ಬೆಲೆ ಏರಿಕೆ ಬಿಸಿಗೆ ಜನತೆ ಜೀವಂತ ಶವವಾಗಿದ್ದಾರೆ: ಡಿ.ಕೆ.ಶಿವಕುಮಾರ್‌

ಪ್ರೀತಂಗೌಡ ಅವರೂ ಅರ್ಜಿ ಹಾಕಿದ್ದಾರಾ ಎಂಬ ಪ್ರಶ್ನೆಗೆ ಅದನ್ನೆಲ್ಲ ಬಹಿರಂಗವಾಗಿ ಹೇಳಲ್ಲ

Team Udayavani, Apr 7, 2022, 6:06 PM IST

ಬೆಲೆ ಏರಿಕೆ ಬಿಸಿಗೆ ಜನತೆ ಜೀವಂತ ಶವವಾಗಿದ್ದಾರೆ: ಡಿ.ಕೆ.ಶಿವಕುಮಾರ್‌

ಹಾಸನ: ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಿಜೆಪಿ ಸರ್ಕಾರ ಜನ ಸಾಮಾನ್ಯರನ್ನು ಜೀವಂತ ಶವಗಳನ್ನಾಗಿ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವ ಕುಮಾರ್‌ ಅವರು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೈಲ ಬೆಲೆ, ರಸಗೊಬ್ಬರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಜನ ಸಂಕಷ್ಟದಲ್ಲಿರುವಾಗಲೇ ಹಿಜಾಬ್‌, ಹಲಾಲ್‌ ಕಟ್‌, ಆಝಾನ್‌ ಅನಗತ್ಯ ವಿಷಯಗಳ ಚರ್ಚೆ ನಡೆಯುತ್ತಿದೆ. ಇದರಿಂದ ರೈತರನ್ನು ಬದುಕಿರುವಾ ಗಲೇ ಸಮಾಧಿ ಮಾಡಲು ಮುಂದಾಗಿದ್ದಾರೆ ಎಂದು ಕಿಡಿಕಾರಿದರು.

ನಮ್ಮ ರೈತರಿಗೆ ನಷ್ಟ: ಹಲಾಲ್‌ ಕಟ್‌ ವಿಚಾರವಾಗಿ ದಾಳಿ ಮಾಡಿದರು. ರಾಜ್ಯದಲ್ಲಿ ಕುರಿ, ಕೋಳಿ ಸಾಕುವವ ರು ರೈತರು. ಇವುಗಳನ್ನು ನಿಗದಿತ ವೇಳೆಗೆ ಮಾರಾಟ ಮಾಡದಿದ್ದರೆ ಮೇವಿನ ಹೊರೆ ಬೀಳಲಿದೆ. ಕೋವಿಡ್‌ ಸಮಯದಲ್ಲಿ ಅಲ್ಪಸಂಖ್ಯಾತರೇ ರೈತರಿಂದ ಮಾವು ಖರೀದಿಸಿದ್ದರು. ಈಗ ಅವರ ವ್ಯಾಪಾರ ನಿಷೇಧ ಮಾಡಿದರೆ ನಷ್ಟ ಆಗುವುದು ನಮ್ಮ ರೈತರಿಗೆ.ಆಗ ಮಾವಿನ ಬೆಲೆ ಏರಿಕೆಯಾಗುತ್ತದೆ. ಕೋವಿಡ್‌ ಸಮಯದಲ್ಲಿ ನಷ್ಟ ಅನುಭವಿಸಿದ ರೈತರಿಗೆ ಸರ್ಕಾರದ
ನೆರವು ಸಿಗಲಿಲ್ಲ ಎಂದು ಆರೋಪಿಸಿದರು.

ಬೆಳೆಗಳಿಗೆ ಬೆಂಬಲ ಬೆಲೆ ನೀಡಿಲ್ಲ: ಬಿಜೆಪಿಗರು ಮತ ಧ್ರುವೀಕರಣಕ್ಕೆ ಸರ್ಕಸ್‌ ಮಾಡುತ್ತಿದ್ದಾರೆ. ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದಿದ್ದರು. ಆದರೆ ರಾಗಿ, ಜೋಳ, ತೊಗರಿ ಸೇರಿದಂತೆ ಬೆಳೆಗಳಿಗೆ ಬೆಂಬಲ ಬೆಲೆ ನೀಡಿಲ್ಲ. ಬದಲಿಗೆ ಸರ್ಕಾರ ಬೆಳೆ ಖರೀದಿಗೆ ಮಿತಿ ಹೇರಿದೆ. ನಮ್ಮ ರಾಜ್ಯದವರೇ ಕೇಂದ್ರ ದ ಕೃಷಿ ಸಚಿವರಾಗಿದ್ದರೂ, ಅನ್ಯಾಯ ಮುಂದುವರಿದಿದೆ. ಕೈಗಾರಿಕೆಗಳಿಗೆ ಬಂಡವಾಳ ಹರಿ ದು ಬರುತ್ತಿಲ್ಲ.

