ಶಾಲೆಗಳಿಗೆ ಬಾಂಬ್ ಬೆದರಿಕೆ; ಕೂಡಲೇ ಬಂಧಿಸುವಂತೆ ಸೂಚನೆ ನೀಡಿದ್ದೇನೆ : ಸಿಎಂ
ಸುಳ್ಳು ಕರೆಗೆ ಪ್ರಾಮುಖ್ಯತೆ ನೀಡಬೇಡಿ: ಸಚಿವ ನಾಗೇಶ್
Team Udayavani, Apr 8, 2022, 3:42 PM IST
ಬೆಂಗಳೂರು: ಕೆಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇ -ಮೇಲ್ ಬಂದಿರುವ ಕುರಿತು ಶುಕ್ರವಾರ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕಠಿಣ ಕ್ರಮಕ್ಕೆ ಪೊಲೀಸರಿಗೆ ಸೂಚನೆ ನೀಡಿದ್ದು, ಬೆದರಿಕೆ ಹಾಕಿದವರನ್ನು ಕೂಡಲೇ ಬಂಧಿಸುವಂತೆ ಆದೇಶಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ,” ಶಾಂತಿ ಕದುಡುವ ಹುನ್ನಾರ ನಡೆಯುತ್ತಿದೆ. ಪ್ರಗತಿ ಹೊಂದಿದ ರಾಜ್ಯಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ಮಾಡಲಾಗುತ್ತಿದೆ. ಶಾಲೆಗಳಿಗೆ ಇ-ಮೇಲ್ ಮೂಲಕ ಬೆದರಿಕೆ ಬಂದಿದೆ. ಬೆದರಿಕೆ ಬಂದ ಶಾಲೆಗಳಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ.ಎಲ್ಲಾ ರೀತಿಯ ತನಿಖೆ ನಡೆಯುತ್ತಿದೆ. ಎಲ್ಲಿಂದ ಕರೆ ಬಂದಿದೆ ಅನ್ನುವುದರ ಬಗ್ಗೆ ತೆನಿಖೆಯಾಗುತ್ತಿದೆ.ಪೋಷಕರು ಆತಂಕ ಪಡುವ ಅಗತ್ಯವಿಲ್ಲ.ಕೆಟ್ಟ ಹೆಸರು ತರಬೇಕು ಎಂದು ಹೇಳಿ ಈ ರೀತಿ ಮಾಡುತ್ತಿದ್ದಾರೆ. ಪೊಲೀಸ್ ಇಲಾಖೆ ಗಂಭೀರವಾಗಿ ತಗೆದುಕೊಂಡು ತಪಾಸಣೆ ಮಾಡುತ್ತಿದೆ” ಎಂದು ತಿಳಿಸಿದ್ದಾರೆ.
ಬೆದರಿಕೆ ಕುರಿತು ಗುಪ್ತಚರ ಇಲಾಖೆ ಎಡಿಜಿಪಿ ದಯಾನಂದ್ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅವರಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಬೆಂಗಳೂರು : ನಾಲ್ಕು ಶಾಲೆಗಳಿಗೆ ಬಾಂಬ್ ಬೆದರಿಕೆ; ಪೊಲೀಸರ ದೌಡು
ನಿಮಗೆಲ್ಲಾ ಗೊತ್ತಿದೆ ಹಿಂದೆಯೂ ಈ ರೀತಿ ಆಗಿತ್ತು
ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ನಾಗೇಶ್ , ”ಈ ರೀತಿಯ ಸುಳ್ಳು ಕರೆಗಳಿಗೆ ಪ್ರಾಮುಖ್ಯತೆ ನೀಡಬೇಡಿ” ಎಂದಿದ್ದಾರೆ.
”ಸುಳ್ಳು ಕರೆಗಳಿಂದ ಗಾಬರಿಯಾಗುವ ಮಕ್ಕಳು ಪರೀಕ್ಷೆ ಸಮಯದಲ್ಲಿ ಹೆದರುತ್ತಾರೆ. ಯಾರೋ ಎಲ್ಲೋ ಕೂತು ಫೋನಲ್ಲಿ ಮಾಡಿರುವ ಕೆಲಸವಿದು. ಗೃಹ ಇಲಾಖೆ ಎಲ್ಲಾ ಕರೆಯನ್ನ ಗಂಭೀರವಾಗಿ ಪರಿಗಣಿಸಿದೆ, ಎಲ್ಲಾ ಮಾಹಿತಿ ಕಲೆ ಹಾಕುತ್ತಿದೆ. ನಿಮಗೆಲ್ಲಾ ಗೊತ್ತಿದೆ ಹಿಂದೆಯೂ ಈ ರೀತಿ ಆಗಿತ್ತು” ಎಂದರು.
”ವಿದ್ಯಾರ್ಥಿಯೊಬ್ಬ ಪರೀಕ್ಷೆಗೆ ಸಿದ್ಧವಾಗಿರಲಿಲ್ಲ ಅಂತ ಈ ರೀತಿಯ ಕೆಲಸ ಮಾಡಿದ್ದ. ತನಿಖೆಯ ಬಳಿಕ ಪರೀಕ್ಷೆಗೆ ತಯಾರಾಗಿಲ್ಲ ಅಂತ ನಾನೇ ಮಾಡಿದ್ದು ಎಂದು ಅವನೇ ಒಪ್ಪಿಕೊಂಡಿದ್ದ. ಸರ್ಕಾರ ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದೆ, ಎಲ್ಲಾ ಕಡೆ ಡಾಗ್ ಸ್ಕ್ವಾಡ್ ಹೋಗಿ ಪರಿಶೀಲನೆ ಮಾಡಿದೆ” ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.