ಒಡೆದು ಆಳುತ್ತಿರುವ ಬಿಜೆಪಿಗೂ ಬ್ರಿಟೀಷರಿಗೂ ಯಾವುದೇ ವ್ಯತ್ಯಾಸವಿಲ್ಲ: ಕುಮಾರಸ್ವಾಮಿ
Team Udayavani, Apr 9, 2022, 12:36 PM IST
ಬೆಂಗಳೂರು: ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡು ಕಳೆದ 75 ವರ್ಷಗಳಿಂದ ಒಂದೇ ತಾಯಿಯ ಮಕ್ಕಳಂತೆ ಇರುವ ರಾಜ್ಯಗಳ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹುಳಿ ಹಿಂಡಿ, ಹಿಂದಿ ಹೇರಿಕೆ ಬಗ್ಗೆ ಹೇಳಿಕೆ ನೀಡುತ್ತಿರುವುದು ಆಘಾತಕಾರಿ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಅಮಿತ್ ಶಾ ಹೇಳಿಕೆ ವಿರೋಧಿಸಿ ಸರಣಿ ಟ್ವೀಟ್ ಮಾಡಿರುವ ಎಚ್ ಡಿಕೆ, ಪ್ರತಿಯೊಂದಕ್ಕೂ ಹಿಂದುತ್ವದ ಜಪ ಮಾಡಿ ಭಾವನಾತ್ಮಕ ವಿಷಯಗಳನ್ನು ಮುನ್ನೆಲೆಗೆ ತಂದು ಸಮಾಜ ಮತ್ತು ಜನರನ್ನು ಒಡೆಯುತ್ತಿರುವ ಬಿಜೆಪಿ, ಈಗ ಭಾಷೆಯನ್ನೂ ಟೂಲ್ ಕಿಟ್ ಮಾಡಿಕೊಂಡು ವಿಭಜನೆಗೆ ಹೊರಟಿರುವುದು ದೇಶಕ್ಕೆ ಗಂಡಾಂತರಕಾರಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಬ್ರಿಟಿಷರು ಪ್ರತಿ ಸಂಸ್ಥಾನವನ್ನು ಆಕ್ರಮಿಸಿಕೊಳ್ಳುವ ಮುನ್ನ ಒಡೆದು ಆಳುವ ನೀತಿ ಅನುಸರಿಸುತ್ತಿದ್ದರು. ಈಗ ಬಿಜೆಪಿ ಅದೇ ನೀತಿ ಮುಂದುವರೆಸಿದ್ದು, ಬ್ರಿಟೀಷರಿಗೂ ಮತ್ತು ಬಿಜೆಪಿಗೆ ಯಾವುದೇ ವ್ಯತ್ಯಾಸ ಇಲ್ಲ ಎನ್ನುವುದಕ್ಕೆ ಇದೇ ಜೀವಂತ ಸಾಕ್ಷಿ ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ:ನೆಲಮಂಗಲ : ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಒಕ್ಕಲಿಗ ಮುಖಂಡರ ಅಸಮಾಧಾನ
ಅಮಿತ್ ಶಾ ಅವರಿಗೆ ಇಂಗ್ಲಿಷ್ ಬರಲ್ವಾ? ಅವರಿಗೆ ಪ್ರಾದೇಶಿಕ ಭಾಷೆಗಳ ಮೇಲೆ ಯಾಕೆ ಈ ಪರಿ ದ್ವೇಷ? ನಮ್ಮ ಭಾಷೆ ನಮಗೆ ಮುಖ್ಯ. ಮಾತೃಭಾಷೆಗೇ ಅಗ್ರಸ್ಥಾನ. ಕರ್ನಾಟಕದಲ್ಲಿ ಕನ್ನಡವೇ ಮೊದಲು. ಹಿಂದಿ ನಮ್ಮ ಭಾಷೆಯಲ್ಲ. ಹಿಂದಿ ಹೇರಿಕೆ ವಿರುದ್ದ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲವಿದೆ ಎಂದು ಎಚ್ ಡಿಕೆ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.