ಏ.14 ರಂದು ಪ್ರಧಾನಿ ಸಂಗ್ರಹಾಲಯ ಲೋಕಾರ್ಪಣೆ
14 ಪ್ರಧಾನಿಗಳ ಕೊಡುಗೆ ಸಾರುವ ಮ್ಯೂಸಿಯಂ
Team Udayavani, Apr 10, 2022, 7:30 AM IST
ಭಾರತದ ಎಲ್ಲ ಪ್ರಧಾನ ಮಂತ್ರಿಗಳು ದೇಶಕ್ಕೆ ನೀಡಿರುವ ಕೊಡುಗೆಯನ್ನು ಪ್ರಪಂಚಕ್ಕೆ ತಿಳಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ “ಪ್ರಧಾನ ಮಂತ್ರಿ ಸಂಗ್ರಹಾಲಯ’ ನಿರ್ಮಿಸಲಾಗಿದೆ. ಅಂಬೇಡ್ಕರ್ ಜಯಂತಿಯಾದ ಏ.14ರಂದೇ ಲೋಕಾರ್ಪಣೆಗೊಳ್ಳುತ್ತಿರುವ ಈ ಸಂಗ್ರಹಾಲಯದ ವಿಶೇಷತೆಗಳು ಇವು.
14 ಪ್ರಧಾನಿಗಳ ಸ್ಮರಣೆ:
ಭಾರತವು 1947ರಲ್ಲಿ ಸ್ವಾತಂತ್ರ್ಯ ಬಂದ ನಂತರ ಈವರೆಗೆ ಪ್ರಧಾನಿ ಮೋದಿಯವರನ್ನೂ ಸೇರಿ ಒಟ್ಟು 14 ಪ್ರಧಾನಿಗಳ ಆಡಳಿತ ಕಂಡಿದೆ. ಜವಹರಲಾಲ್ ನೆಹರು ಅವರಿಂದ ಹಿಡಿದು, ಪ್ರಧಾನಿ ನರೇಂದ್ರ ಮೋದಿಯವರೆಗೆ ಪ್ರತಿ ಪ್ರಧಾನ ಮಂತ್ರಿಗಳು ದೇಶಕ್ಕೆ ಕೊಟ್ಟ ಕೊಡುಗೆಯನ್ನು ಈ ಸಂಗ್ರಹಾಲಯದಲ್ಲಿ ಪ್ರದರ್ಶಿಸಲಾಗುವುದು.
ಸವಾಲುಗಳ ನೆನಪು:
ಸ್ವಾತಂತ್ರ್ಯ ಹೋರಾಟ, ಸಂವಿಧಾನ ರಚನೆಯ ಜೊತೆಗೆ ಆಯಾ ಪ್ರಧಾನ ಮಂತ್ರಿಗಳ ಆಡಳಿತ ಅವಧಿಯಲ್ಲಿ ಭಾರತಕ್ಕೆ ಎದುರಾದ ಸವಾಲುಗಳು ಹಾಗೂ ಅದನ್ನು ಅವರು ನಿಭಾಯಿಸಿದ ರೀತಿಯನ್ನು ಎಳೆಎಳೆಯಾಗಿ ಬಿಡಿಸಿಡಲಾಗುವುದು.
ಜನರ ಹಸ್ತವೇ ಲೋಗೋ:
ವಿಶೇಷವಾಗಿ ಈ ಸಂಗ್ರಹಾಲಯಕ್ಕೆ ಭಾರತದ ಜನರ ಹಸ್ತವನ್ನೇ ಲೋಗೋ ರೂಪದಲ್ಲಿ ಬಳಸಿಕೊಳ್ಳಲಾಗಿದೆ. ಲೋಗೋದಲ್ಲಿ ದೊಡ್ಡ ಹಸ್ತವೊಂದರಲ್ಲಿ ಅಶೋಕ ಚಕ್ರವಿದೆ.
ಹಳೆ ನೆಹರು ಸಂಗ್ರಹಾಲಯ ಸೇರ್ಪಡೆ:
ದೆಹಲಿಯ ತೀನ್ ಮೂರ್ತಿ ಎಸ್ಟೇಟ್‌ನಲ್ಲಿ ನಿರ್ಮಾಣವಾಗಿರುವ ಈ ಸಂಗ್ರಹಾಲಯದಲ್ಲಿ ಹಳೆಯ ನೆಹರು ಸಂಗ್ರಹಾಲಯವನ್ನೂ ಸೇರ್ಪಡಿಸಿಕೊಳ್ಳಲಾಗಿದೆ. ಹಾಗಾಗಿ ವಿಶೇಷವಾಗಿ ನೆಹರು ಅವರ ಕೊಡುಗೆಗಳು, ಅವರಿಗೆ ಬಂದಿರುವಂತಹ ಅತ್ಯದ್ಭುತ ಉಡುಗೊರೆಗಳನ್ನು(ಈವರೆಗೆ ಎಲ್ಲಿಯೂ ಪ್ರದರ್ಶನಗೊಳ್ಳದ ಉಡುಗೊರೆಗಳು) ಪ್ರದರ್ಶನ ಮಾಡಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.