ವ್ಯಾಪಾರಸ್ಥರಿಗೂ ತೊಂದರೆ ಆಗಿದೆ. ಪ್ರತಿ ಜಿಲ್ಲೆಯಲ್ಲಿ ಕೋಮುವಾದ ಹರಡಿ ಎಲ್ಲೆಡೆ 144 ಸೆಕ್ಷನ್‌ ಹಾಕಿದರೆ ಯಾರು ವ್ಯಾಪಾರ ಮಾಡುತ್ತಾರೆ. ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ. ನಮ್ಮ ಮಾನವ ಸಂಪನ್ಮೂಲ ಬೇರೆ ದೇಶಗಳಿಗೆ ವಲಸೆ ಹೋಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಬೆಂಗಳೂರಿಗೆ ಪ್ರತ್ಯೇಕ ಪ್ರಣಾಳಿಕೆ: ಮುಂದಿನ ದಿನಗಳಲ್ಲಿ ಬೆಂಗಳೂರಿಗೆ ಪ್ರತ್ಯೇಕ ಪ್ರಣಾಳಿಕೆ ಪ್ರಕಟಿಸುತ್ತೇವೆ. ಮಲೆನಾ ಡು, ಕರಾವಳಿ, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಹಾಗೂ ಬಯಲು ಸೀಮೆ ಕರ್ನಾಟಕಕ್ಕೆ ಪ್ರತ್ಯೇಕ ಕಾರ್ಯಕ್ರಮ ರೂಪಿಸುತ್ತೇವೆ. ಸಿದ್ದು ಸರ್ಕಾರದಲ್ಲಿ ನಾವು ಕೊಟ್ಟ ಭರವಸೆ ಶೇ.90 ರಷ್ಟು ಈಡೇರಿಸಿದ್ದೇವೆ. ಆದರೆ, ಬಿಜೆಪಿಗರು ಜನಾದೇಶವಿಲ್ಲದಿದ್ದರೂ, ವಾಮಮಾರ್ಗದಲ್ಲಿ ಬಿಜೆಪಿಗರು ಅಧಿಕಾರ ಹಿಡಿದಿದ್ದಾರೆ ಎಂದು ಲೇವಡಿ ಮಾಡಿದರು.

ಜಲಧಾರೆ ಯಶಸ್ವಿಯಾಗಲಿ: ಜೆಡಿಎಸ್‌ ಜಲಧಾರೆ ವಿಚಾರವಾಗಿ ಪ್ರಶ್ನೆ ಕೇಳಿದಾಗ ಬಹಳ ಸಂತೋಷ. ಒಳ್ಳೆಯ ದಾಗಲಿ. ಇದರಿಂದ ನಮ್ಮ ರಾಜ್ಯದ ರೈತರಿಗೆ ಅನುಕೂಲ ಆಗಬೇಕು. ಅವರ ಜಲಧಾರೆ ಎಲ್ಲೆಡೆ ಸಾಗಲಿ. ಅವರ ಕಾರ್ಯಕ್ರಮ ಯಶಸ್ವಿಯಾಗಲಿ. ನಮ್ಮ ತಕರಾರಿಲ್ಲ ಎಂದು ಶುಭ ಹಾರೈಸಿದರು.

ಜನತೆಗೆ ಕಾಂಗ್ರೆಸ್‌ ಸರ್ಕಾರ ಅಪೇಕ್ಷೆ: ಚುನಾವಣೆ ನಂತರ ಮೈತ್ರಿ ಮಾಡಿಕೊಳ್ಳುವ ಆಲೋಚನೆ ಇದೆಯೇ ಎಂಬ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾವು ನಮ್ಮ ಕಾಲ ಮೇಲೆ, ಸ್ವಂತ ಬಲದ ಸರ್ಕಾರ ರಚನೆ ಮಾ ಡುತ್ತೇವೆ. ಜನ ಕಾಂಗ್ರೆಸ್‌ ಸರ್ಕಾರ ಬರಬೇಕು ಎಂದು ಅಪೇಕ್ಷಿಸುತ್ತಿದ್ದಾರೆ ಎಂದರು.

