ನನಗೆ ಸಿದ್ದರಾಮಯ್ಯ ಸರ್ಟಿಫಿಕೆಟ್‌ ಬೇಕಿಲ್ಲ: ಆರಗ ಜ್ಞಾನೇಂದ್ರ


Team Udayavani, Apr 10, 2022, 10:00 PM IST

ನನಗೆ ಸಿದ್ದರಾಮಯ್ಯ ಸರ್ಟಿಫಿಕೆಟ್‌ ಬೇಕಿಲ್ಲ: ಆರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಮರ್ಥವಾಗಿ ಗೃಹ ಇಲಾಖೆ ನಿಭಾಯಿಸುತ್ತಿದ್ದೇನೆ. ಪಕ್ಷ ಹಾಗೂ ಮುಖ್ಯಮಂತ್ರಿ ಮೆಚ್ಚುವ ಕೆಲಸ ಮಾಡುತ್ತಿದ್ದೇನೆ. ನನಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸರ್ಟಿಫಿಕೆಟ್‌ ಬೇಕಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು ನೀಡಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಉಲ್ಲಂ ಸುವವರ ವಿರುದ್ಧ ಕ್ರಮ ತೆಗೆದುಕೊಂಡಿದ್ದೇವೆ. ಸಿದ್ದರಾಮಯ್ಯ ಅವರ ಕಾಲದಲ್ಲಿ ಏನಾಗಿದೆ, ಎಷ್ಟು ಸಾವಾಗಿದೆ ಎಂಬುದರ ಬಗ್ಗೆ ಸದನದಲ್ಲಿ ಹೇಳಿದ್ದೇನೆ. ಅವರು ಪಿಎಫ್ಐ, ಎಸ್‌ಡಿಪಿಐ ವಿರುದ್ಧದ ಪ್ರಕರಣ ವಾಪಾಸ್‌ ಪಡೆದವರು. ಅವರಿಂದ ನನಗೆ ಸರ್ಟಿಫಿಕೆಟ್‌ ಬೇಕಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ಕಾಂಗ್ರೆಸ್‌ನವರು ಅಧಿಕಾರದಲ್ಲಿ ಇಲ್ಲ. ಹೀಗಾಗಿ ರಾಜ್ಯ ಜಂಗಲ್‌ ರಾಜ್‌ ಆಗಿದೆ ಎಂದು ಆರೋಪಿಸುತ್ತಾರೆ. ಅವರ ಸರ್ಟಿಫಿಕೆಟ್‌ನಿಂದ ನಮ್ಮ ಸಾಮರ್ಥ್ಯ ಅಳೆಯಲಾಗಲ್ಲ. ಕೆಲವು ಘಟನೆ ಆಧರಿಸಿ ಅಸಮರ್ಥ ಎಂದು ಕರೆಯೋದು ಸರಿಯಲ್ಲ. ಬದ್ಧತೆಯಿಂದ ಕೆಲಸ ಮಾಡುತ್ತಿದ್ದು, ಇಲಾಖೆಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದೇನೆ. ಚಂದ್ರು ಹತ್ಯೆ ಘಟನೆ ಬಳಿಕ ವಿಳಂಬ ಮಾಡದೆ ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರ ಕಾಲದಲ್ಲಿ ಗೃಹ ಇಲಾಖೆಯನ್ನು ಡಮ್ಮಿ ಮಾಡಿದ್ದರು. ಇಬ್ಬರು ಗೃಹ ಸಚಿವರನ್ನು ಡಮ್ಮಿ ಮಾಡಿದ್ದರು. ಒಬ್ಬ ನಿವೃತ್ತ ಪೊಲೀಸ್‌ ಆಧಿಕಾರಿ ಕೈಗೆ ಗೃಹ ಇಲಾಖೆ ಒಪ್ಪಿಸಿದ್ದರು. ವರ್ಗಾವಣೆಗೆ ಬ್ರೋಕರ್‌ಗಳನ್ನು ಇರಿಸಿಕೊಂಡಿದ್ದರು. ಈ ರೀತಿ ನಮ್ಮ ಅಧಿಕಾರದಲ್ಲಿ ಆಗಿದೆಯಾ? ಎಂದು ಪ್ರಶ್ನಿಸಿದರು.

ಚಂದ್ರು ಕೊಲೆ ಸಿಐಡಿಗೆ:
ನಗರದ ಹಳೇಗುಡ್ಡದಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಚಂದ್ರು ಎಂಬ ಯುವಕನ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶಿಸಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಚಂದ್ರು ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ಈ ಹತ್ಯೆಗೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಿ ಸತ್ಯವನ್ನು ಬಯಲಿಗೆ ಎಳೆಯಬೇಕು ಹಾಗೂ ಹಂತಕರನ್ನು ಶಿಕ್ಷೆಗೆ ಒಳಪಡಿಸಬೇಕು. ಈ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

ಭಾಷೆ ವಿಚಾರಕ್ಕೆ ಚಂದ್ರು ಕೊಲೆಯಾಗಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಭಾಷೆ ವಿಚಾರದ ಬಗ್ಗೆ ನಾನು ಮಾತನಾಡುವುದಿಲ್ಲ. ತನಿಖೆ ನಡೆಯುತ್ತಿರುವುದರಿಂದ ಈ ಹಂತದಲ್ಲಿ ನಾನು ಹೆಚ್ಚು ಮಾತನಾಡುವುದಿಲ್ಲ. ಅಮಾನುಷವಾಗಿ ಕೊಲೆ ಮಾಡಲಾಗಿದೆ. ನಮ್ಮ ಪೊಲೀಸ್‌ ವಿಭಾಗದ ಮೇಲೆ ನಂಬಿಕೆ ಅಥವಾ ಅಪನಂಬಿಕೆ ವಿಚಾರ ಇಲ್ಲಿ ಬರುವುದಿಲ್ಲ. ಸಿಐಡಿಯೂ ನಮ್ಮದೇ ಪೊಲೀಸರ ಮತ್ತೂಂದು ವಿಭಾಗವಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.