ಟ್ವಿಟರ್ ಮುಖ್ಯ ಕಚೇರಿ ನಿರಾಶ್ರಿತರ ತಾಣವಾಗಲಿ ಎಂದು ಟ್ವೀಟ್ ಮಾಡಿದ್ದ ಎಲಾನ್ ಮಸ್ಕ್
Team Udayavani, Apr 12, 2022, 7:45 AM IST
ವಾಷಿಂಗ್ಟನ್: ಉದ್ಯಮಿ ಎಲಾನ್ ಮಸ್ಕ್ ಟ್ವಿಟರ್ ಸಂಸ್ಥೆಯ ಶೇ. 9 ಷೇರು ಖರೀದಿ ಮಾಡಿದ ಬೆನ್ನಲ್ಲೇ ಸಂಸ್ಥೆಯಲ್ಲಿ ತರಬೇಕಾದ ಅನೇಕ ಬದಲಾವಣೆಗಳ ಬಗ್ಗೆ ಟ್ವೀಟ್ ಮಾಡಿದ್ದಾರೆ.
“ಟ್ವಿಟರ್‌ನ ಪ್ರಧಾನ ಕಚೇರಿಯಲ್ಲಿ ಯಾರೂ ಕೆಲಸ ಮಾಡುವುದಿಲ್ಲ. ಹಾಗಾಗಿ ಅದನ್ನು ಹಾಗೆಯೇ ಬಿಡುವ ಬದಲು ನಿರಾಶ್ರಿತರ ಕೇಂದ್ರ ಮಾಡಬಹುದು’ ಎಂದು ಬರೆದುಕೊಂಡಿದ್ದಾರೆ.
ಇದಕ್ಕೆ ಅಮೆಜಾನ್ ಮುಖ್ಯಸ್ಥ ಜೆಫ್ ಬೆಜೋಸ್ ಕೂಡ ಪ್ರತಿಕ್ರಿಯಿಸಿ, “ಇದು ಉತ್ತಮ ಉಪಾಯ. ಅರ್ಧ ಭಾಗವನ್ನು ವಾಸಕ್ಕೆ ಯೋಗ್ಯ ಮಾಡಿಕೊಟ್ಟರೆ ಸಿಬಂದಿಗೂ ಸಹಾಯವಾಗುತ್ತದೆ’ ಎಂದಿದ್ದಾರೆ. ಇದಾದ ಕೆಲವೇ ಕ್ಷಣಗಳಲ್ಲಿ ಮಸ್ಕ್ ತಮ್ಮ ಟ್ವೀಟ್ ಡಿಲೀಟ್ ಮಾಡಿದ್ದಾರೆ.
ಮಂಡಳಿಯಲ್ಲಿ ಮಸ್ಕ್ ಗಿಲ್ಲಾ ಸ್ಥಾನ: ಇನ್ನೊಂದೆಡೆ, ಮಸ್ಕ್ ಅವರನ್ನು ಟ್ವಿಟರ್ ಸಂಸ್ಥೆಯ ನಿರ್ದೇಶಕರ ಮಂಡಳಿಗೆ ಸೇರಿಸಿ ಕೊಂಡಿದ್ದಾಗಿ ವರದಿಯಾಗಿತ್ತು. ಆದರೆ ಟ್ವಿಟರ್ ನಿರ್ದೇಶಕರ ಮಂಡಳಿಗೆ ಮಸ್ಕ್ ಸೇರಿಕೊಂಡಿಲ್ಲ ಎಂದು ಟ್ವಿಟರ್ ಸಿಇಒ ಪರಾಗ್ ಅಗರ್ವಾಲ್ ತಿಳಿಸಿದ್ದಾರೆ. ಎ. 9ರಂದು ಅವರು ನಿರ್ದೇ ಶಕರಾಗಿ ಅಧಿಕಾರ ಸ್ವೀಕರಿಸಬೇಕಿತ್ತು. ಆದರೆ ಅದರ ಹಿಂದಿನ ದಿನವೇ ಅವರು ಆ ಸ್ಥಾನ ವಹಿಸಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ ಎಂದು ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.