ಮಾನಭಂಗ ಪ್ರಕರಣ: ಅಪರಾಧಿಗೆ ಎರಡು ವರ್ಷ ಜೈಲು, ದಂಡ
Team Udayavani, Apr 11, 2022, 5:30 AM IST
ಸುಳ್ಯ: ಮಾನಸಿಕ ಅಸ್ವಸ್ಥೆಯ ಮಾನಭಂಗ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ನ್ಯಾಯಾಲಯ ಅಪರಾಧಿಗೆ ಎರಡು ವರ್ಷ ಜೈಲು ಹಾಗೂ 10 ಸಾವಿರ ರೂ. ದಂಡ ತೆರುವಂತೆ ಆದೇಶಿಸಿದೆ.
ಬಾಳಿಲ ಗ್ರಾಮದ ಕಾಂಚೋಡು ಎಂಬಲ್ಲಿ 2015ರ ಜ. 11ರಂದು ಮಾನಸಿಕ ಅಸ್ವಸ್ಥರಾಗಿದ್ದ 28 ವರ್ಷದ ಮಹಿಳೆ ಒಬ್ಬರೇ ಮನೆಯಲ್ಲಿದ್ದ ವೇಳೆ ಕಳಂಜ ಗ್ರಾಮದ ಕೋಟೆ ಮುಂಡುಗಾರು ನಿವಾಸಿ ಸುಬ್ರಹ್ಮಣ್ಯ ಎಂಬಾತ ಮಾನಭಂಗ ಮಾಡಿ ಜೀವ ಬೆದರಿಕೆ ಒಡ್ಡಿದ್ದ. ಈ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಎಸ್‌ಐ ಚಂದ್ರಶೇಖರ್ ಕೋರ್ಟ್‌ಗೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸುಳ್ಯ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ಸೋಮಶೇಖರ ಎ. ಅವರು ಅಪರಾಧಿಗೆ ಎರಡು ವರ್ಷ ಸಾದಾ ಜೈಲು ಶಿಕ್ಷೆ, 10 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ ಒಂದು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಾಸಿಕ್ಯೂಷನ್ ಪರ ಎಪಿಪಿ ಜನಾರ್ದನ್ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
Belthangady: ತ್ಯಾಜ್ಯ ಸಂಸ್ಕರಣೆ ಘಟಕಕ್ಕೆ 1.18 ಕೋಟಿ ರೂ.
Madanthyar: ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಗೆ ತೇಪೆ ಕಾರ್ಯ
Subhramanya: 9 ತಿಂಗಳ ಹಿಂದೆ ಪೊಲೀಸರಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದನೇ ವಿಕ್ರಂ ಗೌಡ?
Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು
MUST WATCH
ಹೊಸ ಸೇರ್ಪಡೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್.ರೆಹಮಾನ್ ತಂಡದ ಸದಸ್ಯೆ ಮೋಹಿನಿ
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!
Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.