ಗೋವಾದ ನೀರು ಕೊಲ್ಲಿ ರಾಷ್ಟ್ರಗಳಿಗೆ ಕೊಂಡೊಯ್ಯಲು ಸಾಧ್ಯ : ಸಚಿವ ರವಿ
Team Udayavani, Apr 8, 2022, 1:07 PM IST
ಪಣಜಿ: ಸಚಿವ ರವಿ ನಾಯ್ಕ ತಮ್ಮ ಹೇಳಿಕೆಗಳಿಂದ ಸದಾ ಸುದ್ದಿಯಲ್ಲಿರುತ್ತಾರೆ, ಇದೀಗ ಮತ್ತೊಂದು ಹೇಳಿಕೆ ನೀಡಿ ಚರ್ಚೆಗೆ ಕಾರಣವಾಗಿದ್ದಾರೆ. ಗೋವಾದಲ್ಲಿ ನೀರು ಸಂಗ್ರಹಿಸಿ ಕೊಲ್ಲಿ ರಾಷ್ಟ್ರಗಳಿಗೆ ಕೊಂಡೊಯ್ಯಲು ಸಾಧ್ಯ ಎಂಬ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಗೋವಾದಲ್ಲಿ ಅಣೆಕಟ್ಟುಗಳನ್ನು ನಿರ್ಮಿಸಿ ನೀರಿನ ಕೊರತೆಯಿರುವ ಸ್ಥಳಗಳಿಗೆ ನೀರು ಪೂರೈಸಲು ಸಾಧ್ಯ. ಗೋವಾದಲ್ಲಿ ಸಂಗ್ರಹವಾಗಿರುವ ನೀರನ್ನು ನೇರವಾಗಿ ಕೊಲ್ಲಿ ರಾಷ್ಟ್ರಗಳಿಗೆ ಕೊಂಡೊಯ್ಯಲು ಸಾಧ್ಯವಿದೆ ಎಂದು ರವಿ ನಾಯ್ಕ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ರವಿ ನಾಯ್ಕ ಕೃಷಿ ಸಚಿವರಾಗಿದ್ದು, ಅಧಿಕಾರ ಸ್ವೀಕರಿಸಿದ ನಂತರ ಅವರು ನೀಡಿದ ಮೊದಲ ಹೇಳಿಕೆ ಇದಾಗಿದೆ.
ನನ್ನ ಯೋಜನೆಗಳನ್ನು ತಿಳಿದುಕೊಳ್ಳಲು ನೀವು ಏಕೆ ಆತುರಪಡುತ್ತೀರಿ ಎಂದು ಸುದ್ಧಿಗಾರರನ್ನು ಪ್ರಶ್ನಿಸಿ, ಗೋವಾ ರಾಜ್ಯದಲ್ಲಿ ಸದ್ಯ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ರಾಜ್ಯದ ಹಲವೆಡೆ ಸದ್ಯ ಪ್ರತಿದಿನ ಎರಡರಿಂದ ನಾಲ್ಕು ಗಂಟೆಗಳು ಮಾತ್ರ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತದೆ. ಇನ್ನೂ ಕೆಲವೆಡೆ ಟ್ಯಾಂಕರ್ ಮೂಲಕ ಕುಡಿಯುವ ನೀರಿನ ಪೂರೈಕೆ ಮಾಡಲಾಗುತ್ತದೆ. ಇನ್ನು ಮುಂದೆ ಗೋವಾದಿಂದ ನೀರನ್ನು ರಫ್ತು ಮಾಡುವುದಾಗಿ ಹೇಳಿದ್ದಾರೆ.
ರವಿ ನಾಯ್ಕರವರು ಗೋವಾ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಪೊಂಡಾ ಕ್ಷೇತ್ರದಲ್ಲಿ 77 ಮತಗಳಿಂದ ಜಯಗಳಿಸಿದ್ದರು. ಸದ್ಯ ಮುಖ್ಯಮಂತ್ರಿ ಪ್ರಮೋದ ಸಾವಂತ್ ಸಂಪುಟದಲ್ಲಿ ಕೃಷಿ ಖಾತೆಯೊಂದಿಗೆ ಕರಕುಶಲ ಮತ್ತು ನಾಗರೀಕ ಸರಬರಾಜು ಖಾತೆಯನ್ನು ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.