ಒಂದೂರಲ್ಲಿ ಹೊಸಬರ ಒಂದ್‌ ಲವ್‌ ಸ್ಟೋರಿ


Team Udayavani, Apr 10, 2022, 12:54 PM IST

ಒಂದೂರಲ್ಲಿ ಹೊಸಬರ ಒಂದ್‌ ಲವ್‌ ಸ್ಟೋರಿ

“ಹದಿಹರೆಯದಲ್ಲಿ ಹುಡುಗರು ಕಲಿಕೆಯ ಕಡೆಗೆ ತಮ್ಮ ಗಮನ ಹರಿಸದೆ, ಪ್ರೀತಿ-ಪ್ರೇಮದ ಕಡೆಗೆ ಮುಖ ಮಾಡಿದರೆ, ಅಂತಹವರ ಭವಿಷ್ಯ ಹಾಳಾಗುತ್ತದೆ’- ಕಿರಿಯರಿಗೆ ಇಂಥದ್ದೊಂದು ಕಿವಿಮಾತನ್ನು ಅನೇಕ ಹಿರಿಯರು ಹೇಳುವುದನ್ನು ನೀವು ಕೇಳಿರುತ್ತೀರಿ. ಈಗ ಇದೇ ವಿಷಯವನ್ನು ಇಟ್ಟುಕೊಂಡು ಇಲ್ಲೊಂದು ಚಿತ್ರತಂಡ, ಅದನ್ನು ಸಿನಿಮಾ ರೂಪದಲ್ಲಿ ತೆರೆಮೇಲೆ ಹೇಳಲು ಹೊರಟಿದೆ. ಅಂದಹಾಗೆ, ಆ ಸಿನಿಮಾದ ಹೆಸರು “ಒಂದ್‌ ಊರಲ್ಲಿ, ಒಂದ್‌ ಲವ್‌ ಸ್ಟೋರಿ’.

ಎಂ. ಪಿ ಅರುಣ್‌ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರವನ್ನು “ಶ್ರೀ ವೀರಭದ್ರೇಶ್ವರ ಸಿನಿ ಕಂಬೈನ್ಸ್‌’ ಬ್ಯಾನರ್‌ನಲ್ಲಿ ಡಾ. ರೇವಣ್ಣ ಬಳ್ಳಾರಿ, ಕೆ. ಪ್ರಕಾಶ್‌ ಬಂಡವಾಳ ಹೂಡಿ ನಿರ್ಮಿಸಿದ್ದಾರೆ.

ಈಗಾಗಲೇ ಚಿತ್ರದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಸೆನ್ಸಾರ್‌ನಿಂದಲೂ ಬಿಡುಗಡೆಗೆ ಗ್ರೀನ್‌ ಸಿಗ್ನಲ್‌ ಪಡೆದುಕೊಂಡಿರುವ ಚಿತ್ರತಂಡ, ಇದೇ ಮೇ ತಿಂಗಳಿನಲ್ಲಿ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ. ಸದ್ಯ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇತ್ತೀಚೆಗೆ ಚಿತ್ರದ ಆಡಿಯೋ ಬಿಡುಗಡೆ ಮಾಡಿದೆ.

ಹಿರಿಯ ನಿರ್ದೇಶಕರಾದ ಜಿ. ಕೆ ಮುದ್ದುರಾಜ್‌, ಸುಧಾಕರ್‌ ಬನ್ನಂಜೆ, ಕಿರುತೆರೆ ನಟಿ ಅಶ್ವಿ‌ನಿ ಮುಂತಾದವರ ಸಮ್ಮುಖದಲ್ಲಿ “ಒಂದ್‌ ಊರಲ್‌ ಒಂದ್‌ ಲವ್‌ ಸ್ಟೋರಿ’ ಸಿನಿಮಾದ ಹಾಡುಗಳು ಹೊರಬಂದವು.  ಯುವನಟ ಪೃಥ್ವಿ, ಪಲ್ಲವಿ, ಡಾ.ರೇವಣ್ಣ ಬಳ್ಳಾರಿ ಮೊದಲಾದವರು “ಒಂದ್‌ ಊರಲ್‌ ಒಂದ್‌ ಲವ್‌ ಸ್ಟೋರಿ’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ:ನಟಿ ರೇಖಾ ವಿವಾಹವಾಗಲು ಮುಂದಾಗಿದ್ದ ಇಮ್ರಾನ್ ಖಾನ್: ಸುದ್ದಿ ಮತ್ತೆ ಮುನ್ನೆಲೆಗೆ

ಚಿತ್ರದ ಕಥಾಹಂದರದ ಬಗ್ಗೆ ಮಾತನಾಡಿದ ನಿರ್ಮಾಪಕ ಮತ್ತು ನಟ ಡಾ.ರೇವಣ್ಣ ಬಳ್ಳಾರಿ, “ಹದಿಹರೆಯದಲ್ಲಿ ಹುಡುಗ- ಹುಡುಗಿಯ ನಡುವೆ ಮೂಡುವುದು ಕೇವಲ ಆಕರ್ಷಣೆಯಷ್ಟೇ ಎಂಬುವುದನ್ನು ಈ ಸಿನಿಮಾದಲ್ಲಿ ಹೇಳಿದ್ದೇವೆ. ಪ್ರೀತಿ ಮತ್ತು ವ್ಯಾಮೋಹದ ನಡುವಿನ ವ್ಯತ್ಯಾಸ, ಕುಟುಂಬಗಳ ಪರದಾಟ, ಜಾತೀಯತೆ ಹೀಗೆ ಹಲವಾರು ವಿಷಯಗಳನ್ನು ಕಥೆಯಲ್ಲಿ ಹೇಳಿದ್ದೇವೆ’ ಎಂದು ವಿವರಣೆ ಕೊಡುತ್ತಾರೆ.

ಚಿತ್ರದ 6 ಹಾಡುಗಳಿಗೆ ಎ.ಎಂ ನೀಲ್‌ ಸಂಗೀತ, ಕೆ. ಜೆ ಸ್ವಾಮಿ ಸಾಹಿತ್ಯವಿದೆ. ಚಿತ್ರಕ್ಕೆ ರವಿ ಛಾಯಾಗ್ರಹಣ, ಜೀವನ್‌ ಸಂಕಲನವಿದೆ. ದಾವಣಗೆರೆ ಸುತ್ತಮುತ್ತಲಿನ ತ್ಯಾವಣಿಗಿ, ಹದಡಿ, ಕೊಟ್ಟೂರು, ಕಾರಿಗನೂರು, ಕಂಚಿಕೆರೆ ಮುಂತಾದ ಕಡೆಗಳಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ.

ಟಾಪ್ ನ್ಯೂಸ್

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Daali dhananjay starrer Zebra movie

Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್‌ ಸಾಥ್‌

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Maryade Prashne movie trailer out

Maryade Prashne: ಪ್ರಶ್ನೆ ಕೇಳಲು ಬಂದ ಮರ್ಯಾದಸ್ತರು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.