ಬೆಂಗಳೂರು-ಹಾಸನ; ಸ್ಥಗಿತಗೊಂಡಿದ್ದ ರೈಲು ಇಂದಿನಿಂದ ಸಂಚಾರ, ವಿಮಾನ ನಿಲ್ದಾಣಕ್ಕೂ ಅನುಕೂಲ

ಬೆಂಗಳೂರು ಸಿಟಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಡೆಮು ರೈಲು ಸಂಚಾರ ಪ್ರಾರಂಭವಾಗಲಿದೆ.

Team Udayavani, Apr 8, 2022, 4:22 PM IST

ಬೆಂಗಳೂರು-ಹಾಸನ; ಸ್ಥಗಿತಗೊಂಡಿದ್ದ ರೈಲು ಇಂದಿನಿಂದ ಸಂಚಾರ, ವಿಮಾನ ನಿಲ್ದಾಣಕ್ಕೂ ಅನುಕೂಲ

ಕುದೂರು: ಕೊರೊನಾ ಲಾಕ್‌ಡೌನ್‌ ಸಂದರ್ಭದಲ್ಲಿ ಸ್ಥಗಿತ ಗೊಂಡಿದ್ದ ಬೆಂಗಳೂರು -ಹಾಸನ ಡೆಮು ರೈಲು ಸಂಚಾರ ಇಂದಿನಿಂದ ಆರಂಭವಾಗಲಿದೆ. ಕೊರೊನಾ ಮೊದಲ ಅಲೆ ಬಳಿಕ ನಿಲ್ಲಿಸಿದ್ದ ಡೆಮು ರೈಲು ಹಾಸನ ನಡುವೆ ಸಂಚರಿಸುತ್ತಿತ್ತು. ಕೊರೊನಾ ನಿಯಂತ್ರಣದ ಹಿನ್ನಲೆ ರೈಲುಗಳ ಸಂಚಾರ ಸ್ಥಗಿತಗೊಂಡಿದ್ದ ಸಂದರ್ಭದಲ್ಲಿ ಡೆಮು ರೈಲು ಸಂಚಾರವೂ ಸ್ಥಗಿತವಾಗಿತ್ತು. ಡೆಮು ರೈಲಿಗೆ ಹೊಂದಿಕೊಂಡಿದ್ದ ನೌಕರರು ರೈಲಿನ ಸ್ಥಗಿತದಿಂದ ತೊಂದರೆ ಗಳಾಗಿದ್ದವು. ಉದಯವಾಣಿ ಹುಬ್ಬಳಿ ರೈಲ್ವೆ ವಿಭಾಗಾಧಿಕಾರಿಗಳಿಗೆ ಗಮನಕ್ಕೆ ತಂದು, ಸಾರ್ವಜನಿಕ ಸಮಸ್ಯೆಯನ್ನು ಆಲಿಸಿ, ಹೀಗೆ ಬಂದು ಹಾಗೆ ಹೋದ ರೈಲು ಎಂದು ಜನವರಿ ತಿಂಗಳಿನಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.

ತಾಲೂಕಿನ ಜನರಿಗೆ ಸಂತಸ: ಈಗ ರೈಲ್ವೆ ಇಲಾಖೆಯು ಡೆಮು ರೈಲು ಸಂಚಾರಕ್ಕೆ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಹೀಗಾಗಿ ಮಾಗಡಿ, ಕುಣಿಗಲ್‌, ನೆಲಮಂಗಲ ತಾಲೂಕಿನ ಜನರು ಸಂತಸದಲ್ಲಿದ್ದಾರೆ. ಏ.8ರ ಶುಕ್ರವಾರದಿಂದ ಬೆಂಗಳೂರು-ಹಾಸನ ನಡುವೆ ಡೆಮು ರೈಲು ಸಂಚಾರ ಆರಂಭವಾಗಲಿದೆ. ಬೆಂಗಳೂರು ಸಿಟಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಡೆಮು ರೈಲು ಸಂಚಾರ ಪ್ರಾರಂಭವಾಗಲಿದೆ.

ವೇಳಾಪಟ್ಟಿ ವಿವರ: ಭಾನುವಾರ ಹೊರತುಪಡಿಸಿ, ವಾರದಲ್ಲಿ 6 ದಿನ ಸಂಚಾರ ಮಾಡಲಿದ್ದು, ರೈಲು ಪ್ರತಿ ದಿನ ಬೆಳಗ್ಗೆ 9.45ಕ್ಕೆ ಬೆಂಗಳೂರು ಸಿಟಿ ರೈಲು ನಿಲ್ದಾಣದಿಂದ ಹೊರಟು ಯಶವಂತ ಪುರ ರೈಲು ನಿಲ್ದಾಣಕ್ಕೆ 9.57ಕ್ಕೆ ಬರಲಿದೆ. ಅಲ್ಲಿ 3 ನಿಮಿಷ ನಿಲುಗಡೆಯಾಗಲಿದೆ. ನಂತರ ಅಲ್ಲಿಂದ ಮಾಗಡಿಯ ಸೋಲೂರು ನಿಲ್ದಾಣಕ್ಕೆ 10.45ಕ್ಕೆ ಬರಲಿದೆ. ತಿಪ್ಪಸಂದ್ರ ನಿಲ್ದಾಣಕ್ಕೆ 10.50ಕ್ಕೆ, ಕುಣಿಗಲ್‌ ನಿಲ್ದಾಣಕ್ಕೆ 11.05, ಶ್ರವಣಬೆಳಗೊಳ ನಿಲ್ದಾಣಕ್ಕೆ 12.30, ಚನ್ನರಾಯಪಟ್ಟಣ ರೈಲು ನಿಲ್ದಾಣಕ್ಕೆ 12.45, ಅಲ್ಲಿಂದ ಹಾಸನ ರೈಲು ನಿಲ್ದಾಣಕ್ಕೆ 1.45ಕ್ಕೆ ಬಂದು ಸೇರಲಿದೆ.

