಳಿದುಕೊಳ್ಳಲು ಆಗುವುದಿಲ್ಲ. ಬಜೆಟ್‌ ಬಗ್ಗೆ ನಮಗೆ ಚರ್ಚಿಸಲು ಸಾಧ್ಯವಾಗಲ್ಲ. ಆದ್ದರಿಂದ ಬಜೆಟ್‌ ಸಭೆ ಮುಂದೂಡಿ ಎಂದು ನಾಮ ನಿರ್ದೇಶನ ಸದಸ್ಯ ವಸಂತಸಾ ದೋಂಗಡೆ ಆಗ್ರಹಿಸಿದರೆ, ಹಿಂದಿನ ಸಾಮಾನ್ಯ ಸಭೆ ಠರಾವು ಪ್ರತಿ ನೀಡಿ, ಸಭೆ ಆರಂಭಿಸಿ. ಇಲ್ಲದಿದ್ದರೆ ಸಭೆ ಮುಂದೂಡಿ ಎಂದು ನಾಮ ನಿರ್ದೇಶನ ಸದಸ್ಯ ಶಿವಾನಂದ ಯಣ್ಣಿ ಆಗ್ರಹಿಸಿದರು. ಈ ವೇಳೆ ಸಭೆಯಲ್ಲಿ ಗೊಂದಲ ಉಂಟಾಯಿತು.

ಉಳಿತಾಯ ಬಜೆಟ್‌: 2022-23ನೇ ಸಾಲಿನಲ್ಲಿ ಪುರಸಭೆ ಆಸ್ತಿಕರ 95 ಲಕ್ಷ ರೂ., ವಾಣಿಜ್ಯ ಮಳಿಗಳ ಬಾಡಿಗೆ 40 ಲಕ್ಷ ರೂ, ಕಟ್ಟಡ ಪರವಾನಗಿ ಶುಲ್ಕ 28 ಲಕ್ಷ ರೂ., ಖಾತಾ ಬದಲಾವಣೆ 13 ಲಕ್ಷ ರೂ., ನೌಕರರ ವೇತನಕ್ಕಾಗಿ ಸರ್ಕಾರದಿಂದ ಬರುವ ಹಣ 205 ಲಕ್ಷ ರೂ, ಎಸ್‌ಎಫ್‌ಸಿ ಫಂಡ್‌ 45 ಲಕ್ಷ ರೂ, ಎಸ್‌ಎಫ್‌ಸಿ ವಿಶೇಷ ಅನುದಾನ 650 ಲಕ್ಷ ರೂ, 15ನೇ ಹಣಕಾಸು ಯೋಜನೆಯಡಿ ಅನುದಾನ 137 ಲಕ್ಷ ರೂ., ಸ್ವತ್ಛ ಭಾರತ ಯೋಜನೆ ಅನುದಾನ 26 ಲಕ್ಷ ರೂ., ನೀರು ಸರಬರಾಜು, ಬೀದಿ ದೀಪಗಳ ವಿದ್ಯುತ್‌ ಬಿಲ್‌ ಪಾವತಿಗಾಗಿ ಎಸ್‌ಎಫ್‌ಸಿ ಅನುದಾನದಿಂದ 234 ಲಕ್ಷ ರೂ. ಸೇರಿದಂತೆ ವಿವಿಧ ಮೂಲಗಳಿಂದ 11.35 ಕೋಟಿ ರೂ. ಆದಾಯ ನಿರೀಕ್ಷಿಸಲಾಗಿದ್ದು, ಒಟ್ಟು 11.29 ಕೋಟಿ ರೂ. ಖರ್ಚು ನಿರೀಕ್ಷಿಸಲಾಗಿದ್ದು, 2022-23ನೇ ಸಾಲಿನಲ್ಲಿ ಪುರಸಭೆ ಒಟ್ಟು 5.83 ಲಕ್ಷ ರೂ. ಉಳಿತಾಯ ನಿರೀಕ್ಷಿಸಿದ ಬಜೆಟ್‌ ಸಭೆಯಲ್ಲಿ ಮಂಡಿಸಲಾಯಿತು.

ಒಟ್ಟು 23 ಸದಸ್ಯರಲ್ಲಿ 20 ಸದಸ್ಯರ ಬೆಂಬಲ ಹಾಗೂ ಮೂವರು ಸದಸ್ಯರು ವಿರೋಧದ ನಡುವೆ 2022-23ನೇ ಸಾಲಿನ ಬಜೆಟ್‌ಗೆ ಅನುಮೋದನೆ ನೀಡಲಾಯಿತು. ಸಭೆಯಲ್ಲಿ ಉಪಾಧ್ಯಕ್ಷೆ ನಾಗರತ್ನ ಲಕ್ಕುಂಡಿ, ಸ್ಥಾಯಿ ಸಮಿತಿ ಚೇರ್‌ಮನ್‌ ವಿನೋದ ಮದ್ದಾನಿ, ಸದಸ್ಯರಾದ ವಿಠ್ಠಲ ಕಾವಡೆ, ರಫೀಕ್‌ ಕಲ್ಬುರ್ಗಿ ಅಮರೇಶ ಕವಡಿಮಟ್ಟಿ, ಹನಮಂತ ಗೌಡರ, ಶ್ಯಾಮ ಮೇಡಿ, ಯಲ್ಲಪ್ಪ ಮನ್ನಿಕಟ್ಟಿ, ಉಮೇಶ ಹುನಗುಂದ, ಸಂತೋಷ ನಾಯನೇಗಲಿ, ಕಾಶೀನಾಥ ಕಲಾಲ, ಪ್ರಶಾಂತ ಜವಳಿ, ಸುಮಿತ್ರಾ ಕೋಡಬಳಿ, ಶಿಲ್ಪಾ ಹಳ್ಳಿ, ರಾಜೇಶ್ವರಿ ಉಂಕಿ, ಜ್ಯೋತಿ ಅಲೂರ, ಜ್ಯೋತಿ ಗೊವಿನಕೊಪ್ಪ, ಪುರಸಭೆ ಮುಖ್ಯಾಧಿಕಾರಿ ಸತೀಶ ಚವಡಿ ಇದ್ದರು

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.