RBI ಹಣಕಾಸು ನೀತಿ ನಿರೀಕ್ಷೆ:ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 575 ಅಂಕ ಕುಸಿತ, ನಿಫ್ಟಿ ಇಳಿಕೆ
ಎನ್ ಎಸ್ ಇ ನಿಫ್ಟಿ 168.20 ಅಂಕಗಳಷ್ಟು ಕುಸಿತದೊಂದಿಗೆ 17,639.50 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿತ್ತು.
Team Udayavani, Apr 7, 2022, 4:40 PM IST
ಮುಂಬಯಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ನಾಳೆ ಹಣಕಾಸು ನೀತಿಯನ್ನು ಪ್ರಕಟಿಸಲಿರುವ ಹಿನ್ನೆಲೆಯಲ್ಲಿ ಗುರುವಾರ (ಏಪ್ರಿಲ್ 07) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 570ಕ್ಕೂ ಅಧಿಕ ಅಂಕಗಳ ಇಳಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ.
ಇದನ್ನೂ ಓದಿ:ಅಲ್ ಖೈದಾ ನಾಯಕನ ವಿಡಿಯೋವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ: ಡಾ. ಅಶ್ವತ್ಥ ನಾರಾಯಣ್
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 575.46 ಅಂಕ ಇಳಿಕೆಯಾಗಿದ್ದು, 59,034..45 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 168.20 ಅಂಕಗಳಷ್ಟು ಕುಸಿತದೊಂದಿಗೆ 17,639.50 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿತ್ತು.
ಅದಾನಿ ಪೋರ್ಟ್ಸ್, ಟೈಟಾನ್ ಕಂಪನಿ, ಎಚ್ ಡಿಎಫ್ ಸಿ, ಪವರ್ ಗ್ರಿಡ್, ಒನ್ ಜಿಸಿ ಷೇರುಗಳು ನಷ್ಟ ಕಂಡಿದ್ದು, ಮತ್ತೊಂದೆಡೆ ಆ್ಯಕ್ಸಿಸ್ ಬ್ಯಾಂಕ್, ಡೀವಿಸ್ ಲ್ಯಾಬ್ಸ್, ಎಚ್ ಎಎಲ್, ಐಸಿಐಸಿಐ ಬ್ಯಾಂಕ್ ಷೇರುಗಳು ಲಾಭಗಳಿಸಿದೆ.
ಇಂದು ಬೆಳಗ್ಗೆ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 566.09 ಅಂಕಗಳಷ್ಟು ಇಳಿಕೆಯಾಗಿದ್ದು, 59,610.41 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 149.70 ಅಂಕ ಕುಸಿತವಾಗಿದ್ದು, 17,807.70 ಅಂಕಗಳ ಮಟ್ಟ ತಲುಪಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.