ಕಾನೂನು ಮೀರಿ ಹಿಂಸೆಗಿಳಿದರೆ ಸಹಿಸೆವು ; ಮುಖ್ಯಮಂತ್ರಿ ಬೊಮ್ಮಾಯಿ


Team Udayavani, Apr 12, 2022, 6:25 AM IST

ಕಾನೂನು ಮೀರಿ ಹಿಂಸೆಗಿಳಿದರೆ ಸಹಿಸೆವು ; ಮುಖ್ಯಮಂತ್ರಿ ಬೊಮ್ಮಾಯಿ

ಉಡುಪಿ: ಸಂವಿಧಾನ ಬದ್ಧವಾಗಿ ರಚನೆಯಾಗಿರುವ ನಮ್ಮ ಸರಕಾರ ಕಾನೂನು ಸುವ್ಯವಸ್ಥೆ ಮತ್ತು ಸಮಾನತೆಯ ದೃಷ್ಟಿಕೋನದಲ್ಲಿ ಕೆಲಸ ಮಾಡುತ್ತಿದೆ. ಅವರವರ ವಿಚಾರಗಳನ್ನು ಪ್ರಚಾರ ಮಾಡಿದರೆ ತೊಂದರೆ ಇಲ್ಲ. ಆದರೆ ಕಾನೂನನ್ನು ಕೈಗೆ ತೆಗೆದುಕೊಂಡು, ಹಿಂಸೆಗಿಳಿದರೆ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.

ಮಂಗಳೂರಿನಲ್ಲಿ ಲವ್‌ ಜೆಹಾದ್‌ ತಡೆಯಲು ಹಿಂದೂ ಟಾಸ್ಕ್ ಫೋರ್ಸ್‌ ರಚಿಸಲಾಗುತ್ತಿದೆ ಎಂಬ ವಿಚಾರಕ್ಕೆ ಸಂಬಂಧಿಸಿ ಸೋಮವಾರ ಆದಿಉಡುಪಿ ಹೆಲಿಪ್ಯಾಡ್‌ನ‌ಲ್ಲಿ ಪ್ರತಿಕ್ರಿಯಿಸಿದ ಅವರು, ಎಲ್ಲದಕ್ಕೂ ಕಾನೂನಿದೆ ಮತ್ತು ಕೆಲವು ಕಾನೂನುಗಳನ್ನು ಹಿಂದಿನ ಸರಕಾರಗಳೇ ರಚನೆ ಮಾಡಿವೆ. ಕಾನೂನು ರಕ್ಷಿಸುವುದು ನಮ್ಮ ಕೆಲಸ ಎಂದರು.

ನಮ್ಮ ಆ್ಯಕ್ಷನ್‌ ಮಾತಾಡಲಿದೆ
ಪ್ರಚಲಿತ ವಿದ್ಯಮಾನಗಳ ಬಗ್ಗೆ ಮುಖ್ಯಮಂತ್ರಿಗಳು ಮೌನವಾಗಿದ್ದಾರೆ ಎಂಬ ವಿಪಕ್ಷ ನಾಯಕರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ಆಡಳಿತಾತ್ಮಕ ಕ್ರಮಗಳೇ ಮಾತಾಡುತ್ತಿವೆ. ಎಲ್ಲದಕ್ಕೂ ನಾವು ಮಾತನಾಡಬಾರದು. ನಮ್ಮ ಕೆಲಸಗಳು ಮಾತನಾಡಬೇಕು. ಯಾವ ಸಂದರ್ಭದಲ್ಲಿ ಏನು ನಿರ್ಧಾರ ತೆಗೆದುಕೊಳ್ಳ ಬೇಕು ಎಂದು ನಮಗೆ ತಿಳಿದಿದೆ. ವಿಪಕ್ಷದ ನಾಯಕರಿಂದ ಏನನ್ನೂ ಕಲಿಯಬೇಕಿಲ್ಲ. ಹಲವು ಕೊಲೆಗಳಿಗೆ ನೇರವಾಗಿ ಆರೋಪ ಇರುವ ಸಂಸ್ಥೆಗಳ ಪ್ರಕರಣಗಳನ್ನು ಇವರು ಅಧಿಕಾರದಲ್ಲಿದ್ದಾಗ ಸರಕಾರದ ಮಟ್ಟಕ್ಕೆ ತೆಗೆದುಕೊಂಡು ಹೋಗಿ ಕೈಬಿಟ್ಟಿದ್ದರು. ಆಗ ಇವರ ಕರ್ತವ್ಯ ಪ್ರಜ್ಞೆ ಎಲ್ಲಿತ್ತು? ಕರ್ನಾಟಕ ಶಾಂತಿ ಸುವ್ಯವಸ್ಥೆ ಇರುವ ಅತ್ಯಂತ ಪ್ರಗತಿಪರ ರಾಜ್ಯ. ರಾಜ್ಯವನ್ನು ಯಾವ ರೀತಿ ಕಾಪಾಡಿಕೊಳ್ಳಬೇಕು ಎಂದು ಗೊತ್ತಿದೆ. ಅದನ್ನು ಮಾಡಿ ತೋರಿಸುತ್ತಿದ್ದೇವೆ. ಇವರ ಕಾಲದಲ್ಲಿ ಹತ್ತು ಹಲವು ಹಿಂದೂ ಯುವಕರ ಕೊಲೆಗಳಾಗಿದ್ದವು. ಆ ಸಂಸ್ಥೆಗಳ ಮೇಲಿನ ಪ್ರಕರಣವನ್ನೇ ಹಿಂಪಡೆದ್ದರು. ಆಗ ಅವರು ಬುದ್ಧಿ ಕಳೆದುಕೊಂಡಿದ್ದರೇ ಎಂದು ಪ್ರಶ್ನಿಸಿದರು. ಆ ಸಂಸ್ಥೆಯನ್ನು ರದ್ದುಗೊಳಿಸಲಾಗುವುದೇ ಎಂಬ ಪ್ರಶ್ನೆಗೆ ಮುಂದಿನ ದಿನಗಳಲ್ಲಿ ಉತ್ತರ ಸಿಗಲಿದೆ ಎಂದರು.

ಪಿಪಿಪಿ ಮಾದರಿಯ 8 ವೈದ್ಯ ಕಾಲೇಜು
ರಾಜ್ಯದಲ್ಲಿ ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ (ಪಿಪಿಪಿ) 8 ವೈದ್ಯಕೀಯ ಕಾಲೇಜು ಬರುತ್ತಿವೆ. ಅದರಲ್ಲಿ ಉಡುಪಿಯೂ ಒಂದಾಗಿದೆ. ಡಿಪಿಆರ್‌ ಸಿದ್ಧಪಡಿ ಸುವ ಕಾರ್ಯವೂ ನಡೆಯುತ್ತಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಜತೆಗೆ ಚರ್ಚೆ ನಡೆಸಲಿದ್ದೇವೆ. ಉಡುಪಿ ನಗರದ ಯುಜಿಡಿ ಕಾಮಗಾರಿಗೆ ಅನುದಾನ ಒದಗಿಸಲಾಗುವುದು ಎಂದರು.

 

 

ಟಾಪ್ ನ್ಯೂಸ್

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !

ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.