ಹಣಕಾಸಿನ ಲೆಕ್ಕ ಕೊಡಲಿಲ್ಲ ಎಂದು ಪುತ್ರನಿಗೇ ಬೆಂಕಿ ಹಚ್ಚಿದ ತಂದೆ: ಚಿಕಿತ್ಸೆ ಫ‌ಲಿಸದೆ ಸಾವು


Team Udayavani, Apr 8, 2022, 6:30 AM IST

ಹಣಕಾಸಿನ ಲೆಕ್ಕ ಕೊಡಲಿಲ್ಲ ಎಂದು ಪುತ್ರನಿಗೇ ಬೆಂಕಿ ಹಚ್ಚಿದ ತಂದೆ: ಚಿಕಿತ್ಸೆ ಫ‌ಲಿಸದೆ ಸಾವು

ಬೆಂಗಳೂರು : ಒಂದೂವರೆ ಕೋಟಿ ರೂ. ಹಣಕಾಸಿನ ಲೆಕ್ಕ ಕೊಡಲಿಲ್ಲ ಎಂಬ ಕಾರಣಕ್ಕೆ  ತಂದೆಯೇ ಪುತ್ರನನ್ನು ಸಾರ್ವಜನಿಕವಾಗಿ ಥಿನ್ನರ್‌ ಸುರಿದು ಬೆಂಕಿ ಹಚ್ಚಿ ಕೊಂದಿರುವ ಹೃದಯ ವಿದ್ರಾವಕ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ.

ಚಾಮರಾಜಪೇಟೆಯ ಆಜಾದ್‌ನಗರ ನಿವಾಸಿ ಅರ್ಪಿತ್‌ (25) ಕೊಲೆಯಾದ ಪುತ್ರ. ಕೃತ್ಯ ಎಸಗಿದ ಆತನ ತಂದೆ ಸುರೇಂದ್ರ ಕುಮಾರ್‌ ಅಲಿಯಾಸ್‌ ಸುರೇಂದ್ರ ಬಾಬು(51)ನನ್ನು ಚಾಮರಾಜಪೇಟೆ ಪೊಲೀಸರು ಬಂಧಿಸಿದ್ದಾರೆ.

ರಾಜಸ್ಥಾನ ಮೂಲದ ಸುರೇಂದ್ರಕುಮಾರ್‌ 25 ವರ್ಷಗಳಿಂದಲೂ  ಕನ್‌ಸ್ಟ್ರಕ್ಷನ್‌ ಮತ್ತು ಫ್ಯಾಬ್ರಿಕೇಷನ್‌ ವ್ಯವಹಾರ ಮಾಡಿಕೊಂಡಿದ್ದಾರೆ. ಮೂರು ವರ್ಷಗಳಿಂದ ಪುತ್ರ ಅರ್ಪಿತ್‌ ತಂದೆ ಜತೆ ವ್ಯವಹಾರ ನೋಡಿಕೊಳ್ಳುತ್ತಿದ್ದಾನೆ. ಈ ಮಧ್ಯೆ ಅರ್ಪಿತ್‌, ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ. ಫ್ಯಾಬ್ರಿಕೇಷನ್‌ ವ್ಯವಹಾರದ ಕೋಟ್ಯಂತರ ರೂ. ಹಣದ ಬಗ್ಗೆ 8-10 ತಿಂಗಳಿಂದ ಲೆಕ್ಕ ಕೊಟ್ಟಿರಲಿಲ್ಲ. ಅದರಿಂದ ಆಕ್ರೋಶಗೊಂಡಿದ್ದ ತಂದೆ, ನಿತ್ಯ ಪುತ್ರನಿಗೆ ಲೆಕ್ಕ ಕೊಡುವಂತೆ ಪೀಡಿಸುತ್ತಿದ್ದ. ಇತ್ತೀಚೆಗೆ 12 ಸಾವಿರ ರೂ.ಪಡೆದುಕೊಂಡ ಬಗ್ಗೆಯೂ ಲೆಕ್ಕ ಕೊಟ್ಟಿರಲಿಲ್ಲ ಎಂದು ಪೊಲೀಸರು ಹೇಳಿದರು.

ಇದನ್ನೂ ಓದಿ : ಕುಣಿಗಲ್: 161 ಅಡಿ ಆಂಜನೇಯ ವಿಗ್ರಹ ಏ 10 ರಂದು ಪ್ರಧಾನಿಯಿಂದ ಲೋಕಾರ್ಪಣೆ

ಏ.1ರಂದು ಹಣಕಾಸಿನ ವಿಚಾರಕ್ಕೆ ವಾಗ್ವಾದ ನಡೆದಿದೆ. ಆಕ್ರೋಶಗೊಂಡ ಸುರೇಂದ್ರ ಕುಮಾರ್‌, ಮನೆಯಲ್ಲಿದ್ದ ಥಿನ್ನರ್‌ನನ್ನು ಪುತ್ರ ಅರ್ಪಿತ್‌ ಮೈಮೇಲೆ ಸುರಿದಿದ್ದಾನೆ. ಪುತ್ರ ಮನೆಯಿಂದ ಹೊರಗಡೆ ಬಂದಿದ್ದಾನೆ. ಆದರೂ ಬಿಡದ ಸುರೇಂದ್ರ ಕುಮಾರ್‌, ಮನೆ ಮುಂಭಾಗವೇ ಬೆಂಕಿ ಕಡ್ಡಿ ಗೀರಿ ಎಸೆದಿದ್ದಾನೆ. ಮೊದಲ ಬಾರಿಗೆ ಹೊತ್ತಿಕೊಳ್ಳದ್ದರಿಂದ, ಎರಡನೇ ಬಾರಿ ಬೆಂಕಿ ಕಡ್ಡಿ ಗೀರಿ ಮೈಮೇಲೆ ಎಸೆದ ಕೂಡಲೇ ಬೆಂಕಿ ತಗುಲಿದ್ದರಿಂದ, ಅರ್ಪಿತ್‌ ಕೂಗಿಕೊಂಡು ರಸ್ತೆಯೆಲ್ಲ ಓಡಾಡಿದ್ದಾನೆ. ಬಳಿಕ ಸ್ಥಳೀಯರು ಬೆಂಕಿ ನಂದಿಸಿದ್ದಾರೆ.

ಅನಂತರ ತಂದೆಯೇ ಮಗನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಏಳು ದಿನಗಳ ಕಾಲ ಚಿಕಿತ್ಸೆ ಪಡೆದ ಅರ್ಪಿತ್‌, ಗುರುವಾರ ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದಾನೆ.

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.