ಅಲ್ ಕಾಯಿದಾ ವೀಡಿಯೋ ಖಚಿತತೆ ಬಗ್ಗೆ ವಿಚಾರಣೆ: ಸಿಎಂ ಬೊಮ್ಮಾಯಿ
Team Udayavani, Apr 8, 2022, 6:40 AM IST
ಮೈಸೂರು: ಹಿಜಾಬ್ ಪರ ಅಲ್ ಕಾಯಿದಾ ಭಯೋತ್ಪಾದಕ ಸಂಘಟನೆ ಮುಖ್ಯಸ್ಥ ಅಯ್ಮನ್ ಜವಾಹಿರಿ ನೀಡಿರುವ ಹೇಳಿಕೆಯ ವೀಡಿಯೋ ಹಾಗೂ ಮತ್ತಿತರ ಸಂಗತಿಗಳ ಖಚಿತತೆ ಬಗ್ಗೆ ವಿಚಾರಣೆ ನಡೆಸುವಂತೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಗುರುವಾರ ಇಲ್ಲಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಹಿಜಾಬ್ ಬಗ್ಗೆ ಅಲ್ ಕಾಯಿದಾ ಪ್ರತಿಕ್ರಿಯೆಯಲ್ಲಿ ಆಶ್ಚರ್ಯವೇನೂ ಇಲ್ಲ. ಈ ದೇಶದ ನೆಲದ ಕಾನೂನಿನ ವಿರುದ್ಧ ನಡವಳಿಕೆ ಪ್ರಾರಂಭ ಮಾಡಿ ಅದನ್ನು ವಿವಾದ ಮಾಡುವ ಮೂಲಕ ಜನರಲ್ಲಿ ಅಶಾಂತಿ, ಗೊಂದಲ ಮೂಡಿಸುವ ಪ್ರಯತ್ನಗಳೂ ನಡೆದಿವೆ. ಇದರ ಒಂದು ಭಾಗವಾಗಿ ಅಲ್ ಕಾಯಿದಾ ಎಂದು ಹೇಳಿಕೊಂಡಿರುವ ವೀಡಿಯೋ ಇದೆ. ಇದರ ಖಚಿತತೆ ಬಗ್ಗೆ ವಿಚಾರಣೆ ಮಾಡಲು ಪೊಲೀಸ್ ವರಿಷ್ಠರಿಗೆ ಸೂಚಿಸಿದ್ದೇನೆ ಎಂದರು.
ಅಲ್ ಕಾಯಿದಾ ಹೇಳಿಕೆ ಹಿಂದೆ ಆರೆಸ್ಸೆಸ್ ಕೈವಾಡವಿದೆ ಎಂಬ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಪ್ರಶ್ನಿಸಿದಾಗ, ಇದರಲ್ಲಿ ಲಾಜಿಕ್ ಇಲ್ಲ. ಯಾವುದೇ ಆಧಾರವೂ ಇಲ್ಲ. ಅಲ್ ಕಾಯಿದಾ ಹೇಳಿಕೆ ಬಂದರೆ ಸಿದ್ದರಾಮಯ್ಯ ಯಾಕೆ ಗಲಿಬಿಲಿಗೊಳ್ಳುತ್ತಾರೆ ಎಂಬುದೇ ಆಶ್ಚರ್ಯದ ಸಂಗತಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.