ದೊಡ್ಡವರ ಸಣ್ಣ ಮಾತಿಗೆ ಮೌನವೇ ಉತ್ತರ: ಸಚಿವ ಕೋಟ
Team Udayavani, Apr 12, 2022, 6:15 AM IST
ಉಡುಪಿ: ದೊಡ್ಡರ ಸಣ್ಣತನದ ಮಾತಿಗೆ ಮೌನವೇ ಉತ್ತರ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟೀಕೆಗೆ ಮೌನವಾಗಿರುವುದೇ ಉತ್ತರ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಆದಿಉಡುಪಿ ಹೆಲಿಪ್ಯಾಡ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಆಗಾಗ್ಗೆ ವಾಗ್ಧಾಳಿ ನಡೆಸುವುದು ಸಹಜ. ವಾದ, ಆರ್ಭಟದಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ವಾಸ್ತವಿಕ ವಿಚಾರದ ನೆಲೆಗಟ್ಟಿನಲ್ಲಿ ಉತ್ತಮ, ಸಮರ್ಥ ಆಡಳಿತದ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಗುಡುಗು, ಸಿಡಿಲು ಮಿಂಚು ಸಹಜ. ಜನ ಸರಕಾರದ ಕಾರ್ಯಕ್ರಮಗಳನ್ನು ಮೆಚ್ಚಿಕೊಂಡಿದ್ದಾರೆ. ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ಸಮರ್ಥರಾಗಿದ್ದಾರೆ ಎಂದರು.
ದೊಡ್ಡವರು ಆಡುವ ಸಣ್ಣ ಮಾತಿಗೆ ಉತ್ತರ ಇರುವುದಿಲ್ಲ. ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿ, ವಿಪಕ್ಷದ ನಾಯಕರಾಗಿದ್ದಾರೆ. ಅವರು ರಾಜಕಾರಣದಲ್ಲಿ ತುಂಬ ದೊಡ್ಡವರು ಎಂದುಕೊಂಡಿದ್ದೇನೆ. ಅವರಾಡುವ ಸಣ್ಣ ಮಾತಿಗೆ ಮುಖ್ಯಮಂತ್ರಿಗಳ ಮೌನವೇ ಅರ್ಥಗರ್ಭಿತ ಎಂದರು.
ಹಿಜಾಬ್ ತೀರ್ಪಿನ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಅವರಲ್ಲಿ ಅಭಿಪ್ರಾಯ ಭೇದವಿದ್ದರೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬಹುದು. ಆದರೆ ನ್ಯಾಯಾಲಯದ ಆದೇಶ ಪಾಲನೆ ಮಾಡಬೇಡಿ ಎನ್ನಲು ಯಾರಿಂದಲೂ ಆಗದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.