ಹಾಸನ ನಿಲ್ದಾಣದಲ್ಲಿ ಸುಮಾರು ಅರ್ಧ ಗಂಟೆ ನಿಲುಗಡೆಯಾದ ನಂತರ ಮಧ್ಯಾಹ್ನ 2.15ಕ್ಕೆ ಬೆಂಗಳೂರಿಗೆ ಹೊರಡುವ ಡೆಮು ರೈಲು ಚನ್ನರಾಯಪಟ್ಟಣಕ್ಕೆ 2.57, ಶ್ರವಣಬೆಳಗೊಳ ರೈಲು ನಿಲ್ದಾಣಕ್ಕೆ 3.10, ಕುಣಿಗಲ್‌ ನಿಲ್ದಾಣಕ್ಕೆ 4.26, ತಿಪ್ಪಸಂದ್ರಕ್ಕೆ 4.35, ಸೋಲೂರಿಗೆ 4.45, ಯಶವಂತಪುರ ನಿಲ್ದಾಣಕ್ಕೆ 5.30, ಬೆಂಗಳೂರು ಸಿಟಿ ರೈಲು ನಿಲ್ದಾಣಕ್ಕೆ ಸಂಜೆ 6 ಗಂಟೆಗೆ ತಲುಪಲಿದೆ.

ವಿಮಾನ ನಿಲ್ದಾಣಕ್ಕೂ ಅನುಕೂಲ: ಡೆಮು ರೈಲು ಮೆಜೆಸ್ಟಿಕ್‌ ರೈಲು ನಿಲ್ದಾಣ ತಲುಪಿದ ನಂತರ ದೇವನಹಳ್ಳಿ ಮಾರ್ಗವಾಗಿ ಚಿಕ್ಕಬಳ್ಳಾಪುರ ಮಾರ್ಗವಾಗಿ ಕೋಲಾರಕ್ಕೆ ತೆರಳಲಿದೆ. ಪುನಃ ಅದೇ ಮಾರ್ಗವಾಗಿ ಮರುದಿನ ಹಾಸನಕ್ಕೆ ಬರುವುದರಿಂದ ಚಿಕ್ಕಬಳ್ಳಾಪುರ ಮತ್ತು ಕೋಲಾರಕ್ಕೆ ತೆರಳುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹೋಗುವವರಿದ್ದರೆ ದೇವನಹಳ್ಳಿ ನಿಲ್ದಾಣದಲ್ಲಿ ಇಳಿದು ಹೋಗಬಹುದು.

ಎಲ್ಲಾ ನಿಲ್ದಾಣಗಳಲ್ಲೂ 8 ಬೋಗಿಗಳಿರುವ ಡೆಮು ರೈಲು ಹಾಸನ -ಬೆಂಗಳೂರು ಸಿಟಿ ರೈಲು ನಿಲ್ದಾಣಗಳ ನಡುವೆ 15 ನಿಲ್ದಾಣದಲ್ಲೂ ನಿಲುಗಡೆಯಾಗಲಿದೆ. ಮೆಜೆಸ್ಟಿಕ್‌ನಿಂದ ಹೊರಡುವ ಡೆಮು ರೈಲು ಪ್ರಯಾಣಿಕರ ದರ ಕೇವಲ 70 ರೂ., ಹೀಗಾಗಿ, ಬಹಳಷ್ಟು ಪ್ರಯಾಣಿಕರು ರೈಲು ಪ್ರಯಾಣವನ್ನೇ ಅವಲಂಬಿಸಬಹುದು ಎಂದು ನಿರೀಕ್ಷಿಸಲಾಗಿದೆ.

06583, 06584 ಎಂಬ ಸಂಖ್ಯೆಯ ರೈಲುಗಳು ಏ.8ರಿಂದ ಆರಂಭವಾಗಲಿದೆ. ರೈಲ್ವೆ ಇಲಾಖೆ ಸಕಲ ಸಿದ್ಧತೆ ಮಾಡಿ ಕೊಂಡಿದೆ. ಪ್ರಯಾಣಿಕರಿಗೆ ಅನುಕೂಲ ವಾಗಲು ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ.
●ಗಿರೀಶ್‌, ರೈಲ್ವೆ ಸ್ಟೇಷನ್‌ ಮಾಸ್ಟರ್‌, ತಿಪ್ಪಸಂದ್ರ

●ಕೆ.ಎಸ್‌.ಮಂಜುನಾಥ್‌

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.