ಕಾಂಗ್ರೆಸ್‌ ಸೇರಲು ಅರ್ಜಿಗಳು ಬಂದಿವೆ: ಜೆಡಿಎಸ್‌, ಬಿಜೆಪಿ ಪಕ್ಷದ ಶಾಸಕರು, ಮುಖಂಡರು ಕಾಂಗ್ರೆಸ್‌ ಸೇರಲು ಅರ್ಜಿ ಹಾಕಿ ದ್ದಾರೆ. ಹಾಸನದ ಶಾಸಕ ಪ್ರೀತಂಗೌಡ ಅವರೂ ಅರ್ಜಿ ಹಾಕಿದ್ದಾರಾ ಎಂಬ ಪ್ರಶ್ನೆಗೆ ಅದನ್ನೆಲ್ಲ ಬಹಿರಂಗವಾಗಿ ಹೇಳಲ್ಲ. ಅದು ಗೌಪ್ಯ ವಿಚಾರ. ನಮಗೆ ದೊಡ್ಡ ನಾಯಕರುಗಳೇ ಬರಬೇಕು ಎಂಬ ನಿರೀಕ್ಷೆ ಇಲ್ಲ. 5-10 ಮತಗಳಿಂದ 2-3 ಸಾವಿರ ಮತ ತರುವ ಕಾರ್ಯಕರ್ತರು ಪಕ್ಷ ಸೇರಿದರೆ ಸಾಕು. ಈ ವಿಚಾರದಲ್ಲಿ ನಾವು ಸ್ಥಳೀಯ ನಾಯಕರು, ಕಾರ್ಯಕರ್ತರ ಅಭಿಪ್ರಾಯ ಪಡೆಯುತ್ತೇವೆ. ಪಕ್ಷದ ಸ್ಥಳೀಯ ಕಾರ್ಯಕರ್ತರ ಜತೆ ಅವರು ಬೆರೆಯಬೇಕು ಎಂದರು.

63 ಲಕ್ಷ ಸದಸ್ಯತ್ವ ನೋಂದಣಿ: ರಾಜ್ಯದಲ್ಲಿ 63 ಲಕ್ಷ ಕಾಂಗ್ರೆಸ್‌ ಪಕ್ಷದ ಡಿಜಿಟಲ್‌ ಸದಸ್ಯತ್ವ ನೋಂದಣಿ ಮಾಡಲಾಗಿದೆ. ಪ್ರತಿ ಬೂತ್‌ನಲ್ಲಿ ನೋಂದಾಣಿದಾರರ ನೇಮಕ ಮಾಡಿ ಮತದಾರರ ಪಟ್ಟಿ ತೆಗೆದುಕೊಂಡು ಮನೆ ಮನೆಗೂ ಹೋಗಿ ನೋಂದಣಿ ಮಾಡಲಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್‌ ಅವರು ಹೇಳಿದರು.

ನೋಂದಣಿ 70 ಲಕ್ಷ ದಾಟಲಿದೆ: ಹಾಸನದಲ್ಲಿ 2,35,000 ಸದಸ್ಯತ್ವ ನೋಂದಣಿ ಆಗಿದೆ. ಇನ್ನು 9 ದಿನ ಕಾಲಾವಕಾಶ ಇದ್ದು, ಎಲ್ಲರೂ ಉತ್ಸಾಹದಿಂದ ಸದಸ್ಯತ್ವ ನೋಂದಣಿ ಮಾಡಿ, ಸುಮಾರು 70 ಲಕ್ಷ ಗಡಿ ಮುಟ್ಟುವ ವಿಶ್ವಾಸವಿದೆ ಎಂದರು.

ಕೈ ಅಧಿಕಾರಕ್ಕೆ ತರಲು ನೋಂದಣಿ: ಪಂಚರಾಜ್ಯ ಚುನಾವಣೆಯಲ್ಲಿ ® ಫ‌ಲಿತಾಂಶ ನಂತರವೂ 30 ಲಕ್ಷ ಸದಸ್ಯರು ಕಾಂಗ್ರೆಸ್‌ಗೆ ನೋಂದಣಿ ಆಗಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ತರಲು ಅವರೆಲ್ಲ ಸದಸ್ಯರಾಗುತ್ತಿರುವುದು ಸ್ಪಷ್ಟವಾಗಿದೆ ಎಂದು ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವ ನಾರಾಯಣ, ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಜಾವ ಗಲ್‌ ಮಂಜುನಾಥ್‌, ಮಾಜಿ ಸಚಿವ ಬಿ.ಶಿವರಾಮು, ಜಿಲ್ಲೆಯ ಕಾಂಗ್ರೆಸ್‌ ಮುಖಂಡರಾದ ಎಚ್‌.ಕೆ.ಜವರೇಗೌಡ, ಎಂ.ಎ.ಗೋಪಾಲಸ್ವಾಮಿ, ವಕೀಲ ದೇವರಾಜೇಗೌಡ, ಎಚ್‌. ಕೆ.ಮಹೇಶ್‌, ಬಿ.ಕೆ.ರಂಗಸ್ವಾಮಿ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.